ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

James Movie Total Collection: ಭಾನುವಾರ ಕಚೇರಿಗಳಿಗೆ, ಶಾಲಾ-ಕಾಲೇಜಿಗೆ ರಜೆ ಇರುತ್ತದೆ. ಹೀಗಾಗಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ನೋಡೋಕೆ ಚಿತ್ರಮಂದಿರಕ್ಕೆ ತೆರಳಬಹುದು.

ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​
ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 20, 2022 | 8:35 PM

ಪುನೀತ್ ರಾಜ್​ಕುಮಾರ್  (Puneeth Rajkumar) ನಟನೆಯ ‘ಜೇಮ್ಸ್’ ಸಿನಿಮಾ (James Movie) ಅಬ್ಬರ ಜೋರಾಗಿದೆ. ವಿಶ್ವಮಟ್ಟದಲ್ಲಿ ರಿಲೀಸ್ ಆದ ಈ ಸಿನಿಮಾ ಸಾಕಷ್ಟು ಕ್ರೇಜ್ ಹುಟ್ಟುಹಾಕಿತ್ತು. ಈ ಚಿತ್ರವನ್ನು ಫ್ಯಾನ್ಸ್​ ಭಾವುಕರಾಗಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಹೀಗಾಗಿ,  ಬಾಕ್ಸ್​ ಆಫೀಸ್​ನಲ್ಲಿ (Box Office) ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹಾಗಾದರೆ, ಈ ಸಿನಿಮಾದ ಒಟ್ಟು ಕಲೆಕ್ಷನ್​ ಎಷ್ಟು? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

‘ಜೇಮ್ಸ್’ ಸಿನಿಮಾ ಮೊದಲ ದಿನ ಬರೋಬ್ಬರಿ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭವಾಗಿದ್ದರಿಂದ ಫಸ್ಟ್​ ಡೇ ಬಾಕ್ಸ್​ ಆಫೀಸ್​ನಲ್ಲಿ ‘ಜೇಮ್ಸ್’ ಅಬ್ಬರ ಜೋರಾಗಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಮಾರ್ಚ್​ 18) ಈ ಚಿತ್ರ 18 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಮೂರನೇ ದಿನ ಅಂದರೆ, ಶನಿವಾರ (ಮಾರ್ಚ್​ 19) ಚಿತ್ರದ ಗಳಿಕೆ ಕೊಂಚ ತಗ್ಗಿದೆ. ಶನಿವಾರದ ಬಾಕ್ಸ್​ ಆಫೀಸ್​ ಲೆಕ್ಕಾಚಾರದ ಪ್ರಕಾರ ‘ಜೇಮ್ಸ್​’ 9 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಕಲೆಕ್ಷನ್​ 57 ಕೋಟಿ ರೂಪಾಯಿ ಆಗಿದೆ ಎಂದು ವರದಿ ಆಗಿದೆ.

ಇಂದು (ಮಾರ್ಚ್​ 20) ಭಾನುವಾರ. ಕಚೇರಿಗಳಿಗೆ, ಶಾಲಾ-ಕಾಲೇಜಿಗೆ ರಜೆ ಇರುತ್ತದೆ. ಹೀಗಾಗಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ನೋಡೋಕೆ ಚಿತ್ರಮಂದಿರಕ್ಕೆ ತೆರಳಬಹುದು. ಇದರಿಂದ ಚಿತ್ರದ ಕಲೆಕ್ಷನ್​ ಹೆಚ್ಚುವ ಸಾಧ್ಯತೆ ಇದೆ.

ಥಿಯೇಟರ್ ಕಲೆಕ್ಷನ್, ಸಿನಿಮಾ ಹಕ್ಕು ಸೇರಿ ‘ಜೇಮ್ಸ್​’ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ಹೇಳಲಾಗಿತ್ತು. ಇದನ್ನು ನಿರ್ಮಾಪಕ ಕಿಶೋರ್ ಪತ್ತಿಕೊಂಡ ಒಪ್ಪಿಕೊಂಡಿದ್ದಾರೆ. ಈ ಮೂಲಕ ‘ಜೇಮ್ಸ್’ ಸಿನಿಮಾ ಹೊಸ ದಾಖಲೆ ಸೃಷ್ಟಿ ಮಾಡಿದೆ. ‘ಜೇಮ್ಸ್’ ಚಿತ್ರಕ್ಕೆ ಒಟಿಟಿ ಹಾಗೂ ಟಿವಿಯಲ್ಲೂ ಬೇಡಿಕೆ ಇದೆ. ಈ ಕಾರಣಕ್ಕೆ ಚಿತ್ರಕ್ಕೆ ದೊಡ್ಡ ಬೇಡಿಕೆ ಬಂದಿದೆ ಎನ್ನಲಾಗಿದೆ. ಎಲ್ಲಾ ಸೇರಿ ಸಿನಿಮಾ ಉತ್ತಮ ಕಲೆಕ್ಷನ್​ ಮಾಡಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಚೇತನ್​ ಕುಮಾರ್​ ಅವರು ‘ಜೇಮ್ಸ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್​ ನಟಿಸಿದ್ದಾರೆ. ಕಿಶೋರ್​ ಪತ್ತಿಕೊಂಡ ಅವರು ಅದ್ದೂರಿಯಾಗಿ ಈ ಸಿನಿಮಾ ನಿರ್ಮಿಸಿದ್ದಾರೆ. ನಿರ್ಮಾಪಕರಿಗೆ ‘ಜೇಮ್ಸ್​’ ಚಿತ್ರದಿಂದ ಭರ್ಜರಿ ಲಾಭ ಆಗಿದೆ.

ಮೊದಲ ದಿನದ ಟೆಕೆಟ್​ಗಳು ನಾಲ್ಕು ದಿನ ಮುನ್ನವೇ ಸೋಲ್ಡ್​ ಔಟ್​ ಆಗಿದ್ದರಿಂದ ಅನೇಕರಿಗೆ ಟಿಕೆಟ್​ ಸಿಗಲಿಲ್ಲ. ಹಾಗಾಗಿ ಫಸ್ಟ್​ ಡೇ ಫಸ್ಟ್​ ಶೋ ನೋಡಲು ಸಾಧ್ಯವಾಗದೇ ಇರುವವರು ಶುಕ್ರವಾರ ಮತ್ತು ವೀಕೆಂಡ್​ನಲ್ಲಿ ಈ ಸಿನಿಮಾವನ್ನು ಕಣ್ತುಂಬಿಕೊಂಡಿದ್ದಾರೆ. ಇದರಿಂದ ಸಹಜವಾಗಿಯೇ ಶನಿವಾರ ಮತ್ತು ಭಾನುವಾರ ‘ಜೇಮ್ಸ್​’ ಚಿತ್ರಕ್ಕೆ ಉತ್ತಮ ಕಲೆಕ್ಷನ್​ ಆಗಿದೆ.

ಇದನ್ನೂ ಓದಿ: ‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

‘ದಿ ಕಾಶ್ಮೀರ್​ ಫೈಲ್ಸ್​’ಗಿಂತಲೂ ಹೆಚ್ಚು IMDb ರೇಟಿಂಗ್​ ಪಡೆದ ‘ಜೇಮ್ಸ್​’; 10ಕ್ಕೆ 9.9 ನೀಡಿದ ಪ್ರೇಕ್ಷಕರು

Published On - 8:03 pm, Sun, 20 March 22

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ