AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧನಕ್ಕೂ ಮುನ್ನ ಪುನೀತ್ ಮಾಡಿದ್ದ ಟ್ವೀಟ್​ ವೈರಲ್​; ಒಂದು ವರ್ಷದ ಬಳಿಕ ನನಸಾಗುತ್ತಿದೆ ಕನಸು

ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

ನಿಧನಕ್ಕೂ ಮುನ್ನ ಪುನೀತ್ ಮಾಡಿದ್ದ ಟ್ವೀಟ್​ ವೈರಲ್​; ಒಂದು ವರ್ಷದ ಬಳಿಕ ನನಸಾಗುತ್ತಿದೆ ಕನಸು
ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 27, 2022 | 9:01 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಂಡರೆ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳವರೆಗೂ ಅಚ್ಚುಮೆಚ್ಚು. ಈಗ ಅವರಿಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಪುನೀತ್ ನಮ್ಮ ಜೊತೆ ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳೋಕೆ ಯಾರೊಬ್ಬರೂ ಸಿದ್ಧರಿಲ್ಲ. ಅವರಿಲ್ಲ ಎಂದರೂ ಅವರು ಮಾಡಿದ ಕೆಲಸಗಳು ನಮ್ಮ ಮುಂದಿವೆ. ಈಗ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಇಂದು (ಅಕ್ಟೋಬರ್ 27) ಹಲವು ಕಡೆಗಳಲ್ಲಿ ಇದರ ಪ್ರೀಮಿಯರ್ ​ಶೋಗಳನ್ನು ಆಯೋಜನೆ ಮಾಡಲಾಗಿದ್ದು, ಟಿಕೆಟ್​ಗಳು ಸೋಲ್ಡ್​ಔಟ್ ಆಗಿವೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದ ವ್ಯಕ್ತಿ. ಕೇವಲ ನಟನೆ ಮಾತ್ರವಲ್ಲದೆ ನಿರ್ಮಾಣದಲ್ಲೂ ಬ್ಯುಸಿ ಇದ್ದರು. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಟ್ವೀಟ್ ಮಾಡಿದ್ದರು. ಇದರಲ್ಲಿ ನವೆಂಬರ್ 1ರಂದು ವಿಶೇಷ ಘೋಷಣೆ ಮಾಡುವ ವಿಚಾರ ತಿಳಿಸಿದ್ದರು. ಈ ಟ್ವೀಟ್ ಮಾಡಿದ ಎರಡೇ ದಿನಕ್ಕೆ ಪುನೀತ್ ನಿಧನ ಹೊಂದಿದರು.

ಇದನ್ನೂ ಓದಿ: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಅಕ್ಟೋಬರ್ 29ರಂದು ಪುನೀತ್​ಗೆ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅವರು ಮೃತಪಟ್ಟ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿತು. ಅವರನ್ನು ಕಳೆದುಕೊಂಡ ಚಿತ್ರರಂಗ ಬಡವಾಯಿತು. ಈಗ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ರಿಲೀಸ್ ಆಗುತ್ತಿದೆ. ಇದಕ್ಕೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಅಕ್ಟೋಬರ್ 29ರಂದು ಪುನೀತ್ ಪುಣ್ಯತಿಥಿ ಇರುವುದರಿಂದ ನಾನಾ ರೀತಿಯ ಸಮಾಜಿಮುಖಿ ಕಾರ್ಯಗಳನ್ನು ಮಾಡಲು ಪ್ಲ್ಯಾನ್ ರೂಪಿಸಲಾಗಿದೆ.

Published On - 8:57 am, Thu, 27 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ