Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​

Puneeth Rajkumar: ಪುನೀತ್​ ರಾಜ್​ಕುಮಾರ್​ ನಿಧನರಾದ ನಂತರ ಅವರ ಟ್ವಿಟರ್ ಖಾತೆಯಲ್ಲಿ ಯಾವುದೇ ಚಟುವಟಿಕೆ ಇರಲಿಲ್ಲ. ಆದ್ದರಿಂದ ಬ್ಲೂ ಟಿಕ್​ ತೆಗೆಯಲಾಗಿತ್ತು. ಈ ಕ್ರಮವನ್ನು ಅಭಿಮಾನಿಗಳು ವಿರೋಧಿಸಿದ್ದರು.

Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​ ಖಾತೆ
Follow us
TV9 Web
| Updated By: ಮದನ್​ ಕುಮಾರ್​

Updated on: Jul 18, 2022 | 11:18 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಜೀವಂತವಾಗಿ ಇರುತ್ತಾರೆ. ಭೌತಿಕವಾಗಿ ಅವರು ಇಲ್ಲ ಎಂದಮಾತ್ರಕ್ಕೆ ತಮ್ಮ ನೆಚ್ಚಿನ ನಟನಿಗೆ ಕಿಂಚಿತ್ತೂ ಅವಮಾನ ಆಗಲು ಫ್ಯಾನ್ಸ್​ ಬಿಡುವುದಿಲ್ಲ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅಪ್ಪು ಅಭಿಮಾನಿಗಳು ಧ್ವನಿ ಎತ್ತುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಟ್ವಿಟರ್​ (Twitter) ಸಂಸ್ಥೆಯಿಂದ ಆಗಿದ್ದ ಪ್ರಮಾದ. ಹೌದು, ಇತ್ತೀಚೆಗೆ ಪುನೀತ್​ ರಾಜ್​ಕುಮಾರ್​ ಅವರ ಟ್ವಿಟರ್​ (Puneeth Rajkumar Twitter) ಖಾತೆಯಲ್ಲಿ ಇದ್ದ ಬ್ಲೂ ಟಿಕ್​ ತೆಗೆದುಹಾಕಲಾಗಿತ್ತು. ಆ ಕ್ರಮದ ವಿರುದ್ಧ ‘ಪವರ್​ ಸ್ಟಾರ್​’ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಟ್ವಿಟರ್​ ಸಂಸ್ಥೆ ಎಚ್ಚೆತ್ತುಕೊಂಡಿದೆ. ಅಭಿಮಾನಿಗಳ ಭಾವನೆಗೆ ಗೌರವ ಕೊಟ್ಟು, ಅಪ್ಪು ಟ್ವಿಟರ್​ ಖಾತೆಗೆ ಬ್ಲೂ ಟಿಕ್​ ಮರಳಿ ನೀಡಲಾಗಿದೆ.

ಜನಪ್ರಿಯ ವ್ಯಕ್ತಿ ಮತ್ತು ಸಂಸ್ಥೆಗಳ ಟ್ವಿಟರ್​ ಖಾತೆಗಳಿಗೆ ಬ್ಲೂ ಟಿಕ್​ ನೀಡಲಾಗುತ್ತದೆ. ನಿರ್ದಿಷ್ಟ ಖಾತೆ ಅಧಿಕೃತವಾಗಿದೆ ಎಂಬುದನ್ನು ಈ ಬ್ಲೂ ಟಿಕ್​ ಸೂಚಿಸುತ್ತದೆ. ನಕಲಿ ಮತ್ತು ಅಸಲಿ ಖಾತೆಗಳ ನಡುವೆ ವ್ಯತ್ಯಾಸ ತಿಳಿಯಲು ಕೂಡ ಈ ಚಿಹ್ನೆ ಸಹಕಾರಿ ಆಗುತ್ತದೆ. ಬಹುತೇಕ ಎಲ್ಲ ಸೆಲೆಬ್ರಿಟಿಗಳ ಸೋಶಿಯಲ್​ ಮೀಡಿಯಾ ಖಾತೆಗಳಿಗೆ ಬ್ಲೂ ಟಿಕ್​ ನೀಡಲಾಗಿರುತ್ತದೆ. ಆದರೆ ದೀರ್ಘ ಕಾಲದವರೆಗೆ ಆ ಖಾತೆಯಲ್ಲಿ ಯಾವುದೇ ಚಟುವಟಿಕೆಗಳು ಇಲ್ಲದಿದ್ದರೆ ಬ್ಲೂ ಟಿಕ್​ ತೆಗೆದುಹಾಕಲಾಗುತ್ತದೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?
Image
ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ
Image
ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ

ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುವ ಟ್ವಿಟರ್​ ಬಳಸುತ್ತಿದ್ದರು. ಅವರ ನಿಧನರಾದ ನಂತರ ಆ ಖಾತೆಯಲ್ಲಿ ಯಾವುದೇ ಚಟುವಟಿಕೆ ಇರಲಿಲ್ಲ. ಆದ್ದರಿಂದ ಬ್ಲೂ ಟಿಕ್​ ತೆಗೆಯಲಾಗಿತ್ತು. ಇದನ್ನು ಖಂಡಿಸಿ ಅಭಿಮಾನಿಗಳು ಟ್ವಿಟರ್​ ಸಂಸ್ಥೆ ವಿರುದ್ಧ ಗರಂ ಆಗಿದ್ದರು. ಪರಿಣಾಮವಾಗಿ, ಈಗ ಅಪ್ಪು ಅವರ ಖಾತೆಗೆ ಮರಳಿ ಬ್ಲೂ ಟಿಕ್​ ನೀಡಲಾಗಿದೆ. ಇದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಕುರಿತು ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಕೂಡ ಟ್ವೀಟ್​ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನದ ನಂತರ ‘ಪಿಆರ್​ಕೆ ಪ್ರೊಡಕ್ಷನ್ಸ್​’ ಕುರಿತ ಎಲ್ಲ ಅಪ್​ಡೇಟ್​ಗಳನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ನೀಡಲಾಗುತ್ತಿದೆ. ಅಪ್ಪು ಅವರ ಕನಸಿನ ಪ್ರಾಜೆಕ್ಟ್​ ಆಗಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್​ 28ರಂದು ಚಿತ್ರಮಂದಿರಗಳಲ್ಲೇ ಈ ಡಾಕ್ಯುಮೆಂಟರಿ ರಿಲೀಸ್​ ಆಗಲಿದೆ. ಅದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್