ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್​

| Updated By: ರಾಜೇಶ್ ದುಗ್ಗುಮನೆ

Updated on: Jul 13, 2022 | 4:19 PM

‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.

ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್​
ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ
Follow us on

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನ ಹೊಂದುವುದಕ್ಕೂ ಮೊದಲು ಕೆಲ ಚಿತ್ರಗಳಲ್ಲಿ ನಟಿಸುತ್ತಿದ್ದರು. ಈ ಪೈಕಿ ಕೆಲ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿವೆ. ಇನ್ನೂ ಕೆಲ ಚಿತ್ರಗಳ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ ‘ಜೇಮ್ಸ್​’ ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಡಾರ್ಲಿಂಗ್ ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ (Lucky Man Movie) ಪುನೀತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್​ನಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಪುನೀತ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಪುನೀತ್ ಅವರು ಈ ಚಿತ್ರದಲ್ಲಿ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರದ್ದೇ ಧ್ವನಿ ಇರಲಿದೆ ಅನ್ನೋದು ವಿಶೇಷ. ‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.

ಈ ಚಿತ್ರದ ಸ್ಪೆಷಲ್ ಹಾಡಿನಲ್ಲಿ ಪುನೀತ್ ಜತೆ ತಮಿಳು ನಟ ಪ್ರಭುದೇವ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ಸಾಂಗ್​ಅನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಜಾನಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ.  ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವ ಅವರು ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಅದ್ಭುತವಾದ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದಾರೆ.

ಇದನ್ನೂ ಓದಿ
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾ ತಂಡ ಪೋಸ್ಟ್​​ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಒಂದೊಳ್ಳೆಯ ಸಿನಿಮಾ ನೋಡಿ ಈ ವರ್ಷ ಮುಗಿಸಿದ ಖುಷಿ ಇದೆ’; ಡಾರ್ಲಿಂಗ್ ಕೃಷ್ಣ

‌‌ತಮಿಳಿನ ‘ಓ ಮೈ ಕಡವುಲೆ’ ಚಿತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಸಿನಿಮಾ ಮಾಡಿದ್ದಾರೆ. ಪಿ.ಆರ್. ಮೀನಾಕ್ಷಿ ಸುಂದರಂ, ಆರ್​. ಸುಂದರ ಕಾಮರಾಜ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಇವರು ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.