ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ
ಪುನೀತ್​ ರಾಜ್​ಕುಮಾರ್​

ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

Rajesh Duggumane

|

Jun 05, 2021 | 9:31 PM

ಕೊವಿಡ್​ ಎರಡನೇ ಅಲೆಯ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಚಿತ್ರರಂಗದ ಸಾಕಷ್ಟು ಮಂದಿ ಕೆಲಸ ಇಲ್ಲದೆ ಕಷ್ಟಕ್ಕೆ ಒಳಗಾಗಿದ್ದಾರೆ. ಇವರಿಗೆ ಸಹಾಯ ಮಾಡೋಕೆ ಸಾಕಷ್ಟು ಮಂದಿ ಮುಂದೆ ಬಂದಿದ್ದಾರೆ. ಈಗ ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಇಂದು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಸಂಕಷ್ಟದಲ್ಲಿರುವ ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಲ್ಲುತ್ತಿದ್ದೇನೆ. 10 ಲಕ್ಷ ರೂಪಾಯಿ ಹಣದಲ್ಲಿ ಸಿನಿಮಾ ಇಂಡಸ್ಟ್ರಿಯ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿತರಿಸಲು ಸೂಚಿಸಿದ್ದೇನೆ ಎಂದು ಪುನೀತ್​ ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಕ್ಷ ಸಾರಾಗೋವಿಂದ್ ಹಾಗೂ ಕಾರ್ಮಿಕ ಒಕ್ಕೂಟದ ಕಾರ್ಯದರ್ಶಿ ರವಿಂದ್ರನಾಥ್ ಅವರು ಪುನೀತ್​ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದ್ದಾರೆ.

‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಇದನ್ನೂ ಓದಿ: ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Follow us on

Related Stories

Most Read Stories

Click on your DTH Provider to Add TV9 Kannada