ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

Puneeth Rajkumar: ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ‌ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ‌ ನಿರ್ಧಾರ ಮಾಡಿದರು.

ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್
ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್ ಅಪ್ಪುಗೆ ನುಡಿನಮನ ಸಲ್ಲಿಸಿದರು
Follow us
TV9 Web
| Updated By: preethi shettigar

Updated on:Nov 09, 2021 | 10:07 AM

ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊನ್ನಾಳಿ ಪಟ್ಟಣದಲ್ಲಿ ನಿನ್ನೆ (ನವೆಂಬರ್ 8) ತಡರಾತ್ರಿ ವರೆಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ತಮ್ಮ ಮಧುರ ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್, ಅಪ್ಪುಗೆ ನುಡಿನಮನ ಸಲ್ಲಿಸಿದರು. ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ‌ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ‌ ನಿರ್ಧಾರ ಮಾಡಿದರು. ಜತೆಗೆ ಶಾಸಕರಿಗೆ ಅವಳಿ ತಾಲೂಕಿನ 500 ಜನರು‌ ಸಾಥ್ ನೀಡಿದ್ದು, ನೇತ್ರದಾನಕ್ಕೆ ಕೈಜೋಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅವಳಿ ತಾಲೂಕಿನಲ್ಲಿ ಐದು ಸಾವಿರ ಜನರು ನೇತ್ರಾದಾನ ಮಾಡಿಸಲು ಸಚಿವ‌ ರೇಣುಕಾಚಾರ್ಯರು ಸಂಕಲ್ಪ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನೇತ್ರದಾನದಿಂದ ಪ್ರೇರಣೆಗೊಂಡ‌ ರೇಣುಕಾಚಾರ್ಯ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯರ ಇಡೀ ಕುಟುಂಬ ನೇತ್ರದಾನ ಮಾಡಲು ನಿರ್ಧಾರ ಈಗಾಗಲೇ ಮರಣೋತ್ತರವಾಗಿ ನೇತ್ರದಾನ ಮಾಡಲು ರೇಣುಕಾಚಾರ್ಯ ಕುಟುಂಬ ಶಿವಮೊಗ್ಗ ಮೂಲದ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಶಾಸಕರ ಅವಿಭಕ್ತ ಕುಟುಂಬದಲ್ಲಿ ಒಟ್ಟು 62 ಜನರಿದ್ದಾರೆ. ಈ 62 ಮಂದಿ ನೇತ್ರದಾನ ಮಾಡಲು ನೋಂದಣಿ ಮಾಡಿಸಿದ್ದಾರೆ ಎಂದು ರೇಣುಕಾರ್ಚಾರ್ಯರ ಪತ್ನಿ ಸುಮಾ ತಿಳಿಸಿದ್ದಾರೆ. ಹೊನ್ನಾಳಿಯಲ್ಲಿ ನಟ ಪುನೀತ್‌ಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನೇತ್ರದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ವಿಶೇಷ ನಮನ ಸಲ್ಲಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಹಾಗೂ ಟೆನ್ನಿಸ್ ಕೃಷ್ಣ ಭಾಗಿಯಾಗಿ ಪುನೀತ್ ಜೊತೆ ಕೆಲಸ ಮಾಡಿದ ನೆನಪುಗಳನ್ನು ಮೆಲುಕು ಹಾಕಿದರು. ವೇದಿಕೆ ಮೇಲೆ ಶಾಸಕ ರೇಣುಕಾಚಾರ್ಯ, ಪತ್ನಿ ಸುಮಾ, ಪುತ್ರ ಚಂದನ, ಪುತ್ರಿ ಚೇತನಾ ನೇತ್ರದಾನಕ್ಕೆ ಸಹಿ ಹಾಕಿದರು‌. ಇದೇ ವೇಳೆ ಗಾಯಕ ರಾಜೇಶ್ ಕೃಷ್ಣನ್ ಸೇರಿದಂತೆ ನೂರಾರು ಜನ ನೇತ್ರದಾನದ ಪತ್ರಕ್ಕೆ ಸಹಿ ಹಾಕಿದರು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿ, ಗಳಗಳನೆ ಅತ್ತ ಕಾಲಿವುಡ್​ ನಟ ಸಿದ್ದಾರ್ಥ್​

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ

Published On - 9:50 am, Tue, 9 November 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್