AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಒಂದೇ ದಿನಾಂಕದಲ್ಲಿ ಜನಿಸಿದ ವಿಜಯ್​, ಅಪ್ಪು, ಚಿರುಗೆ ಇದೆಂಥ ದುರ್ವಿಧಿ; ಕಂಟಕವಾಯ್ತಾ ಸಂಖ್ಯೆ 17?

Puneeth Rajkumar Heart Attack: ಕನ್ನಡ ಚಿತ್ರರಂಗದಲ್ಲಿ ಪುನೀತ್​ ರಾಜ್​ಕುಮಾರ್​, ಸಂಚಾರಿ ವಿಜಯ್​, ಚಿರಂಜೀವಿ ಸರ್ಜಾ ಅವರು ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಯಾವ ಪಾತ್ರ ಕೊಟ್ಟರೂ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದರು.

Puneeth Rajkumar: ಒಂದೇ ದಿನಾಂಕದಲ್ಲಿ ಜನಿಸಿದ ವಿಜಯ್​, ಅಪ್ಪು, ಚಿರುಗೆ ಇದೆಂಥ ದುರ್ವಿಧಿ; ಕಂಟಕವಾಯ್ತಾ ಸಂಖ್ಯೆ 17?
ಸಂಚಾರಿ ವಿಜಯ್​, ಪುನೀತ್​ ರಾಜ್​ಕುಮಾರ್​, ಚಿರಂಜೀವಿ ಸರ್ಜಾ
TV9 Web
| Edited By: |

Updated on: Oct 30, 2021 | 2:08 PM

Share

ಕನ್ನಡ ಚಿತ್ರರಂಗಕ್ಕೆ ಕತ್ತಲು ಆವರಿಸಿದೆ. ಎಲ್ಲರ ಮೆಚ್ಚಿನ ನಟನಾಗಿದ್ದ ಪುನೀತ್​ ರಾಜ್​ಕುಮಾರ್​ ಅವರು ಶುಕ್ರವಾರ (ಅ.29) ಹೃದಯಾಘಾತದಿಂದ ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಅವರ ಅಪಾರ ಅಭಿಮಾನಿ ಬಳಗ ಕಣ್ಣೀರು ಸುರಿಸುತ್ತಿದೆ. ಅಂತಿಮ ದರ್ಶನ ಪಡೆಯಲು ಬಂದ ಅಭಿಮಾನಿಗಳು ಕರುಳು ಕಿತ್ತು ಬರುವಂತೆ ಅಳುತ್ತಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಪುನೀತ್​ಗಾಗಿ ಕಂಬನಿ ಮಿಡಿಯುತ್ತಿದ್ದಾರೆ. ಅಪ್ಪು ರೀತಿಯೇ ಚಿರಂಜೀವಿ ಸರ್ಜಾ ಮತ್ತು ಸಂಚಾರಿ ವಿಜಯ್​ ಅವರನ್ನು ಕೂಡ ಸ್ಯಾಂಡಲ್​ವುಡ್​ ಕಳೆದುಕೊಂಡಿದೆ. ಈ ಮೂವರ ಜನ್ಮದಿನಾಂಕದಲ್ಲಿ ಒಂದು ಸಾಮ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ಜನಿಸಿದ್ದು ಮಾರ್ಚ್​ 17ರಂದು. ಅವರ ರೀತಿಯೇ ಹೃದಯಾಘಾತದಲ್ಲಿ ನಿಧನರಾದ ಚಿರಂಜೀವಿ ಸರ್ಜಾ ಜನಿಸಿದ್ದು ಅಕ್ಟೋಬರ್​ 17ರಂದು. ಇತ್ತೀಚೆಗೆ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್​ ಅವರ ಜನ್ಮ ದಿನಾಂಕ ಜುಲೈ 17. ಇವರೆಲ್ಲರಿಗೂ ಈ ಸಂಖ್ಯೆಯೇ ಕಂಟಕವಾಯ್ತೇ ಎಂದು ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಹಾಗೆಯೇ ಕನ್ನಡದ ಖ್ಯಾತ ನಟ ರಘುವೀರ್​ ಜನಿಸಿದ್ದು ಕೂಡ ಮೇ 17ರಂದು. ಅವರು ಸಹ ಹೃದಯಾಘಾತದಿಂದಲೇ ಮೃತಪಟ್ಟಿದ್ದು ಎಂಬುದು ಕಾಕತಾಳೀಯ.

ಕನ್ನಡ ಚಿತ್ರರಂಗದಲ್ಲಿ ಈ ಕಲಾವಿದರು ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಯಾವ ಪಾತ್ರ ಕೊಟ್ಟರೂ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದರು. ತಮ್ಮ ಅಭಿನಯದಿಂದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು. ಈ ಪ್ರತಿಭಾವಂತರು ರೀತಿ ಅಕಾಲಿಕ ಮರಣಕ್ಕೆ ಒಳಗಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದರಲ್ಲೂ ಫಿಟ್ನೆಸ್​ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಲ್ಲಿ ನಿಧನರಾದರು ಎಂಬ ಸತ್ಯವನ್ನು ಯಾರಿಂದಲೂ ನಂಬಲಾಗುತ್ತಿಲ್ಲ. ಫಿಟ್ನೆಸ್​ ವಿಚಾರದಲ್ಲಿ ಅವರು ಯುವಕರಿಗೆ ಮಾದರಿ ಆಗಿದ್ದರು. ತಮ್ಮ ಜಿಮ್​ ವರ್ಕೌಟ್​ ವಿಡಿಯೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು.

ಪುನೀತ್​ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಅಕ್ಕ-ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಪ್ರಭುದೇವ, ಟಾಲಿವುಡ್​ನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ, ಬಹುಭಾಷಾ ನಟ ಶರತ್​ ಕುಮಾರ್​ ಸೇರಿದಂತೆ ಅನೇಕರು ಪುನೀತ್​ಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಶನಿವಾರ (ಅ.30) ಕಂಠೀರವ ಸ್ಡುಡಿಯೋ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸೋಶಿಯಲ್​ ಮೀಡಿಯಾ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸುತ್ತಿದೆ.

ಇದನ್ನೂ ಓದಿ:

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ