Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

Puneeth Rajkumar: ಒಂದು ವೇಳೆ ಈ ಸಿನಿಮಾ ಸೆಟ್ಟೇರಿದ್ದರೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ದೇಶವೇ ತಿರುಗಿ ನೋಡುವಂತಹ ಸಿನಿಮಾ ಆಗುತ್ತಿತ್ತು ಎಂಬುದರಲ್ಲಿ ಅನುಮಾನವೇ ಬೇಡ. ಆದರೆ ಅಂಥ ಕನಸು ಕೈಗೂಡುವ ಮುನ್ನವೇ ಸಾವಿನ ಊರಿಗೆ ಪುನೀತ್​ ರಾಜ್​ಕುಮಾರ್​ ಪ್ರಯಾಣ ಬೆಳೆಸಿರುವುದು ದುರಂತ.

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
‘ಮಿಷನ್ ಕೊಲಂಬಸ್’ ಸಿನಿಮಾ ಪೋಸ್ಟರ್​ನಲ್ಲಿ ಪುನೀತ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 31, 2021 | 2:40 PM

ಪುನೀತ್​ ರಾಜ್​ಕುಮಾರ್​ ಅವರು ನಿರ್ದೇಶಕರ ನಟ ಆಗಿದ್ದರು. ಅವರ ಜೊತೆ ಕೆಲಸ ಮಾಡಬೇಕು ಎಂಬುದು ಅನೇಕ ನಿರ್ದೇಶಕರ ಕನಸಾಗಿತ್ತು. ಅಪ್ಪು ಅವರಿಗೋಸ್ಕರವೇ ಹಲವಾರು ಪ್ರತಿಭಾವಂತ ಡೈರೆಕ್ಟರ್​ಗಳು ಕಥೆ ಸಿದ್ಧಪಡಿಸಿಕೊಂಡಿದ್ದರು. ಜೀವನದಲ್ಲಿ ಒಮ್ಮೆಯಾದರೂ ಪುನೀತ್​ ಜೊತೆ ಕೆಲಸ ಮಾಡಬೇಕು ಎಂದುಕೊಂಡಿದ್ದ ಎಲ್ಲರ ಕನಸು ಈಗ ಭಗ್ನವಾಗಿದೆ. ಕನ್ನಡದ ಖ್ಯಾತ ನಿರ್ದೇಶಕ ಮಂಸೋರೆ ಕೂಡ ‘ಪವರ್​ ಸ್ಟಾರ್​’ ಜೊತೆ ಕೆಲಸ ಮಾಡಲು ಬಯಸಿದ್ದರು. ಅಷ್ಟೇ ಅಲ್ಲ, ಅದಕ್ಕಾಗಿ ಅವರು ಸೂಕ್ತ ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದರು. ಆದರೆ ಆ ಕನಸು ನನಸಾಗುವ ಮುನ್ನವೇ ಅಪ್ಪು ಇಹಲೋಕ ತ್ಯಜಿಸಿರುವುದು ವಿಪರ್ಯಾಸ.

‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​ 1978’ ಸಿನಿಮಾಗಳ ಮೂಲಕ ಗುರುತಿಸಿಕೊಂಡವರು ನಿರ್ದೇಶಕ ಮಂಸೋರೆ. ಸಂವೇದನಾಶೀಲ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಒಳ್ಳೆಯ ಸಿನಿಮಾಗಳನ್ನು ನೀಡಿದ್ದಾರೆ. ಪುನೀತ್​ ರಾಜ್​ಕುಮಾರ್ ಜೊತೆ ಸಿನಿಮಾ ಮಾಡಬೇಕು ಎಂದು ಅವರು ಹಲವು ವರ್ಷಗಳಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆ ವಿಚಾರವನ್ನು ಈಗ ಅವರು ಭಾರದ ಮನಸ್ಸಿನಿಂದ ಹಂಚಿಕೊಂಡಿದ್ದಾರೆ.

ಪುನೀತ್​ಗೆ ನಿರ್ದೇಶನ ಮಾಡಬೇಕು ಎಂದುಕೊಂಡಿದ್ದ ಸಿನಿಮಾಗೆ ಮಂಸೋರೆ ‘ಮಿಷನ್​ ಕೊಲಂಬಸ್​’ ಎಂದು ಶೀರ್ಷಿಕೆ ಇಟ್ಟಿದ್ದರು. ತಮ್ಮ ಸ್ನೇಹಿತರಾದ ಟಿಕೆ ದಯಾನಂದ್​ ಮತ್ತು ವೀರೇಂದ್ರ ಮಲ್ಲಣ್ಣ ಜೊತೆಗೂಡಿ ಅದರ ಕಾನ್ಸೆಪ್ಟ್​ ಮತ್ತು ಸ್ಕ್ರಿಪ್ಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ, ಪುನೀತ್​ ಅವರ ಲುಕ್​ ಹೇಗಿರಬೇಕು ಎಂಬುದನ್ನೂ ಅವರು ಕಲ್ಪಿಸಿಕೊಂಡಿದ್ದರು. ಅದಕ್ಕೆ ತಕ್ಕಂತೆ ಕಲಾವಿದ ಸರವಣ ಕುಮಾರ್ ಅವರಿಂದ ವಿಶೇಷವಾದ ಪೋಸ್ಟರ್​ ಕೂಡ ಸಿದ್ಧಪಡಿಸಲಾಗಿತ್ತು. ಆ ಪೋಸ್ಟರ್​ ಅನ್ನು ಈಗ ಮಂಸೋರೆ ಹಂಚಿಕೊಂಡಿದ್ದಾರೆ.

ಮಾಸಿದ ಗಡ್ಡ ಮತ್ತು ಕೂದಲಿನ ಗೆಟಪ್​ನೊಂದಿಗೆ, ಕೊಲಂಬಸ್​​ ಪಾತ್ರದಲ್ಲಿ ಪುನೀತ್​ ಅವರನ್ನು ಕಲ್ಪಿಸಿಕೊಳ್ಳಲಾಗಿತ್ತು. ಪೋಸ್ಟರ್​ ಹಿನ್ನೆಲೆಯಲ್ಲಿ ಹಡಗು ಗಮನ ಸೆಳೆಯುತ್ತಿದೆ. ಒಂದು ವೇಳೆ ಈ ಸಿನಿಮಾ ಸೆಟ್ಟೇರಿದ್ದರೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ದೇಶವೇ ತಿರುಗಿ ನೋಡುವಂತಹ ಸಿನಿಮಾ ಆಗುತ್ತಿತ್ತು ಎಂಬುದರಲ್ಲಿ ಅನುಮಾನವೇ ಬೇಡ. ಆದರೆ ಅಂಥ ಕನಸು ಕೈಗೂಡುವ ಮುನ್ನವೇ ಸಾವಿನ ಊರಿಗೆ ಪುನೀತ್​ ಪ್ರಯಾಣ ಬೆಳೆಸಿರುವುದು ದುರಂತ.

ಕೊನೆಯುಸಿರು ಎಳೆಯುವುದಕ್ಕೂ ಮುನ್ನ ಪುನೀತ್​ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ಜೇಮ್ಸ್​’ ಮತ್ತು ‘ದ್ವಿತ್ವ’ ಚಿತ್ರಗಳ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ‘ಜೇಮ್ಸ್​’ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಗಿದಿದ್ದು, ಡಬ್ಬಿಂಗ್​ ಮತ್ತು ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದುಕೊಂಡಿತ್ತು. ಆದರೂ ಆ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್​ ಕುಮಾರ್​ ಭರಸವೆ ನೀಡಿದ್ದಾರೆ.

ಇದನ್ನೂ ಓದಿ:

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ