Puneeth Rajkumar: ಪುನೀತ್ ಮುಂದಿನ ಚಿತ್ರದ ವಿಡಿಯೋ ತುಣುಕು ರಿಲೀಸ್; ಭಾವುಕರಾದ ಫ್ಯಾನ್ಸ್

ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್​ ಕೆಲಸಗಳು ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ನಡೆಯುತ್ತಿವೆ. ‘ಲಕ್ಕಿ ಮ್ಯಾನ್​’ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಕೂಡ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ.

Puneeth Rajkumar: ಪುನೀತ್ ಮುಂದಿನ ಚಿತ್ರದ ವಿಡಿಯೋ ತುಣುಕು ರಿಲೀಸ್; ಭಾವುಕರಾದ ಫ್ಯಾನ್ಸ್
ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 11, 2021 | 6:37 PM

ಪುನೀತ್​ ರಾಜ್​ಕುಮಾರ್  ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಹೃದಯಾಘಾತದಿಂದ ಮೃತರಾಗುವುದಕ್ಕೂ ಮುನ್ನ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆದರೆ ಆ ಚಿತ್ರಗಳು ತೆರೆ ಕಾಣುವುದಕ್ಕೂ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಪುನೀತ್​ ನಟಿಸುತ್ತಿದ್ದ ಒಂದೆರಡು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ ಎಂಬುದು ಸಮಾಧಾನಕರ ಸಂಗತಿ. ಆ ಪೈಕಿ ‘ಜೇಮ್ಸ್​’ ಸಿನಿಮಾ ರಿಲೀಸ್​ ಆಗುವುದು ಖಚಿತ ಎಂಬುದು ಈಗಾಗಲೇ ಗೊತ್ತಾಗಿದೆ. ಅಷ್ಟೇ ಅಲ್ಲದೇ, ಅಪ್ಪು ಜತೆ ಪ್ರಭುದೇವ ಮತ್ತು ಡಾರ್ಲಿಂಗ್​ ಕೃಷ್ಣ ನಟಿಸಿರುವ ‘ಲಕ್ಕಿ ಮ್ಯಾನ್​’ ಶೂಟಿಂಗ್​ ಕೂಡ ಪೂರ್ಣಗೊಂಡಿದೆ. ಆ ಸಿನಿಮಾದ ಡಬ್ಬಿಂಗ್​ ಕೆಲಸಗಳು ಈಗ ನಡೆಯುತ್ತಿವೆ. ಡಬ್ಬಿಂಗ್​ ಮಾಡುತ್ತಿರುವ ಅನುಭವವನ್ನು ಡಾರ್ಲಿಂಗ್​ ಕೃಷ್ಣ ವಿಡಿಯೋ ಸಮೇತ ಹಂಚಿಕೊಂಡಿದ್ದಾರೆ.

ಡಬ್ಬಿಂಗ್​ ಅನುಭವದ ಬಗ್ಗೆ ಬರೆದುಕೊಂಡಿರುವ ಡಾರ್ಲಿಂಗ್​ ಕೃಷ್ಣ, ‘ಲಕ್ಕಿಮ್ಯಾನ್ ಸಿನಿಮಾಗೆ ಡಬ್ಬಿಂಗ್ ಶುರು ಮಾಡಿದೆ. ಈ ದೃಶ್ಯಗಳನ್ನು ಡಬ್ಬಿಂಗ್ ಮಾಡುವುದು ಅತ್ಯಂತ ಕಷ್ಟಕರವಾದ ಭಾಗವಾಗಿತ್ತು. ಅಪ್ಪು ಸರ್ ಜೊತೆಗಿನ ಈ ಚಿತ್ರದ ಶೂಟಿಂಗ್ ತುಂಬಾ ವಿಶೇಷವಾಗಿತ್ತು ಮತ್ತು ಇದು ಎಂದೆಂದಿಗೂ ವಿಶೇಷವಾಗಿ ಉಳಿಯುತ್ತದೆ’ ಎಂದು ಬರೆದುಕೊಳ್ಳುವುದರ ಜತೆಗೆ ಒಂದು ಸಣ್ಣ ವಿಡಿಯೋ ಕ್ಲಿಪ್​ ಕೂಡ ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿ ಸಾಕಷ್ಟು ಮಂದಿ ಭಾವುಕರಾಗಿದ್ದಾರೆ.

ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್​ ಕೆಲಸಗಳು ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ನಡೆಯುತ್ತಿವೆ. ‘ಲಕ್ಕಿ ಮ್ಯಾನ್​’ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಕೂಡ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ವಿಶೇಷವಾಗಿ ಪುನೀತ್ ರಾಜ್​ಕುಮಾರ್ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಹಾಡೊಂದರಲ್ಲಿ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್​ಕುಮಾರ್ ಅವರ ಮೇಲೆ ರಚಿಸಲಾದ ಈ ಹಾಡಿನಲ್ಲಿ ಅವರಿಬ್ಬರು ಡ್ಯಾನ್ಸ್​ ಮಾಡಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡುವಂತಾಗಿದೆ. ಇದೇ ಮೊದಲ ಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ ಎಂಬುದು ಗಮನಾರ್ಹ ಅಂಶ.

‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಸಂಗೀತಾ ಶೃಂಗೇರಿ ನಟಿಸಿದ್ದಾರೆ. ರೋಶಿನಿ ಪ್ರಕಾಶ್ ದ್ವಿತೀಯ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕಾ ಅವಿನಾಶ್​ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

 ಇದನ್ನೂ ಓದಿ: ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್