ಪುನೀತ್​ಗೆ ತೀವ್ರ ಹೃದಯಾಘಾತವಾಗಿದೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನನ್ನೂ ಹೇಳೋಕೆ ಆಗಲ್ಲ; ಆಸ್ಪತ್ರೆ ವೈದ್ಯರು

Puneeth Rajkumar Health Bulletin: ‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ’ ಎಂದು ವೈದ್ಯರು ತಿಳಿಸಿದ್ದಾರೆ. 

ಪುನೀತ್​ಗೆ ತೀವ್ರ ಹೃದಯಾಘಾತವಾಗಿದೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನನ್ನೂ ಹೇಳೋಕೆ ಆಗಲ್ಲ; ಆಸ್ಪತ್ರೆ ವೈದ್ಯರು
ಪುನೀತ್​ ರಾಜಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 29, 2021 | 1:42 PM

ನಟ ಪುನೀತ್ ರಾಜ್​ಕುಮಾರ್ ಅವರಿಗೆ ತೀವ್ರ ಪ್ರಮಾಣದಲ್ಲಿ ಹಾರ್ಟ್​ ಅಟ್ಯಾಕ್​ ಆಗಿದೆ. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿಕ್ರಮ್​ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಮೂಡಿಸಿದೆ. 

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದಾರೆ.

ಫಿಟ್ನೆಸ್ ಬಗ್ಗೆ ಪುನೀತ್ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ಗಾಗಿ ನಿರೀಕ್ಷಿಸಲಾಗುತ್ತಿದೆ.

ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ಆರೋಗ್ಯದ ಸ್ಥಿತಿ ಗಂಭೀರ; ಅಳುತ್ತಲೇ ಆಸ್ಪತ್ರೆಗೆ ಬಂದ ಶಿವರಾಜ್​ಕುಮಾರ್​

Published On - 1:28 pm, Fri, 29 October 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್