AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Puneeth Rajkumar : ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು "ಯುವರತ್ನ" ಸಿನಿಮಾದ ಬಿಡುಗಡೆಗಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಪುನೀತ್ ನಿರ್ಮಾಣದ ಹೊಸ ಧಾರಾವಾಹಿ ಬಗ್ಗೆ ಸುದ್ದಿಯೊಂದು ಕೇಳಿಬಂದಿದ್ದು, ಫ್ಯಾನ್ಸ್​ ನಿರೀಕ್ಷೆ ಹೆಚ್ಚಿಸಿಕೊಳ್ಳುವಂತಾಗಿದೆ.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​
ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್
ಸಾಧು ಶ್ರೀನಾಥ್​
|

Updated on: Mar 02, 2021 | 5:10 PM

Share

ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಪುನೀತ್​ ರಾಜ್​ಕುಮಾರ್​ ತೊಡಗಿಕೊಂಡಿದ್ದಾರೆ. ಈಗ ಅವರೊಂದು ಧಾರಾವಾಹಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಆ ಧಾರಾವಾಹಿಗೆ “ನೇತ್ರಾವತಿ” ಎಂದು ಶೀರ್ಷಿಕೆ ಇಟ್ಟಿರುವುದರಿಂದ ಅಭಿಮಾನಿಗಳ ವಲಯದಲ್ಲಿ ದೊಡ್ಡಮಟ್ಟದ ಕುತೂಹಲ ಸೃಷ್ಟಿಯಾಗಿದೆ. “ಯುವರತ್ನ” ಸಿನಿಮಾ ಬಿಡುಗಡೆಗೂ ಮುನ್ನ ಈ ಸುದ್ದಿ ಹೊರಬಿದ್ದಿದ್ದು, ಕಿರುತೆರೆ ಪ್ರೇಕ್ಷಕರು ಹೊಸ ಸೀರಿಯಲ್​ಗಾಗಿ ಕಾಯುವಂತಾಗಿದೆ.

ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳಿಗೇನೂ ಕೊರತೆ ಇಲ್ಲ. ಅನೇಕ ಸೀರಿಯಲ್​ಗಳು ಈಗಾಗಲೇ ಪ್ರಸಾರ ಆಗುತ್ತಿವೆ. ಅವುಗಳ ನಡುವೆಯೂ ಪುನೀತ್​ ಒಂದು ಧಾರಾವಾಹಿಗೆ ಬಂಡವಾಳ ಹೂಡುತ್ತಾರೆ ಎಂದರೆ ಅದರಲ್ಲಿ ಏನಾದರೊಂದು ವಿಶೇಷ ಇರಲೇಬೇಕಲ್ಲವೇ? ಹೌದು. ಪುನೀತ್​ ನಿರ್ಮಾಣ ಮಾಡುತ್ತಿರುವ ಈ ಸೀರಿಯಲ್​ನಲ್ಲಿ ಭಕ್ತಿ ಪ್ರಧಾನ ಕಥೆ ಇರಲಿದೆ. “ನೇತ್ರಾವತಿ” ಎಂಬ ಹೆಸರೇ ಸೂಚಿಸುವಂತೆ ಇದೊಂದು ಮಹಿಳಾ ಪ್ರಧಾನ ಧಾರಾವಾಹಿ ಎಂಬ ಮಾಹಿತಿ ಲಭ್ಯವಾಗಿದೆ. ಉದಯ ಟಿವಿಯಲ್ಲಿ ಶೀಘ್ರದಲ್ಲೇ ಇದರ ಪ್ರಸಾರ ಆರಂಭ ಆಗಲಿದೆ.

ನೇತ್ರಾವತಿ ಎಂದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ನೆನಪಾಗಲೇಬೇಕು. ಮಂಜುನಾಥನ ಅಪ್ಪಟ ಭಕ್ತೆಯ ಕಥೆ ಈ ಧಾರಾವಾಹಿಯಲ್ಲಿ ಇರಲಿದೆ. ಜೀವನದಲ್ಲಿ ಏನೇ ಕಷ್ಟ ಎದುರಾದರೂ ಮಂಜುನಾಥನ ಮೇಲೆ ನಂಬಿಕೆ ಇಟ್ಟಿರುವ ನೇತ್ರಾವತಿಯ ಬಗ್ಗೆ ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವವರು ಯಾರು? ಯಾವ ಸಮಯಕ್ಕೆ “ನೇತ್ರಾವತಿ” ಪ್ರಸಾರ ಆಗಲಿದೆ ಎಂಬ ಬಗ್ಗೆ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

“ಕನ್ನಡದ ಕೋಟ್ಯಧಿಪತಿ”, “ಫ್ಯಾಮಿಲಿ ಪವರ್​” ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಕಿರುತೆರೆಯ ಜೊತೆಗೆ ಪುನೀತ್​ ರಾಜ್​ಕುಮಾರ್​ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆ ಮೂಲಕವೂ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನು, ಅವರ “ಯುವರತ್ನ” ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್​ 1ರಂದು ರಿಲೀಸ್​ ಆಗಲಿರುವ ಈ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದಾರೆ. ಪುನೀತ್​ಗೆ ನಾಯಕಿಯಾಗಿ ಸಾಯೆಷಾ ಸೈಗಲ್​ ನಟಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ