AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ರಶ್ಮಿಕಾ ಮಂದಣ್ಣ ನಟನೆಯ ‘ಅಂಜನಿಪುತ್ರ’ ಮೇ 10ಕ್ಕೆ ಮರು ಬಿಡುಗಡೆ

ಮೇ 10ರಂದು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ಹಬ್ಬದ ವಾತಾವರಣ ಇರಲಿದೆ. ಚಿತ್ರಮಂದಿರಗಳಲ್ಲಿ ‘ಅಂಜನಿಪುತ್ರ’ ಸಿನಿಮಾ ರಾರಾಜಿಸಲಿದೆ. ‘ಜಾಕಿ’ ಸಿನಿಮಾ ಮರುಬಿಡುಗಡೆ ಆದಾಗ ಫ್ಯಾನ್ಸ್​ ಸಂಭ್ರಮಿಸಿದ್ದರು. ಈಗ ‘ಅಂಜನಿಪುತ್ರ’ ಸಿನಿಮಾವನ್ನು ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ.

ಪುನೀತ್​-ರಶ್ಮಿಕಾ ಮಂದಣ್ಣ ನಟನೆಯ ‘ಅಂಜನಿಪುತ್ರ’ ಮೇ 10ಕ್ಕೆ ಮರು ಬಿಡುಗಡೆ
ರಶ್ಮಿಕಾ ಮಂದಣ್ಣ, ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Apr 30, 2024 | 9:55 PM

Share

ಈಗ ಎಲ್ಲೆಲ್ಲೂ ಚುನಾವಣೆಯ ಕಾವು ಜೋರಾಗಿದೆ. ಜನರ ಪೂರ್ತಿ ಗಮನ ಲೋಕಸಭಾ ಚುನಾವಣೆ ಮೇಲಿದೆ. ಹಾಗಾಗಿ ಸಿನಿಮಾ ಚಟುವಟಿಕೆಗಳು ಸ್ವಲ್ಪ ಮಂಕಾಗಿವೆ. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಯಾವುದೂ ರಿಲೀಸ್​ ಆಗುತ್ತಿಲ್ಲ. ಈ ಸಂದರ್ಭದಲ್ಲಿ ಹಳೇ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡುವ ಟ್ರೆಂಡ್​ ಬಂದಿದೆ. ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅಭಿಮಾನಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್​ ಇದೆ. ಮೇ 10ರಂದು ‘ಅಂಜನಿಪುತ್ರ’ (Anjani Putra) ಸಿನಿಮಾವನ್ನು ಮರುಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ.

‘ಎಂ.ಎನ್.ಕೆ‌ ಮೂವೀಸ್’ ಮೂಲಕ ಎಂ.ಎನ್. ಕುಮಾರ್ ಅವರು ‘ಅಂಜನಿಪುತ್ರ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಎ. ಹರ್ಷ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಪುನೀತ್ ರಾಜ್​ಕುಮಾರ್ ಹಾಗೂ ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದ ಈ ಸಿನಿಮಾ 2017ರ ಡಿಸೆಂಬರ್​ 21ರಂದು ಬಿಡುಗಡೆ ಆಗಿತ್ತು. ಈಗ ಮರು ಬಿಡುಗಡೆ ಆಗುತ್ತಿರುವುದು ಅಪ್ಪು ಫ್ಯಾನ್ಸ್​ಗೆ ಖುಷಿ ನೀಡಿದೆ.

‘ಅಂಜನಿಪುತ್ರ’ ಸಿನಿಮಾವನ್ನು ಮೇ 10ರಂದು ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಥಿಯೇಟರ್​ಗಳಲ್ಲಿ ಅದ್ದೂರಿಯಾಗಿ ಮರು ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಪಕ ಎಂ.ಎನ್. ಕುಮಾರ್ ಅವರು ತಿಳಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೊಮ್ಮೆ ದೊಡ್ಡ ಪರದೆ ಮೇಲೆ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ.

ಇದನ್ನೂ ಓದಿ: ‘ಆ ನಟನಿಗೆ ಎಲ್ಲವೂ ಗೊತ್ತು, ಆದ್ರೂ ಮಾತಾಡ್ತಿಲ್ಲ’: ಪುನೀತ್​ ಫ್ಯಾನ್ಸ್​ ಆರೋಪ

ರಶ್ಮಿಕಾ ಮಂದಣ್ಣ ಅವರು ನಟಿಸಿದ ಕೆಲವೇ ಕನ್ನಡ ಸಿನಿಮಾಗಳಲ್ಲಿ ‘ಅಂಜನಿಪುತ್ರ’ ಕೂಡ ಒಂದು. ‘ಕಿರಿಕ್​ ಪಾರ್ಟಿ’ ಸಿನಿಮಾದ ಯಶಸ್ವಿನ ಬಳಿಕ ಅವರಿಗೆ ಈ ಆಫರ್​ ಸಿಕ್ಕಿತ್ತು. ಈ ಚಿತ್ರಕ್ಕೆ ರವಿ ಬಸ್ರೂರ್​ ಅವರ‌ ಸಂಗೀತ ನಿರ್ದೇಶನವಿದೆ. ಆ ಸಿನಿಮಾದ ‘ಬಾರಿ ಖುಷಿ ಮಾರ್ರೆ ನಂಗೆ..’ ಹಾಡು ಸೂಪರ್​ ಹಿಟ್​ ಆಗಿತ್ತು. ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ಪ್ರತಿ ದಿನವೂ ಮಿಸ್​ ಮಾಡಿಕೊಳ್ಳುತ್ತಾರೆ. ಇಂದು ಅವರು ಭೌತಿಕವಾಗಿ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಜೀವಂತವಾಗಿದ್ದಾರೆ. ಈ ವರ್ಷ ಅವರ ಜನ್ಮದಿನದ ಪ್ರಯುಕ್ತ ‘ಜಾಕಿ’ ಸಿನಿಮಾ ಮರುಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಈಗ ‘ಅಂಜನಿಪುತ್ರ’ ಸಿನಿಮಾ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್