‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Puneeth Rajkumar Death: ಫಿಟ್ನೆಸ್​ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ​​, ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 30, 2021 | 9:53 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ಜನಪ್ರಿಯತೆ ಗಳಿಸಿದ್ದರು. ಪರಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಜೊತೆಗೆ ಅವರು ಒಡನಾಟ ಇಟ್ಟುಕೊಂಡಿದ್ದರು. ಅಕ್ಕಪಕ್ಕದ ರಾಜ್ಯಗಳ ಚಿತ್ರರಂಗದ ಗಣ್ಯರು ಸೋಶಿಯಲ್​ ಮೀಡಿಯಾ ಮೂಲಕ ಪುನೀತ್​ ರಾಜ್​ಕುಮಾರ್​ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಅಪ್ಪು ಅಗಲಿಕೆಯ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದಾರೆ. ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಫಿಟ್ನೆಸ್​ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ. ‘ರೆಗ್ಯೂಲರ್​ ವರ್ಕೌಟ್​ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್​ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು ಸತ್ಯವು ಪುನೀತ್​ ಅವರ ದುರಂತ ನಿಧನನಿಂದ ಬಯಲಾಗಿದೆ. ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್​ ಮಾಡುವುದಿಲ್ಲ? ದೇವರು ಇರುವುದೇ ಹೌದಾದರೆ ಅವನೇ ಉತ್ತರಿಸಬೇಕು’ ಎಂದು ಆರ್​ಜಿವಿ ಬರೆದುಕೊಂಡಿದ್ದಾರೆ.

‘ಪುನೀತ್​ ರಾಜ್​ಕುಮಾರ್​ ಅವರ ಸಾವು ಈಗಲೂ ಒಂದು ಕೆಟ್ಟ ಕನಸಿನಂತೆ ಅನಿಸುತ್ತಿದೆ. ಅವರ ಆಪ್ತರ ಪರಿಸ್ಥಿತಿ ಏನಾಗಿರಬಹುದು ಅಂತ ಊಹಿಸಲೂ ಸಾಧ್ಯವಾಗುತ್ತಿಲ್ಲ. ಸಾವಿಗೆ ತಾರತಮ್ಯ ಇಲ್ಲ. ಅದು ಯಾರನ್ನು ಬೇಕಾದರೂ ಕೊಲ್ಲುತ್ತದೆ. ನಮ್ಮಲ್ಲಿ ಯಾರಾದರೂ ಯಾವಾಗ ಬೇಕಿದ್ದರೂ ಸಾಯಬಹುದು ಎಂಬುದು ಭಯಾನಕ ಸತ್ಯ. ಬದುಕಿರುವಾಗಲೇ ಫಾಸ್ಟ್​​ ಫಾರ್ವರ್ಡ್​​ ಮೋಡ್​ನಲ್ಲಿ ಜೀವಿಸಬೇಕು’ ಎಂದು ರಾಮ್​ ಗೋಪಾಲ್​ ವರ್ಮಾ ಸರಣಿ ಟ್ವೀಟ್​ ಮಾಡಿದ್ದಾರೆ. ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಕೂಡ ಇದೇ ರೀತಿ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾಗಿದ್ದು ಈಗ ನೆನಪಾಗುತ್ತಿದೆ.

ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ಶನಿವಾರ (ಅ.30) ದಿನವಿಡೀ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ದೂರದೂರದ ಊರುಗಳಿಂದ ಜನರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಬಂದು ಕಣ್ಣೀರು ಸುರಿಸುತ್ತಿದ್ದಾರೆ. ಭಾನುವಾರ ಕಂಠೀರವ ಸ್ಡುಡಿಯೋ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar: ‘ನನ್ನ ತಮ್ಮ ರಾಯಲ್​ ಆಗಿಯೇ ಇರುತ್ತಾನೆ’; ಕ್ರೂರ ವಿಧಿಯಿಂದ ಸುಳ್ಳಾಯ್ತು ಶಿವಣ್ಣನ ಈ ಮಾತು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ