ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಫಿಟ್ನೆಸ್ ಬಗ್ಗೆ ಇಷ್ಟೊಂದು ಗಮನ ಹರಿಸುತ್ತಿದ್ದ ಪುನೀತ್ ಏಕಾಏಕಿ ಮೃತಪಟ್ಟಿದ್ದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಶಾಕಿಂಗ್ ವಿಚಾರ. ಪುನೀತ್ ಅವರ ಸಾವು ಚಿರಂಜೀವಿ ಸರ್ಜಾ ಹೃದಯಾಘಾತದ ಘಟನೆಯನ್ನು ನೆನಪಿಸಿದೆ.
ಅದು 2020ರ ಜೂನ್ 7. ತುಂಬಾನೇ ಆರೋಗ್ಯವಾಗಿದ್ದ ಚಿರಂಜೀವಿ ಸರ್ಜಾ ಅವರಿಗೆ ಹೃದಾಯಾಘಾತ ಸಂಭವಿಸಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಲೇ ಇಲ್ಲ. ಅವರು ಮೃತಪಟ್ಟಿದ್ದರು. ಈ ವಿಚಾರ ಶಾಕಿಂಗ್ ಆಗಿತ್ತು. ಯಾವುದೇ ಹೃದಯದ ಸಮಸ್ಯೆ ಇಲ್ಲದೆ ಇದ್ದ ಚಿರು ಅವರು ಹೀಗೆ ಮೃತಪಟ್ಟಿದ್ದು ನಿಜಕ್ಕೂ ಶಾಕಿಂಗ್ ಆಗಿತ್ತು. ಈಗ ಪುನೀತ್ ನಿಧನ ಕೂಡ ಜೂನ್ 7ರ ಘಟನೆಯನ್ನು ನೆನಪಿಸಿದೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.
ಫಿಟ್ನೆಸ್ ಬಗ್ಗೆ ಪುನೀತ್ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್ನಲ್ಲಿ ವರ್ಕೌಟ್ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರು ಏಕಾಏಕಿ ಮೃತಪಟ್ಟಿದ್ದರು. ಪುನೀತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ.
ಪುನೀತ್ ಸಾವಿನ ನಂತರದಲ್ಲಿ ಹೃದಯದ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸುವಂತೆ ಜಾಗೃತಿ ಮೂಡಿಸುವ ಕೆಲಸ ಸೋಶಿಯಲ್ ಮೀಡಿಯಾದಲ್ಲಿ ಆಗುತ್ತಿದೆ. ಪುನೀತ್ ಈ ಬಗ್ಗೆ ಹೆಚ್ಚು ಗಮನ ಹರಿಸಿಲ್ಲವೇ ಎನ್ನುವ ಪ್ರಶ್ನೆ ಮೂಡುತ್ತಿದೆ.
ಇದನ್ನೂ ಓದಿ: ಪಿಆರ್ಕೆ ಪ್ರೊಡಕ್ಷನ್ ಬಗ್ಗೆ ಪುನೀತ್ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ