ಪುನೀತ್ ರಾಜ್ಕುಮಾರ್ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರ ಟೈಟಲ್ ಟೀಸರ್ಅನ್ನು ನವೆಂಬರ್ 1ಕ್ಕೆ ರಿಲೀಸ್ ಮಾಡಬೇಕು ಎಂದು ಅವರು ಅಂದುಕೊಂಡಿದ್ದರು. ಅದಕ್ಕೂ ಮೊದಲೇ ಪುನೀತ್ ನಿಧನ ಹೊಂದಿದರು. ಈಗ ಪುನೀತ್ ಕಂಡ ಕನಸು ಅನಾವರಣವಾಗುವ ಸಮಯ ಬಂದಿದೆ. ಇಂದು (ಡಿಸೆಂಬರ್ 6) ಬೆಳಗ್ಗೆ 10 ಗಂಟೆಗೆ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್ ಆಗಲಿದೆ.
‘ವೈಲ್ಡ್ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್ ಇಂದು ಮುಂಜಾನೆ 10 ಗಂಟೆಗೆ ಲಾಂಚ್ ಆಗುತ್ತಿದೆ. ಈ ಬಗ್ಗೆ ಬರೆದುಕೊಂಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್. ‘ಹಿಂದೆಂದೂ ಕಾಣದ ಸಿನಿಮಾ ಅನುಭವ. PRK ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ ಅವರು.
ನವೆಂಬರ್ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್ ಮಾಡಬೇಕು ಎಂದು ಪುನೀತ್ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್ ರಿಲೀಸ್ ಆಗಿಲ್ಲ. ಇಂದು ಆ ಟೀಸರ್ ರಿಲೀಸ್ ಆಗುತ್ತಿದೆ.
ಹಿಂದೆಂದೂ ಕಾಣದ ಸಿನಿಮಾ ಅನುಭವ!
ನಿಮ್ಮ ಮುಂದೆ ನಾಳೆ @PRKAudio YouTube channelನಲ್ಲಿ.A cinematic experience like never before!
Releasing tomorrow on PRK Audio YouTube channel.@PuneethRajkumar @amoghavarsha @AJANEESHB @PRK_Productions #mudskipper pic.twitter.com/JoSCSDahQI— Ashwini Puneeth Rajkumar (@ashwinipuneet) December 5, 2021
‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಈಗ ಅವರಿಲ್ಲದೆ ಈ ಟೀಸರ್ ರಿಲೀಸ್ ಆಗುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಇದನ್ನೂ ಓದಿ: ಪುನೀತ್ ಕಂಡ ಕನಸಿನ ಟೈಟಲ್ ಟೀಸರ್ ರಿಲೀಸ್ ದಿನಾಂಕ ಘೋಷಣೆ ಮಾಡಿದ ಅಶ್ವಿನಿ
Published On - 6:30 am, Mon, 6 December 21