AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Puneeth Rajkumar: ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆಯೇ ಯುವರತ್ನ ಸಿನಿಮಾ ಅಬ್ಬರಿಸುತ್ತಿದೆ. ಮುಂಜಾನೆ 6 ಗಂಟೆಗೆ ಶೋ ಶುರುವಾಗಿದೆ. ಎಲ್ಲಾ ಕಡೆಗಳಲ್ಲಿ ಪುನೀತ್​ ಕಟೌಟ್​ಗಳು ರಾರಾಜಿಸುತ್ತಿವೆ.

Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?
ಪುನೀತ್​ ರಾಜ್​ಕುಮಾರ್​ - ಯುವರತ್ನ
ಮದನ್​ ಕುಮಾರ್​
| Edited By: |

Updated on:Apr 01, 2021 | 8:56 AM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಯುವರತ್ನ’ ಕೂಡ ಮುಂಚೂಣಿಯಲ್ಲಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಬಹುದಿನಗಳಿಂದ ಕಾದಿದ್ದರು. ಇಂದು (ಏ.1) ಅದ್ದೂರಿಯಾಗಿ ಎಲ್ಲಾ ಕಡೆ ಯುವರತ್ನ ರಿಲೀಸ್​ ಆಗುತ್ತಿದ್ದು, ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆಯೇ ಈ ಸಿನಿಮಾ ಧೂಳೆಬ್ಬಿಸುತ್ತಿದೆ.

ಕಳೆದ 2 ವರ್ಷಗಳಿಂದ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳಿಗೆ ಚಿತ್ರಮಂದಿರದಲ್ಲಿ ತಮ್ಮ ನೆಚ್ಚಿನ ನಟನ ದರ್ಶನ ಆಗಿಲ್ಲ. ಹಾಗಾಗಿ ಎಲ್ಲರಲ್ಲೂ ಹೆಚ್ಚಿನ ಕಾತರ ಇದೆ. ಅದಕ್ಕೆ ತಕ್ಕಂತೆಯೇ ದೊಡ್ಡಮಟ್ಟದಲ್ಲಿ ಸಿನಿಮಾ ಸೌಂಡು ಮಾಡುತ್ತಿದೆ. ಕರ್ನಾಟಕದ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯುವರತ್ನನ ಆಗಮನ ಆಗುತ್ತಿದೆ. ಕನ್ನಡದ ಜೊತೆಗೆ ತೆಲುಗಿಗೂ ಈ ಸಿನಿಮಾ ಡಬ್​ ಆಗಿದೆ. ಆಂಧ್ರ ಮತ್ತು ತೆಲಂಗಾಣದ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ.

ಸ್ಟಾರ್​ ಸಿನಿಮಾಗಳನ್ನು ಮುಂಜಾನೆಯೇ ಕಣ್ತುಂಬಿಕೊಳ್ಳದಿದ್ದರೆ ಅಭಿಮಾನಿಗಳಿಗೆ ಸಮಾಧಾನವೇ ಆಗುವುದಿಲ್ಲ. ಅಪ್ಪು ಫ್ಯಾನ್ಸ್​ಗೂ ಈ ಮಾತು ಅನ್ವಯ. ಗುರುವಾರ ಬೆಳಗ್ಗೆಯೇ ಅನೇಕ ಚಿತ್ರಮಂದಿರಗಳಲ್ಲಿ ಯುವರತ್ನ ಪ್ರದರ್ಶನ ಆರಂಭ ಆಗಿದೆ. ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ, ಸಿದ್ದಲಿಂಗೇಶ್ವರ, ತಾವರೆಕರೆಯ ಬಾಲಾಜಿ ಚಿತ್ರಮಂದಿರ ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಶುರುವಾಗಿದೆ. ಎಲ್ಲಾ ಕಡೆಗಳಲ್ಲಿ ಪುನೀತ್​ ಕಟೌಟ್​ಗಳು ರಾರಾಜಿಸುತ್ತಿವೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಯುವರತ್ನ ಚಿತ್ರಕ್ಕೆ 650 ಶೋಗಳು ಮೀಸಲಾಗಿವೆ. ಬಹುತೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ. ಇನ್ನು, ವಿದೇಶದಲ್ಲೂ ಪುನೀತ್​ ಹವಾ ಜೋರಾಗಿರಲಿದೆ. ಕರ್ನಾಟಕದ ರೀತಿಯೇ ಅಮೆರಿಕಾ, ಸಿಂಗಾಪುರ, ದುಬೈ ಮುಂತಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಆಗುತ್ತಿದೆ.

‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರಿಗೆ ಭಾರಿ ಯಶಸ್ಸು ಸಿಕ್ಕಿತ್ತು. ಈಗ ಎರಡನೇ ಬಾರಿಗೆ ಈ ನಟ-ನಿರ್ದೇಶಕನ ಪವರ್​ಫುಲ್ ಕಾಂಬಿನೇಷನ್​ನಲ್ಲಿ ಯುವರತ್ನ ಸಿನಿಮಾ ಮೂಡಿಬಂದಿದ್ದು, ಸಹಜವಾಗಿಯೇ ಹೈಪ್​ ಸೃಷ್ಟಿಯಾಗಿದೆ. ಪುನೀತ್​ಗೆ ನಾಯಕಿಯಾಗಿ ಸಾಯೇಷಾ ನಟಿಸಿದ್ದಾರೆ.

ಪ್ರಕಾಶ್​ ರೈ, ಡಾಲಿ ಧನಂಜಯ, ಸೋನೂ ಗೌಡ, ದಿಗಂತ್​, ರಾಧಿಕಾ ಶರತ್​ ಕುಮಾರ್​, ಸಾಯಿಕುಮಾರ್​ ಮುಂತಾದ ಖ್ಯಾತ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಎಸ್​. ಥಮನ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಪಾಠಶಾಲಾ..’ ಹಾಡು ಗಮನ ಸೆಳೆದಿದೆ. ಹಲವು ವರ್ಷಗಳ ಬಳಿಕ ಪುನೀತ್​ ರಾಜ್​ಕುಮಾರ್​ ಅವರು ಕಾಲೇಜು ವಿದ್ಯಾರ್ಥಿ ಆಗಿ ಕಾಣಿಸಿಕೊಂಡಿರುವುದು ವಿಶೇಷ.

ಇದನ್ನೂ ಓದಿ: ಯುವರತ್ನ ಸಿನಿಮಾದಲ್ಲಿ ನನ್ನ ಪಾತ್ರ ರಿವೀಲ್ ಮಾಡಬಾರ್ದು ಅಂತ ಪ್ರಾಮಿಸ್ ಮಾಡಿಸ್ಕೋಂಡಿದ್ದಾರೆ: ನಟಿ ಸೋನುಗೌಡ

ಅಪ್ಪು ಸಿನಿಮಾಗಳಲ್ಲಿ ಹೈ ಬಜೆಟ್ ಸಿನಿಮಾ ಯುವರತ್ನ

Published On - 6:35 am, Thu, 1 April 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್