ಕಿಕ್ಕಿರಿದು ತುಂಬಿದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಳಗಿದ ‘ಬೊಂಬೆ ಹೇಳುತೈತೆ’; ರೋಮಾಂಚನಕಾರಿ ವಿಡಿಯೋ ಇಲ್ಲಿದೆ

Chinnaswamy Stadium | Puneeth Rajkumar: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯದ ವೇಳೆ ಪುನೀತ್ ನಟನೆಯ ‘ರಾಜಕುಮಾರ’ ಚಿತ್ರದ ‘ಬೊಂಬೆ ಹೇಳುತೈತೆ’ ಹಾಡನ್ನು ಹಾಕಲಾಗಿತ್ತು. ಇದಕ್ಕೆ ಜನರು ದನಿಗೂಡಿಸಿದ ಪರಿ ಅಮೋಘವಾಗಿತ್ತು. ಅದರ ವಿಡಿಯೋ ಇಲ್ಲಿದೆ.

ಕಿಕ್ಕಿರಿದು ತುಂಬಿದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಳಗಿದ ‘ಬೊಂಬೆ ಹೇಳುತೈತೆ’; ರೋಮಾಂಚನಕಾರಿ ವಿಡಿಯೋ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Mar 12, 2022 | 9:29 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ರಾಜಕುಮಾರ’ (Rajakumara) ಚಿತ್ರ ಹಲವು ಕಾರಣಗಳಿಗಾಗಿ ಕನ್ನಡ ಚಿತ್ರರಂಗದ ಒಂದು ಅಪೂರ್ವ ಚಿತ್ರವಾಗಿ ದಾಖಲಾಗಿದೆ. ಪ್ರಸ್ತುತ ಈ ಚಿತ್ರವನ್ನು ಒಮ್ಮೆ ನೋಡಿದರೆ ಅಪ್ಪು ಜೀವನದಂತೆ ಆ ಚಿತ್ರವಿತ್ತೇನೋ ಎಂದು ಅಭಿಮಾನಿಗಳು ಅನಿಸಿಕೆ ಹೇಳಿಕೊಂಡಿದ್ದುಂಟು. ಅದೇನೇ ಇದ್ದರೂ ಒಂದು ಚಿತ್ರವಾಗಿ ‘ರಾಜಕುಮಾರ’ದ ಸಾಧನೆ ಅಪೂರ್ವ. 2017ರಲ್ಲಿ ತೆರೆಕಂಡ ಈ ಚಿತ್ರ ಬಾಕ್ಸಾಫೀಸ್​ನಲ್ಲೂ ದಾಖಲೆ ಬರೆದಿತ್ತು. ಸಂತೋಷ್ ಆನಂದ್​ರಾಮ್ ನಿರ್ದೇಶಿಸಿದ್ದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. ಬಿಡುಗಡೆಯಾಗಿ ಸುಮಾರು ಐದು ವರ್ಷ ಸಮೀಪಿಸುತ್ತಾ ಬಂದರೂ, ಚಿತ್ರದ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ವಿಶೇಷವಾಗಿ ‘ರಾಜಕುಮಾರ’ದ ಹಾಡುಗಳು. ಅಪ್ಪು ನೆನಪಾದ ತಕ್ಷಣ ‘‘ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ.. ನೀನೆ ರಾಜಕುಮಾರ’’ (Bombe Helutaithe) ಎನ್ನುವ ಸಾಲುಗಳು ಕಿವಿಯಲ್ಲಿ ಅನುರಣಿಸುತ್ತವೆ. ಇದೇ ಧ್ವನಿ ಸಹಸ್ರಾರು ಜನರು ಕಿಕ್ಕಿರಿದು ತುಂಬಿರುವ ಕ್ರೀಡಾಂಗಣದಲ್ಲಿ ಮೊಳಗಿದರೆ ಹೇಗಿರಬೇಡ? ಇಂತಹ ಅಭೂತಪೂರ್ವ ಕ್ಷಣಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ಸಾಕ್ಷಿಯಾಗಿದೆ.

ಭಾರತ ಹಾಗೂ ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಗಲು- ರಾತ್ರಿ ನಡೆಯುತ್ತಿರುವ ಈ ಪಿಂಕ್ ಟೆಸ್ಟ್ ಪಂದ್ಯಾವಳಿಯನ್ನು ವೀಕ್ಷಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎರಡು ವರ್ಷಗಳ ನಂತರ ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿರುವುದೂ ಇದಕ್ಕೆ ಕಾರಣ. ಕ್ರಿಕೆಟ್ ಪಂದ್ಯದ ವೇಳೆ ಹಿಟ್ ಗೀತೆಗಳನ್ನು ಸಾಮಾನ್ಯವಾಗಿ ಹಾಕಲಾಗುತ್ತದೆ. ಇದಕ್ಕೆ ಜನರು ದನಿಗೂಡಿಸುತ್ತಾರೆ.

ಇಂದು ಕೂಡ ಹಾಗೆಯೇ ‘ರಾಜಕುಮಾರ’ ಚಿತ್ರದ ‘ಬೊಂಬೆ ಹೇಳುತೈತೆ’ ಹಾಡನ್ನು ಹಾಕಲಾಗಿತ್ತು. ಕ್ರೀಡಾಂಗಣದಲ್ಲಿ ಜನರು ಇದಕ್ಕೆ ತಮ್ಮ ಧ್ವನಿ ಗೂಡಿಸಿದ್ದಾರೆ. ಎಲ್ಲರೂ ಎದ್ದುನಿಂತು ಮೊಬೈಲ್ ಫ್ಲ್ಯಾಶ್ ಆನ್ ಮಾಡಿ ಸಂಭ್ರಮಿಸಿದ್ದು ವಿಶೇಷವಾಗಿತ್ತು. ಈ ವಿಡಿಯೋ ಸದ್ಯ ವೈರಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ವಿಡಿಯೋವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಪುನೀತ್ ಮೇಲಿನ ಅಭಿಮಾನವನ್ನು ಹಲವೆಡೆ ಕಣ್ತುಂಬಿಕೊಳ್ಳಬಹುದಿತ್ತು. ಕೆಲವು ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಸಂಭ್ರಮಿಸಿದರೆ, ಮತ್ತಷ್ಟು ಜನರು ಅಪ್ಪು ಕುರಿತ ಬರಹಗಳನ್ನು ಪ್ರದರ್ಶಿಸಿದರು. ಸ್ಯಾಂಡಲ್​ವುಡ್ ತಾರೆ ಕಿಚ್ಚ ಸುದೀಪ್ ಇಂದು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ಪಂದ್ಯ ವೀಕ್ಷಿಸಿದರು. ಈ ವೇಳೆ ಅವರು ಅಭಿಮಾನಿಗಳೊಂದಿಗೆ ಪುನೀತ್ ಇರುವ ಫೋಟೋಕ್ಕೆ ಪೋಸ್ ನೀಡಿದ್ದರು.

ಅಭಿಮಾನಿಗಳು ಪುನೀತ್​ರನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಮಾರ್ಚ್ 17ರಂದು ಪುನೀತ್ ಜನ್ಮದಿನ. ಅಂದೇ ಅವರು ನಾಯಕರಾಗಿ ನಟಿಸಿದ್ದ ಕೊನೆಯ ಚಿತ್ರ ‘ಜೇಮ್ಸ್’ ರಿಲೀಸ್ ಆಗಲಿದೆ. ಅದನ್ನು ಹಬ್ಬದ ರೀತಿಯನ್ನು ಸಂಭ್ರಮಿಸಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ:

Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Published On - 9:21 pm, Sat, 12 March 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ