ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ.

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 01, 2021 | 9:58 PM

ನಟ ಪುನೀತ್​ ರಾಜ್​ಕುಮಾರ್​ ಅವರು ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆ ಬಿಡಾರಕ್ಕೆ ಇಂದು (ಸೆಪ್ಟೆಂಬರ್​ 1) ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ನೋಡೋಕೆ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಅಷ್ಟಕ್ಕೂ ಅವರು ಸಕ್ರೆಬೈಲಿಗೆ ತೆರಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.  

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಆಗಮಿಸುತ್ತಿರುವ ವಿಚಾರವನ್ನು ತಿಳಿದಿದ್ದ ಅಭಿಮಾನಿಗಳು ಅಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು. ಸುಮಾರು ಎರಡು ಗಂಟೆ ಕಾಲ ಪುನೀತ್​ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.

ಓಪನ್ ಜೀಪ್​ನಲ್ಲಿ ಪುನೀತ್​ ಆಗಮಿಸಿದ್ದಾರೆ. ಆನೆಗಳನ್ನು ಅವರು ಮುದ್ದಾಡುವ ದೃಶ್ಯ, ಕುಂತಿ ಹಾಗೂ ಧನುಷ್ ಹೆಸರಿನ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಇನ್ನು, ಪುನೀತ್​ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಗಳ ಕೋರಿಕೆಗೆ ಅಪ್ಪು ಮಣಿದಿದ್ದಾರೆ. ಶೂಟಿಂಗ್​​ಗೆ ಬ್ರೇಕ್ ಕೊಟ್ಟು ಅವರಿಗೆ ದರ್ಶನ ನೀಡಿದ್ದಾರೆ. ಈ ವೇಳೆ ಆಭಿಮಾನಿಗಳಿಗೆ ಕೈ ಮುಗಿದು  ಕೃತಜ್ಞತೆ ಸಲ್ಲಿಸಿದ್ದಾರೆ ಪುನೀತ್. ಕೆಲವರು ಪುನೀತ್ ರಾಜ್​​ಕುಮಾರ್ ಜತೆ ಫೋಟೋ ತೆಗೆಸಿಕೊಂಡಿದ್ದಾರೆ.

ಇತ್ತೀಚೆಗೆ ಕೊವಿಡ್​ ಬಗ್ಗೆ ಪುನೀತ್​ ಜಾಗೃತಿ ಮೂಡಿಸಿದ್ದರು. ಈ ಬಗ್ಗೆ ವಿಡಿಯೋ ಸಂದೇಶ ನೀಡಿದ್ದ ಪುನೀತ್​ ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದರು.

ಇದನ್ನೂ ಓದಿ: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

Published On - 9:36 pm, Wed, 1 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ