Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

Puneeth Rajkumar | Ganesha Idol: ‘ಪ್ರಕೃತಿ ಆರ್ಟ್​ ಸೆಂಟರ್​’ ಕಲಾವಿದರ ಕಲ್ಪನೆಯಲ್ಲಿ ಈ ವಿಶೇಷವಾದ ಮೂರ್ತಿ ಮೂಡಿಬಂದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಇದು ತುಂಬ ಇಷ್ಟವಾಗಿದೆ.

Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​
ಪುನೀತ್-ಗಣಪ
Follow us
TV9 Web
| Updated By: Digi Tech Desk

Updated on:Oct 21, 2022 | 12:43 PM

ಪ್ರತಿ ಬಾರಿ ಗಣೇಶ ಚತುರ್ಥಿಗೆ ಬಗೆಬಗೆಯ ಗಣಪನ ವಿಗ್ರಹಗಳು (Ganesha Idol) ರಾರಾಜಿಸುತ್ತವೆ. ನೂರಾರು ಪರಿಕಲ್ಪನೆಯಲ್ಲಿ ಗಣೇಶನ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಒಂದಕ್ಕಿಂತ ಒಂದು ಭಿನ್ನವಾಗಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಚಂದ. ಆಯಾ ವರ್ಷದಲ್ಲಿ ಫೇಮಸ್​ ಆದ ಸಿನಿಮಾಗಳ ರೀತಿಯಲ್ಲೂ ಗಣಪ ಮೂಡಿಬರುವುದುಂಟು. ಈಗ ವರ್ಷ ಕೂಡ ಕೆಲವು ಪ್ರಯೋಗಗಳು ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಕೆಲವು ಕಲಾವಿದರು ವಿಶೇಷವಾದ ಗಣೇಶನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಆ ಪೈಕಿ ಒಂದು ಕಲಾಕೃತಿ ಗಮನ ಸೆಳೆಯುತ್ತಿದೆ. ಅದನ್ನು ರಾಘವೇಂದ್ರ ರಾಜ್​ಕುಮಾರ್ (Raghavendra Rajkumar)​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನೇಕರಿಗೆ ಇದು ತುಂಬ ಇಷ್ಟ ಆಗಿದೆ. ಆದರೆ ಕೆಲವು ಅಭಿಮಾನಿಗಳು ದೇವರ ಬಗ್ಗೆ ಕೋಪ ವ್ಯಕ್ತಪಡಿಸಿದ್ದಾರೆ. ಪುನೀತ್​ ರಾಜ್​ಕುಮಾರ್ ಅವರನ್ನು ಕಸಿದುಕೊಂಡ ದೇವರ ಬಗ್ಗೆ ಫ್ಯಾನ್ಸ್​ ಗರಂ ಆಗಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಮ್ಮ ನಡುವೆ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಕಷ್ಟ ಆಗುತ್ತಿದೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಏಕಾಏಕಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ. ಆ ನೋವು ಎಂದಿಗೂ ಮಾಸುವಂಥದ್ದಲ್ಲ. ಅಭಿಮಾನಿಗಳು ಪ್ರತಿ ದಿನವೂ ಪುನೀತ್​ ರಾಜ್​ಕುಮಾರ್ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ. ಒಂದಿಲ್ಲೊಂದು ರೂಪದಲ್ಲಿ ಫ್ಯಾನ್ಸ್​ ಎದುರು ಅಪ್ಪು ಬರುತ್ತಾರೆ.

‘ಪ್ರಕೃತಿ ಆರ್ಟ್​ ಸೆಂಟರ್​’ ಕಲಾವಿದರ ಕಲ್ಪನೆಯಲ್ಲಿ ಈ ವಿಶೇಷವಾದ ಮೂರ್ತಿ ಮೂಡಿಬಂದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಇದು ತುಂಬ ಇಷ್ಟವಾಗಿದೆ. ಫೇಸ್​ಬುಕ್​ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ‘ಎಂಥಾ ಅದ್ಭುತ ಯೋಚನೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅಭಿಮಾನಿಗಳು ಈ ಪೋಸ್ಟ್​ಗೆ ಹಲವು ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಪುನೀತ್​ ಅವರನ್ನು ಇಷ್ಟು ಬೇಗ ಕರೆಸಿಕೊಂಡಿದ್ದಕ್ಕಾಗಿ ಅನೇಕ ಅಭಿಮಾನಿಗಳು ದೇವರನ್ನು ದೂಷಿಸುತ್ತಿದ್ದಾರೆ. ‘ದೇವರು ನಮ್ಮ ಪಾಲಿಗೆ ಇಲ್ಲ. ಅವನು ಕ್ರೂರಿ. ನಮ್ಮ ಅಪ್ಪುವನ್ನು ನಮ್ಮಿಂದ ಕಿತ್ತುಕೊಂಡ. ಅಪ್ಪು ಇಲ್ಲದೇ ಯಾವ ಹಬ್ಬನೂ ಮಾಡಲ್ಲ. ಮಾರ್ಚ್​ 17 ಮಾತ್ರ ನಮಗೆ ಹಬ್ಬ’ ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು, ‘ಈ ಕಲಾವಿದರ ನಂಬರ್​ ಕೊಡಿ, ನಮ್ಮ ಏರಿಯಾದಲ್ಲಿ ಈ ಸಲ ಇದೇ ಗಣಪನನ್ನು ಕೂರಿಸುತ್ತೇವೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

Published On - 9:19 pm, Thu, 21 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ