AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Pre-Release Event: ‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್​ಗೆ ಕೊನೆಯ ಹಂತದ ಸಿದ್ಧತೆ; ಭಾಗವಹಿಸಲಿದ್ದಾರೆ ಈ ತಾರೆಯರು

Puneeth Rajkumar | Shiva Rajkumar: ಇಂದು (ಮಾ.13) ‘ಜೇಮ್ಸ್’ ಚಿತ್ರದ ಪ್ರಿ-ರಿಲೀಸ್ ಈವೆಂಟ್ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 7ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಈವೆಂಟ್​ಗೆ ಪಾಸ್ ವ್ಯವಸ್ಥೆ ಹೇಗೆ? ಯಾವೆಲ್ಲಾ ತಾರೆಯರು ಕಾಣಿಸಿಕೊಳ್ಳಲಿದ್ದಾರೆ? ಇಲ್ಲಿದೆ ಮಾಹಿತಿ.

James Pre-Release Event: ‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್​ಗೆ ಕೊನೆಯ ಹಂತದ ಸಿದ್ಧತೆ; ಭಾಗವಹಿಸಲಿದ್ದಾರೆ ಈ ತಾರೆಯರು
ಪುನೀತ್
TV9 Web
| Edited By: |

Updated on: Mar 13, 2022 | 2:47 PM

Share

ಬೆಂಗಳೂರು: ಪುನೀತ್​ ರಾಜ್​ಕುಮಾರ್ (Puneeth Rajkumar) ನಾಯಕನಾಗಿ ಕಾಣಿಸಿಕೊಂಡಿರುವ ಕೊನೆಯ ಚಿತ್ರ ‘ಜೇಮ್ಸ್’. ಹೀಗಾಗಿ ಇದರ ಮೇಲೆ ಎಲ್ಲರಿಗೆ ವಿಶೇಷ ಪ್ರೀತಿಯಿದೆ. ಪುನೀತ್ ಹುಟ್ಟುಹಬ್ಬದ ದಿನವಾದ ಮಾರ್ಚ್ 17ರಂದು ‘ಜೇಮ್ಸ್’ (James) ವಿಶ್ವದೆಲ್ಲೆಡೆ ರಿಲೀಸ್ ಆಗಲಿದೆ. ಈ ಸಂಭ್ರಮವನ್ನು ಆಚರಿಸಲು ಅಭಿಮಾನಿಗಳು ಹಬ್ಬದಂತೆ ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಇಂದು (ಮಾ.13) ಪ್ರಿ- ರಿಲೀಸ್ ಈವೆಂಟ್ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು, ಹಲವು ತಾರೆಗಳು ಭಾಗಿಯಾಗಲಿದ್ದಾರೆ. ಸಂಜೆ 7ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಇದಕ್ಕೆ ತಯಾರಿ ಹೇಗಿದೆ? ಕಾರ್ಯಕ್ರಮದಲ್ಲಿ ಪಾಸ್ ವ್ಯವಸ್ಥೆ ಹೇಗೆ? ಈವೆಂಟ್​ನಲ್ಲಿ ಭಾಗಿಯಾಗುವ ತಾರೆಯರು ಯಾರ್ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.

‘ಜೇಮ್ಸ್’ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಪುನೀತ್​ಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಈ ಎಲ್ಲಾ ಕಾರಣದಿಂದ ಅರಮನೆ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪ್ರಿ-ರಿಲೀಸ್ ಈವೆಂಟ್​ಗೆ ಪ್ರೇಕ್ಷಕರು ಆಗಮಿಸುವ ನಿರೀಕ್ಷೆ ಇದೆ. 5,000 ಅಭಿಮಾನಿಗಳಿಗೆ ಪ್ಯಾಲೇಸ್ ಗ್ರೌಂಡ್​ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಅವ್ಯವಸ್ಥೆಯಾಗಬಾರದು ಎಂಬ ಕಾರಣದಿಂದ ಪಾಸ್ ವ್ಯವಸ್ಥೆ ಮಾಡಲಾಗಿದೆ. 1 ಪಾಸ್​ನಲ್ಲಿ ಇಬ್ಬರಿಗೆ ಮಾತ್ರ ಕಾರ್ಯಕ್ರಮ ವೀಕ್ಷಿಸಲು ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈವೆಂಟ್​ಗಾಗಿ 100/40 ಅಳತೆಯ ಬೃಹತ್ ಸ್ಟೇಜ್ ಸಿದ್ಧವಾಗಿದೆ. ಸ್ಟೇಜ್ ಮೇಲೆ ದೊಡ್ಡದಾದ ಎಲ್​ಇಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ. ಇಂದಿನ ಕಾರ್ಯಕ್ರಮಕ್ಕೆ ಮುಕ್ತ ಅವಕಾಶವಿದ್ದು, ಈಗಾಗಲೇ ಅಭಿಮಾನಿಗಳಿಗಾಗಿ 2500 ಪಾಸ್ ನೀಡಲಾಗಿದೆ. ಒಟ್ಟು 5,000 ಅಭಿಮಾನಿಗಳಿಗೆ ಪ್ರವೇಶ ಸಿಗಲಿದೆ. ಇದಲ್ಲದೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 18 ಎಲ್​ಇಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ. ಇದರಿಂದ ಕಾರ್ಯಕ್ರಮ ವೀಕ್ಷಣೆ ಮತ್ತಷ್ಟು ಸುಲಭವಾಗಲಿದೆ.

‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್​ಗೆ ಯಾರೆಲ್ಲಾ ಸಾಕ್ಷಿಯಾಗಲಿದ್ದಾರೆ?

‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್​ ಅನ್ನು ದೊಡ್ಡ ಮಟ್ಟದಲ್ಲಿ ನಡೆಸಲಾಗುತ್ತಿದೆ. ಇದರಲ್ಲಿ ದೊಡ್ಮನೆ ಕುಟುಂಬ ಭಾಗಿಯಾಗಲಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಉಪಸ್ಥಿತರಿರಲಿದ್ದಾರೆ. ವಿನಯ್ ರಾಜ್ ಕುಮಾರ್, ಗುರು ರಾಘವೇಂದ್ರ, ಧೀರನ್ ರಾಮ್‌ಕುಮಾರ್, ಧನ್ಯ ರಾಮ್ ಕುಮಾರ್ ಹಾಗೂ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸ್ಯಾಂಡಲ್​ವುಡ್ ತಾರೆಯರಾದ ಉಪೇಂದ್ರ, ಶ್ರೀ ಮುರಳಿ, ಚರಣ್ ರಾಜ್ ಮೊದಲಾದವರು ಕೂಡ ಇರಲಿದ್ದಾರೆ.

ಬಹುಭಾಷಾ ತಾರೆಯರಾದ ಶ್ರೀಕಾಂತ್ ಮೆಕಾ, ಶರತ್ ಕುಮಾರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.  ‘ಜೇಮ್ಸ್’ ನಾಯಕಿ ಪ್ರಿಯಾ ಆನಂದ್ ಹಾಗೂ ಸಂಪೂರ್ಣ ‘ಜೇಮ್ಸ್’ ಚಿತ್ರತಂಡ ಕಾರ್ಯಕ್ರಮದಲ್ಲಿ ಇರಲಿದ್ದಾರೆ.

ಮಾರ್ಚ್ 17ರಂದು ‘ಜೇಮ್ಸ್’ ತೆರೆಗೆ:

ಪುನೀತ್ ಜನ್ಮದಿನವಾದ ಮಾರ್ಚ್ 17ರಂದು ‘ಜೇಮ್ಸ್’ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಕಿಶೋರ್ ಪತ್ತಿಕೊಂಡ ನಿರ್ಮಾಣದ ಈ ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಚರಣ್ ರಾಜ್ ಸಂಗೀತ ನೀಡಿದ್ದು, ಈಗಾಗಲೇ ರಿಲೀಸ್ ಆಗಿರುವ ಹಾಡುಗಳು, ಟೀಸರ್ ಮೋಡಿ ಮಾಡಿವೆ. ಪುನೀತ್​ಗೆ ನಾಯಕಿಯಾಗಿ ಪ್ರಿಯಾ ಆನಂದ್ ನಟಿಸಿದ್ದಾರೆ. ಚಿಕ್ಕಣ್ಣ, ಗಜಪಡೆ ಹರ್ಷ, ತಿಲಕ್​ ಶೇಖರ್​ ಅವರು ಹೀರೋ ಸ್ನೇಹಿತರ​ ಪಾತ್ರ ಮಾಡಿದ್ದಾರೆ. ಶ್ರೀಕಾಂತ್​ ಮುಕೇಶ್​ ರಿಷಿ, ಅನು ಪ್ರಭಾಕರ್​, ಆದಿತ್ಯ ಮೆನನ್​, ಸಾಧುಕೋಕಿಲ, ರಂಗಾಯಣ ರಘು ಸೇರಿ ಹಲವಾರು ಕಲಾವಿದರು ನಟಿಸಿದ್ದಾರೆ. ರವಿ ಸಂತೆ ಹಕ್ಲು ಕಲಾ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನ, ಸ್ವಾಮಿ ಜೆ. ಛಾಯಾಗ್ರಹಣ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ಗೆ ಶಿವರಾಜ್​ಕುಮಾರ್ ಕಂಠದಾನ ಮಾಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಡಾ.ರಾಜ್ ಹಾದಿಯಲ್ಲಿ ಅಪ್ಪು; ಮೈಸೂರು ವಿವಿಯಿಂದ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ

100 ಎಕರೆ ಜಾಗದಲ್ಲಿ RRR ಪ್ರೀ-ರಿಲೀಸ್​ ಇವೆಂಟ್​ಗೆ ಸಿದ್ಧತೆ;​ ಅತಿಥಿಯಾಗಿ ಬರ್ತಾರೆ ಸಿಎಂ ಬೊಮ್ಮಾಯಿ, ಶಿವಣ್ಣ

Follow Us
TV9 Web
TV9 Web

TV9 Kannada

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ