Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

Puneeth Rajkumar Heart Attack: ಪುನೀತ್​ ರಾಜ್​ಕುಮಾರ್​ ಅವರಿಗೆ ಶುಕ್ರವಾರ (ಅ,29) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆ ಸಂದರ್ಭದಲ್ಲಿ ವಿಡಿಯೋ ಮಾಡಲಾಗಿತ್ತಾ?

Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​
ವೈರಲ್​ ಆಗಿರುವ ವಿಡಿಯೋದ ದೃಶ್ಯಗಳು
Follow us
TV9 Web
| Updated By: ಮದನ್​ ಕುಮಾರ್​

Updated on: Oct 30, 2021 | 11:19 AM

ನಟ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಶುಕ್ರವಾರ (ಅ.29) ಈ ಸುದ್ದಿ ತಿಳಿದಾಗಿನಿಂದ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕೋಟ್ಯಂತರ ಜನರು ಪುನೀತ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಶ್ರದ್ಧಾಂಜಲಿ ಸಲ್ಲಿಸುತ್ತ, ಅಪ್ಪು ಬಗೆಗಿನ ಮಾತುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಮ್ಮ ನೆಚ್ಚಿನ ನಟನ ಒಳ್ಳೆಯ ಗುಣಗಳನ್ನು ನೆನಪಿಸಿಕೊಂಡು ಸಂಕಟಪಡುತ್ತಿದ್ದಾರೆ. ಇಂಥ ಹೃದಯವಂತನಿಗೆ ಹೃದಯಾಘಾತ ಆಗಿದೆ ಎಂದರೆ ಯಾರಿಗೂ ನಂಬಲಾಗುತ್ತಿಲ್ಲ. ಈ ನಡುವೆ ಪುನೀತ್​ ಅವರದ್ದು ಎಂದು ಹೇಳಲಾದ ಒಂದು ವಿಡಿಯೋ ವೈರಲ್​ ಆಗುತ್ತಿದೆ. ಸೋಶಿಯಲ್​ ಮೀಡಿಯಾ ಹಾಗೂ ಎಲ್ಲರ ಮೊಬೈಲ್​ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ. ಆದರೆ ಅದು ಪುನೀತ್​ ಅವರ ವಿಡಿಯೋ ಅಲ್ಲ!

ಪುನೀತ್​ ರಾಜ್​ಕುಮಾರ್​ ಅವರಿಗೆ ಶುಕ್ರವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ವಿಕ್ರಂ ಆಸ್ಪತ್ರೆಗೆ ಬರುವುದಕ್ಕೂ ಮುನ್ನವೇ ಅವರಿಗೆ ತೀವ್ರ ಹೃದಯಾಘಾತ ಆಗಿತ್ತು. ಈಗ ಹರಿದಾಡುತ್ತಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವರ್ಕೌಟ್​ ಮಾಡುತ್ತಿರುವಾಗ ಎದೆನೋವಿನಿಂದ ಕುಸಿದುಬಿದ್ದಿರುವ ದೃಶ್ಯವಿದೆ. ಆದರೆ ಅದು ಪುನೀತ್​ ಅಲ್ಲವೇ ಅಲ್ಲ.

ಕೆಲವು ತಿಂಗಳ ಹಿಂದೆ ಬೆಂಗಳೂರಿನ ಜಿಮ್​ವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಆಗಿತ್ತು. ವರ್ಕೌಟ್​ ಮಾಡುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಅಲ್ಲಿಯೇ ಕುಸಿದುಬಿದ್ದು, ಕೊನೆಯುಸಿರು ಎಳೆದಿದ್ದರು. ಆ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದೇ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದರಲ್ಲಿ ಇರುವುದು ಪುನೀತ್​ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಅದೇ ರೀತಿ ಇನ್ನೊಂದು ವಿಡಿಯೋ ಕೂಡ ವೈರಲ್​ ಆಗಿದೆ. ಪುನೀತ್​ ರಾಜ್​ಕುಮಾರ್​ ಅವರು ಗುರುವಾರ (ಅ.28) ರಾತ್ರಿ ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅದೇ ಪಾರ್ಟಿಯಲ್ಲಿ ಅವರು ಹಾಡು ಹೇಳಿ ಸಂಭ್ರಮಿಸಿದ್ದರು ಎನ್ನಲಾದ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಅದು ಪುನೀತ್​ ಅವರ ಕೊನೇ ವಿಡಿಯೋ ಎಂದೆಲ್ಲ ಹೇಳಲಾಗುತ್ತಿದೆ. ಆದರೆ ಅದು ಸತ್ಯವಲ್ಲ. ಹಳೆಯ ವಿಡಿಯೋ ಇದಾಗಿದ್ದು, ಗುರುಕಿರಣ್​ ಬರ್ತ್​ಡೇ ಪಾರ್ಟಿಯದ್ದಲ್ಲ ಎಂಬುದು ಖಚಿತವಾಗಿದೆ.

ಪುನೀತ್​ ರಾಜ್​ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಲಕ್ಷಾಂತರ ಅಭಿಮಾನಿಗಳು ಬಂದು ನೆಚ್ಚಿನ ನಟನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಶನಿವಾರ (ಅ.30) ಪೂರ್ತಿ ದಿನ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಬಂದು ಪುನೀತ್​ಗೆ ನಮನ ಸಲ್ಲಿಸುತ್ತಿದ್ದಾರೆ. ಕಂಬನಿ ಮಿಡಿಯುತ್ತ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಇದನ್ನೂ ಓದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar: ‘ನನ್ನ ತಮ್ಮ ರಾಯಲ್​ ಆಗಿಯೇ ಇರುತ್ತಾನೆ’; ಕ್ರೂರ ವಿಧಿಯಿಂದ ಸುಳ್ಳಾಯ್ತು ಶಿವಣ್ಣನ ಈ ಮಾತು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ