‘ಜೇಮ್ಸ್​​’ ಚಿತ್ರ ತೆಗೆಯದಂತೆ ಫಿಲ್ಮ್ ಚೇಂಬರ್​ಗೆ ಸಿಎಂ ಕಚೇರಿಯಿಂದ ಫೋನ್​​ ಕರೆ; ಮಹತ್ವದ ಸಭೆಗೆ ಸಿದ್ಧತೆ

‘ಜೇಮ್ಸ್​’ ಚಿತ್ರಕ್ಕೆ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸಿಎಂ ಕಚೇರಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕರೆ ಹೋಗಿದೆ. ಇಂದು (ಮಾ.24) ಬೆಳಗ್ಗೆ 11 ಗಂಟೆ ನಂತರ ಸಭೆ ನಡೆಯಲಿದೆ.

‘ಜೇಮ್ಸ್​​’ ಚಿತ್ರ ತೆಗೆಯದಂತೆ ಫಿಲ್ಮ್ ಚೇಂಬರ್​ಗೆ ಸಿಎಂ ಕಚೇರಿಯಿಂದ ಫೋನ್​​ ಕರೆ; ಮಹತ್ವದ ಸಭೆಗೆ ಸಿದ್ಧತೆ
ಬಸವರಾಜ ಬೊಮ್ಮಾಯಿ, ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Mar 24, 2022 | 9:00 AM

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​​ (Puneeth Rajkumar) ಅಭಿನಯದ ‘ಜೇಮ್ಸ್​’ ಸಿನಿಮಾವನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಮೊದಲ ದಿನವೇ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ನಾಲ್ಕೇ ದಿನಕ್ಕೆ 100 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂಬ ಬಗ್ಗೆಯೂ ವರದಿ ಆಗಿದೆ. ಆದರೆ ಈ ಸಿನಿಮಾಗೆ ಈಗ ತೊಂದರೆ ಎದುರಾಗಿದೆ. ಕೆಲವು ಚಿತ್ರಮಂದಿರಗಳಿಂದ ‘ಜೇಮ್ಸ್​’ ಚಿತ್ರವನ್ನು (James Movie) ತೆಗೆಯಲಾಗುತ್ತಿದೆ. ಇದಕ್ಕೆ ಕಾರಣ; ಪರಭಾಷೆ ಸಿನಿಮಾಗಳ ಹಾವಳಿ. ಈ ಬಗ್ಗೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಹಲವೆಡೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶ ಆಗಿದೆ. ‘ಜೇಮ್ಸ್​’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿರುವ ಬೆಂಗಳೂರಿನ ಚಿತ್ರಮಂದಿರಗಳಿಂದ ಈ ಚಿತ್ರವನ್ನು ತೆಗೆಯಬಾರದು ಎಂದು ಸಿಎಂ ಕಚೇರಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karnataka Film Chamber of Commerce) ಸೂಚನೆ ನೀಡಲಾಗಿದೆ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾ.24) ಫಿಲ್ಮ್​ ಚೇಂಬರ್​ನಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಕುರಿತು ಇಲ್ಲಿದೆ ಮಾಹಿತಿ..

ಪುನೀತ್​ ರಾಜ್​ಕುಮಾರ್​ ನಿಧನದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ನಿಂತಿದ್ದರು. ಪುನೀತ್​ ಮಾಡಿದ ಸಾಧನೆ ಮತ್ತು ಸಾಮಾಜಿಕ ಕಾರ್ಯಗಳನ್ನು ಪರಿಗಣಿಸಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನೂ ಘೋಷಿಸಿದರು. ಅದೇ ರೀತಿ ಈಗ ‘ಜೇಮ್ಸ್​’ ಚಿತ್ರಕ್ಕೆ ತೊಂದರೆ ಆಗಿರುವಾಗಲೂ ಅವರು ಮಧ್ಯ ಪ್ರವೇಶಿಸಬೇಕು ಎಂದು ಅಭಿಮಾನಿಗಳು ಬಯಸಿದರು. ಅದರಂತೆಯೇ ಸಿಎಂ ಕಚೇರಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕರೆ ಹೋಗಿದೆ. ಬೆಳಗ್ಗೆ 11 ಗಂಟೆ ನಂತರ ಸಭೆ ನಡೆಯಲಿದೆ.

ಸಿಎಂ ಕಾರ್ಯಾಲಯದ ಸಲಹೆ ಮೇರೆಗೆ ‘ಜೇಮ್ಸ್’ ಸಿನಿಮಾಗೆ ಎದುರಾಗಿರುವ ಚಿತ್ರಮಂದಿರಗಳ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ವಾಣಿಜ್ಯ ಮಂಡಳಿ ಮುಂದಾಗಿದೆ. ‘ಜೇಮ್ಸ್​’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿರುವ 9 ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ತೆಗೆಯದಂತೆ ಫಿಲ್ಮ್​ ಚೇಂಬರ್​ ಸೂಚನೆ ನೀಡಿದೆ. ಉತ್ತಮವಾಗಿ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳಿಂದ ಕಲೆಕ್ಷನ್​ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಫಿಲ್ಮ್​ ಚೇಂಬರ್​ ಮೂಲಗಳಿಂದ ಮಾಹಿತಿ ಸಿಕ್ಕಿದೆ.

‘ಜೇಮ್ಸ್​’ ಸಿನಿಮಾ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಅವರ ಜೊತೆಯೂ ಫಿಲ್ಮ್​ ಚೇಂಬರ್​ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಚೇತನ್​ ಕುಮಾರ್ ನಿರ್ದೇಶನ ಮಾಡಿದ್ದಾರೆ. ಪುನೀತ್​ಗೆ ಜೋಡಿಯಾಗಿ ಪ್ರಿಯಾ ಆನಂದ್​ ಅಭಿನಯಿಸಿದ್ದಾರೆ. ಇದು ಅಪ್ಪು ಅಭಿನಯದ ಕೊನೇ ಸಿನಿಮಾ ಎಂಬ ಕಾರಣಕ್ಕಾಗಿ ಅಭಿಮಾನಿಗಳು ಈ ಸಿನಿಮಾ ಜೊತೆ ಭಾವನಾತ್ಮಕವಾಗಿ ಕನೆಕ್ಟ್​ ಆಗಿದ್ದಾರೆ.

‘ಜೇಮ್ಸ್​’ಗೆ ಮೀಸಲಾಗಿದ್ದ ಚಿತ್ರಮಂದಿರಗಳನ್ನು ಪರಭಾಷೆ ಸಿನಿಮಾಗಳು ಆಕ್ರಮಿಸಿಕೊಳ್ಳುತ್ತಿವೆ. ‘ಈ ರೀತಿ ಆಗುತ್ತಿರುವುದು ಸರಿಯಲ್ಲ. ಇದು ಕನ್ನಡ ಚಿತ್ರಕ್ಕೆ ಮಾಡಿದ ಅವಮಾನ’ ಎಂದು ಅಪ್ಪು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬುಧವಾರ (ಮಾ.23) ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ ಮಾಡಲಾಗಿತ್ತು. ಪುನೀತ್​ ಅವರ ಭಾವಚಿತ್ರವನ್ನು ಹಿಡಿದು ಘೋಷಣೆ ಕೂಗಲಾಗಿತ್ತು. ಅದೇ ರೀತಿ ಬೆಂಗಳೂರಿನಲ್ಲೂ ಅಪ್ಪು ಅಭಿಮಾನಿಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಫಿಲ್ಮ್​ ಚೇಂಬರ್​ ಸಭೆ ನಂತರ ಸಮಸ್ಯೆ ಬಗೆಹರಿಸುವ ನಿರೀಕ್ಷೆ ಇದೆ. ಸಭೆ ಬಳಿಕ ಯಾವ ತೀರ್ಮಾನ ಹೊರಬೀಳಲಿದೆ ಎಂಬ ಕುತೂಲಹ ನಿರ್ಮಾಣ ಆಗಿದೆ.

‘ಜೇಮ್ಸ್​’ ರಿಲೀಸ್​ ಆದಾಗ ಅಭಿಮಾನಿಗಳು ಜೋರಾಗಿ ಸಂಭ್ರಮಿಸಿದರು. ಅಪ್ಪು ಸಿನಿಮಾಗೆ ಭರ್ಜರಿ ಓಪನಿಂಗ್​ ನೀಡಲಾಯಿತು. ಅನೇಕ ಕಡೆಗಳಲ್ಲಿ ಅಭಿಮಾನಿಗಳು ಬಾಡೂಟ ಮಾಡಿ ಹಂಚಿದರು. ಆದರೆ ಕೆಲವೇ ದಿನಗಳಲ್ಲಿ ಈ ಚಿತ್ರಕ್ಕೆ ಸ್ಕ್ರೀನ್​ಗಳ ಸಂಖ್ಯೆ ಕಡಿಮೆ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ:

3 ದಿನ ಸಾರಿ ಕೇಳಿದ್ರು ಪುನೀತ್​; ಅದಕ್ಕೆ ಕಾರಣ ಆಗಿದ್ದ ಆ ಘಟನೆ ಬಗ್ಗೆ ವಿವರಿಸಿದ ‘ಜೇಮ್ಸ್​’ ವಿಲನ್​

James: ಪುನೀತ್​ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ಗೂ ಥಿಯೇಟರ್ ಸಮಸ್ಯೆ; ಚಿತ್ರತಂಡ ಹೇಳಿದ್ದೇನು?

Published On - 8:08 am, Thu, 24 March 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್