ಪುನೀತ್ ರಾಜ್​ಕುಮಾರ್​​ಗೆ ನಾನ್​ವೆಜ್​​ ಎಂದರೆ ಅದೆಷ್ಟು ಪ್ರೀತಿಯಾಗಿತ್ತು; ಇಲ್ಲಿದೆ ವಿಡಿಯೋ

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮವನ್ನು ಪುನೀತ್​ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಅವರ ನಿರೂಪಣೆ ಸಾಕಷ್ಟು ಜನರಿಗೆ ಇಷ್ಟವಾಗಿತ್ತು.

ಪುನೀತ್ ರಾಜ್​ಕುಮಾರ್​​ಗೆ ನಾನ್​ವೆಜ್​​ ಎಂದರೆ ಅದೆಷ್ಟು ಪ್ರೀತಿಯಾಗಿತ್ತು; ಇಲ್ಲಿದೆ ವಿಡಿಯೋ
ಪುನೀತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 01, 2021 | 3:55 PM

ಪುನೀತ್​ ರಾಜ್​ಕುಮಾರ್​ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದರು. ನಿತ್ಯ ಅವರು ಜಿಮ್​ನಲ್ಲಿ ಬೆವರು ಹರಿಸುತ್ತಿದ್ದರು. ಸದಾ ಫಿಟ್​ ಆಗಿರೋಕೆ ಅವರದ್ದು ಮೊದಲ ಆದ್ಯತೆ. ಇಷ್ಟಾದರೂ ಪುನೀತ್ ರಾಜ್​ಕುಮಾರ್​ ಬದುಕುಳಿಯಲಿಲ್ಲ. ಹೃದಯಾಘಾತಕ್ಕೆ ಒಳಗಾದ ಸ್ವಲ್ಪ ಹೊತ್ತಿನ್ನಲ್ಲೇ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಆದರೂ ಅನೇಕರ ಬಳಿ ಈ ವಿಚಾರವನ್ನು ನಂಬೋಕೆ ಆಗುತ್ತಿಲ್ಲ. ಪುನೀತ್​ ಫಿಟ್​ನೆಸ್​ಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಿದ್ದರೋ ಅಷ್ಟೇ ಪ್ರಾಮುಖ್ಯತೆಯನ್ನು ಆಹಾರಕ್ಕೂ ಕೊಡುತ್ತಿದ್ದರು. ಅವರಿಗೆ ನಾನ್​ವೆಜ್​ ಎಂದರೆ ಪಂಚಪ್ರಾಣ ಈ ಬಗ್ಗೆ ಶೋನಲ್ಲಿ ಅವರು ಹೇಳಿಕೊಂಡಿದ್ದಾರೆ.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮವನ್ನು ಪುನೀತ್​ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಅವರ ನಿರೂಪಣೆ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಬಂದ ಸ್ಪರ್ಧಿಗಳ ಜತೆ ಆಹಾರದ ಬಗ್ಗೆ ಮಾತನಾಡಿದ್ದರು. ಇದನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಕಡೆಗಳಿಂದ ಸ್ಪರ್ಧಿಗಳು ಆಗಮಿಸುತ್ತಿದ್ದರು. ಪ್ರತಿ ಜಿಲ್ಲೆ, ತಾಲೂಕಿನಲ್ಲೂ ಅಲ್ಲಿಯದ್ದೇ ಆದ ಆಹಾರ ಸಂಸ್ಕೃತಿ ಇರುತ್ತದೆ. ಮಂಗಳೂರು ಕಡೆ ತೆರಳಿದರೆ ಕಡಲ ಜೀವಿಗಳಿಂದ ಮಾಡಿದ ಆಹಾರ ಅದ್ಭುತವಾಗಿ ಸಿಗುತ್ತದೆ. ಈ ಎಲ್ಲಾ ವಿಚಾರಗಳನ್ನು ಪುನೀತ್​ ಈ ಶೋನಲ್ಲಿ ಮಾತನಾಡಿದ್ದರು. ಅಲ್ಲದೆ, ಗೊತ್ತಿಲ್ಲದ ವಿಚಾರಗಳನ್ನು ಅವರು ಕೇಳಿ ತಿಳಿದುಕೊಳ್ಳುತ್ತಿದ್ದರು.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು. ಇಡೀ ಚಿತ್ರತಂಡ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಮಾಡಿತ್ತು. ಇದರ ಜತೆಗೆ ಪುನೀತ್​ ಸಾಕಷ್ಟು ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಅದೂ ಸರ್​ಪ್ರೈಸ್​ ಆಗುವ ರೀತಿಯಲ್ಲಿ.

ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್​ ಮಾರ್ಚ್​ 21ರಂದು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪುನೀತ್ ಎಂದರೆ ಯಾಕೆ ಇಷ್ಟ ಮತ್ತು ಎಷ್ಟು ಇಷ್ಟ ಎಂಬುದನ್ನು ಅಭಿಮಾನಿಗಳು ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ, ಅವರನ್ನು ನೋಡಬೇಕು ಎಂದು ಎಷ್ಟು ವರ್ಷ ಕಾದಿದ್ದೆ ಎಂಬುದನ್ನೂ ವಿವರಿಸುತ್ತಿರುವಾಗಲೆ ಪುನೀತ್​ ಬರುತ್ತಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡುತ್ತಾರೆ. ಪುನೀತ್​ ಅವರನ್ನು ನೋಡಿ ಅನೇಕರು ಅಚ್ಚರಿಗೆ ಒಳಗಾಗುತ್ತಾರೆ. ಈ ವೇಳೆ ಪುನೀತ್ ಅವರೇ ಸಮಾಧಾನ ಮಾಡುವ ಕೆಲಸವನ್ನೂ ಮಾಡುತ್ತಾರೆ. ಅಪ್ಪು ಮರಣಾನಂತರ ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ