AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar passes away: ಕನ್ನಡದ ಕೋಟ್ಯಾಧಿಪತಿ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಸೆಹ್ವಾಗ್, ಕುಂಬ್ಳೆ, ಹರ್ಭಜನ್ ಸಂತಾಪ

ಪುನೀತ್ ರಾಜ್​ಕುಮಾರ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Puneeth Rajkumar passes away: ಕನ್ನಡದ ಕೋಟ್ಯಾಧಿಪತಿ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಸೆಹ್ವಾಗ್, ಕುಂಬ್ಳೆ, ಹರ್ಭಜನ್ ಸಂತಾಪ
Puneeth RajKumar
TV9 Web
| Updated By: Vinay Bhat|

Updated on: Oct 29, 2021 | 3:11 PM

Share

ನಟ ಪುನೀತ್ ರಾಜ್ ಕುಮಾರ್ Puneeth Rajkumar (46) ಹೃದಯಾಘಾತದಿಂದ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ (Vikram Hospital) ನಿಧನರಾಗಿದ್ದಾರೆ. ಅವರಿಗೆ ಇಂದು ಪೂರ್ವಾಹ್ನ 11 ಗಂಟೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಇಸಿಜಿ ಮಾಡಿಸಿದಾಗ ಹೃದಯಾಘಾತ ಸಂಭವಿಸಿರುವುದು ದೃಢಪಟ್ಟಿತ್ತು. ತಕ್ಷಣವೆ ಅವರನ್ನು ವಿಕ್ರಂ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪುನೀತ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ (virender sehwag), ಹರ್ಭಜನ್ ಸಿಂಗ್, ಅನಿಲ್ ಕುಂಬ್ಳೆ (Anil Kumble), ವೆಂಕಟೇಶ್ ಪ್ರಸಾದ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ವಿರೇಂದ್ರ ಸೆಹ್ವಾಗ್, ‘ಪುನೀತ್ ರಾಜ್​ಕುಮಾರ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ವಿನಮ್ರ, ಸರಳ, ಸಜ್ಜನಿಕೆಯ ವ್ಯಕ್ತಿ ಇನ್ನಿಲ್ಲ ಎಂಬುದು ಭಾರತೀಯ ಚಿತ್ರರಂಗಕ್ಕೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಬರೆದುಕೊಂಡಿದ್ದಾರೆ.

ಇನ್ನು ಹರ್ಭಜನ್ ಸಿಂಗ್, ‘ಪುನೀತ್ ರಾಜ್​ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ನಿಜಕ್ಕೂ ಆಘಾತ ಉಂಟುಮಾಡಿದೆ. ಜೀವನವು ತುಂಬಾ ಅನಿರೀಕ್ಷಿತವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಕೊಡಲಿ’ ಎಂದು ಹೇಳಿದ್ದಾರೆ.

‘ಪುನೀತ್ ರಾಜ್‌ಕುಮಾರ್ ಅವರ ನಿಧನದಿಂದ ಚಿತ್ರರಂಗವು ರತ್ನವನ್ನು ಕಳೆದುಕೊಂಡಿದೆ ಎಂದು ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಅತ್ಯುತ್ತಮರಲ್ಲಿ ಪುನೀತ್ ಪ್ರಮುಖರು. ತುಂಬಾ ವಿನಮ್ರ ಸ್ವಭಾವದ ವ್ಯಕ್ತಿ’ ಎಂದು ಅನಿಲ್ ಕುಂಬ್ಳೆ ತಮ್ಮ ಟ್ವಿಟ್ಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಹೇಳುವ ಪ್ರಕಾರ, ಬೆಳ್ಳಗೆ ಸುಮಾರು 11:00 ಗಂಟಗೆ ಬೇರೆ ಕ್ಲಿನಿಕ್​ಗೆ ಹೋಗಿ ಅನಂತರದಲ್ಲಿ ವಿಕ್ರಂ ಅಸ್ಪತ್ರೆಗೆ ಬಂದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಪುನೀತ್ ರಾಜ್ ಕುಮಾರ್ ಸುಮಾರು 11:45 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಗಳು ಮೂಲಗಳು ತಿಳಿಸಿದೆ. ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದೆ.

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್​ರ ಮಗನಾಗಿ 17 ಮಾರ್ಚ್,1975 ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಪುತ್ರಿಯರಿದ್ದು ದ್ರಿತಿ ಮತ್ತು ವಂದಿತಾ. ಹೆಂಡತಿ ಅಶ್ವಿನಿ, ಇಬ್ಬರು ಮಕ್ಕಳು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Puneeth Rajkumar Eye Donation: ಅಪ್ಪನ ಹಾದಿಯಲ್ಲೇ ಸಾಗಿದ ಯುವ ನಟ ಪುನೀತ್​ ರಾಜ್​ ಕುಮಾರ್​ರಿಂದ ನೇತ್ರ ದಾನ

(Puneeth Rajkumar passes away Cricketers condole death of Puneet RajKumar)