AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ಪುನೀತ್​ ಎಕ್ಸ್​ಕ್ಲೂಸಿವ್​ ವಿಡಿಯೋ: ‘ಗಂಧದ ಗುಡಿ’ ಶೂಟಿಂಗ್​ ವೇಳೆ ಹೇಗಿತ್ತು ನೋಡಿ ಅಪ್ಪು ನಗುವಿನ ಕ್ಷಣ

Gandhada Gudi Making Video: ಅಕ್ಟೋಬರ್ 28ರಂದು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲೇ ಬಿಡುಗಡೆ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಪುನೀತ್​ ರಾಜ್​ಕುಮಾರ್​​ ಅಭಿಮಾನಿಗಳು ಕಾದಿದ್ದಾರೆ.

Gandhada Gudi: ಪುನೀತ್​ ಎಕ್ಸ್​ಕ್ಲೂಸಿವ್​ ವಿಡಿಯೋ: ‘ಗಂಧದ ಗುಡಿ’ ಶೂಟಿಂಗ್​ ವೇಳೆ ಹೇಗಿತ್ತು ನೋಡಿ ಅಪ್ಪು ನಗುವಿನ ಕ್ಷಣ
‘ಗಂಧದ ಗುಡಿ’ ಮೇಕಿಂಗ್ ವಿಡಿಯೋದಲ್ಲಿ ಪುನೀತ್​​
TV9 Web
| Edited By: |

Updated on:Sep 27, 2022 | 12:05 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅವರು ಇಲ್ಲ ಎಂಬ ಕೊರಗು ಪ್ರತಿಕ್ಷಣವೂ ಕಾಡುತ್ತದೆ. ನಿಧನರಾಗುವುದಕ್ಕೂ ಮುನ್ನ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ತೊಡಗಿಕೊಂಡಿದ್ದರು. ಕರುನಾಡಿನ ವನ್ಯಜೀವಿಗಳು ಹಾಗು ಅರಣ್ಯದ ಬಗ್ಗೆ ನಿರ್ಮಾಣ ಆಗಿರುವ ಈ ಡಾಕ್ಯುಮೆಂಟರಿ​ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇತ್ತು. ಅದು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು ಎಂಬುದು ನೋವಿನ ಸಂಗತಿ. ಸದ್ಯದಲ್ಲೇ ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಇದರ ಶೂಟಿಂಗ್​ ವೇಳೆ ಪುನೀತ್​ ಎಷ್ಟು ಖುಷಿಯಾಗಿ ಕಾಲ ಕಳೆದಿದ್ದರು ಎಂಬುದನ್ನು ತೋರಿಸುವ ಎಕ್ಸ್​ಕ್ಲೂಸಿವ್​ ವಿಡಿಯೋ (Gandhada Gudi Making Video) ಇಲ್ಲಿದೆ.

ಅಕ್ಟೋಬರ್ 28ರಂದು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲೇ ಬಿಡುಗಡೆ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ದೊಡ್ಡ ಮಟ್ಟದಲ್ಲಿಯೇ ಇದನ್ನು ರಿಲೀಸ್​ ಮಾಡಲಾಗುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಸ್ಟುಡಿಯೋಸ್​’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ.

‘ಗಂಧದಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆಯನ್ನು 2021ರ ನವೆಂಬರ್ ತಿಂಗಳಲ್ಲಿ ರಿಲೀಸ್ ಮಾಡಲು ಪುನೀತ್ ಅವರು ಪ್ಲ್ಯಾನ್​ ಮಾಡಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ಈ ಸಾಕ್ಷ್ಯಚಿತ್ರ ರಿಲೀಸ್ ಮಾಡುವ ಜವಾಬ್ದಾರಿಯನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ತೆಗೆದುಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಆಕರ್ಷಕ ಪೋಸ್ಟರ್​ ಮೂಲಕ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಯಿತು.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಅಕ್ಟೋಬರ್​ 29ಕ್ಕೆ ಒಂದು ವರ್ಷ ಕಳೆಯಲಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್ ಆಗಲಿರುವುದು ನಿಜಕ್ಕೂ ಅಭಿಮಾನಿಗಳ ಪಾಲಿಗೆ ಎಮೋಷನಲ್​ ಸಂಗತಿ. ಪುನೀತ್​ ಬದುಕಿನಲ್ಲಿ ಒಂದು ವಿಶೇಷ ಪ್ರಯತ್ನವಾಗಿ ಈ ಸಾಕ್ಷ್ಯಚಿತ್ರ ಮೂಡಿಬಂದಿದೆ. ಕರ್ನಾಟಕದ ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳ ಜಗತ್ತು ಇದರಲ್ಲಿ ಹೇಗೆ ಸೆರೆಯಾಗಿದೆ ಎಂಬುದನ್ನು ದೊಡ್ಡ ಪರದೆಯಲ್ಲಿ ನೋಡುವ ಕುತೂಹಲ ಎಲ್ಲರಲ್ಲೂ ಮೂಡಿದೆ.

ಪುನೀತ್​ ರಾಜ್​ಕುಮಾರ್ ನಟನೆಯ ‘ಲಕ್ಕಿ ಮ್ಯಾನ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯಿತು. ಅದನ್ನು ನೋಡಿದ ಬಳಿಕ ಫ್ಯಾನ್ಸ್​ ಭಾವುಕರಾದರು. ‘ಗಂಧದ ಗುಡಿ’ ಬಿಡುಗಡೆ ಆದಾಗಲೂ ಖಂಡಿತವಾಗಿ ಎಲ್ಲರೂ ಎಮೋಷನಲ್​ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Tue, 27 September 22

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ