ಆಗಸ್ಟ್ನಲ್ಲಿ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್
‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಿಧನ ಹೊಂದುವುದಕ್ಕೂ ಮೊದಲು ಕೆಲ ಚಿತ್ರಗಳಲ್ಲಿ ನಟಿಸುತ್ತಿದ್ದರು. ಈ ಪೈಕಿ ಕೆಲ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿವೆ. ಇನ್ನೂ ಕೆಲ ಚಿತ್ರಗಳ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ ‘ಜೇಮ್ಸ್’ ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಡಾರ್ಲಿಂಗ್ ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ (Lucky Man Movie) ಪುನೀತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್ನಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಪುನೀತ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಪುನೀತ್ ಅವರು ಈ ಚಿತ್ರದಲ್ಲಿ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರದ್ದೇ ಧ್ವನಿ ಇರಲಿದೆ ಅನ್ನೋದು ವಿಶೇಷ. ‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.
ಈ ಚಿತ್ರದ ಸ್ಪೆಷಲ್ ಹಾಡಿನಲ್ಲಿ ಪುನೀತ್ ಜತೆ ತಮಿಳು ನಟ ಪ್ರಭುದೇವ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ಸಾಂಗ್ಅನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಜಾನಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವ ಅವರು ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಅದ್ಭುತವಾದ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದಾರೆ.
ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾ ತಂಡ ಪೋಸ್ಟ್ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ‘ಒಂದೊಳ್ಳೆಯ ಸಿನಿಮಾ ನೋಡಿ ಈ ವರ್ಷ ಮುಗಿಸಿದ ಖುಷಿ ಇದೆ’; ಡಾರ್ಲಿಂಗ್ ಕೃಷ್ಣ
ತಮಿಳಿನ ‘ಓ ಮೈ ಕಡವುಲೆ’ ಚಿತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಸಿನಿಮಾ ಮಾಡಿದ್ದಾರೆ. ಪಿ.ಆರ್. ಮೀನಾಕ್ಷಿ ಸುಂದರಂ, ಆರ್. ಸುಂದರ ಕಾಮರಾಜ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಇವರು ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.