ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ
ಪುನೀತ್​-ಪಾರ್ವತಮ್ಮ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 31, 2021 | 3:47 PM

ಪುನೀತ್ ರಾಜ್​ಕುಮಾರ್​ ಅವರು ಸ್ಯಾಂಡಲ್​​ವುಡ್​ಗೆ ನೀಡಿದ ಕೊಡುಗೆ ಒಂದೆರಡಲ್ಲ. ಸ್ಟಾರ್​ ನಟನ ಮಗನಾಗಿ ಚಿತ್ರರಂಗಕ್ಕೆ ಬಂದರೂ ಸ್ವಂತ ಐಡೆಂಟಿಟಿ ಹೊಂದಿದ್ದರು. ಸಾಮಾಜಿಕ ಕೆಲಸಗಳ ಮೂಲಕವೂ ಅವರು ಹೆಚ್ಚು ಗುರುತಿಸಿಕೊಂಡಿದ್ದರು. ತಾಯಿ, ಖ್ಯಾತ ನಿರ್ಮಾಪಕಿ ಪಾರ್ವತಮ್ಮ ಬಗ್ಗೆ ಅವರು ಅಪಾರ ಪ್ರೀತಿ ಹೊಂದಿದ್ದರು. ಅಷ್ಟೇ ಅಲ್ಲ ತಾಯಿ ಬಗ್ಗೆ ಒಂದು ಮಹಾನ್​ ಕನಸನ್ನು ಕೂಡ ಕಂಡಿದ್ದರು. ಆದರೆ, ಪುನೀತ್​ ಜತೆ ಅದೂ ಈಗ ಮಣ್ಣಾಗಿದೆ.

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ. ಅವರ ದಿಟ್ಟತನ ಅನೇಕರಿಗೆ ಇಷ್ಟವಾಗಿತ್ತು. ಅವರ ಬಗ್ಗೆ ಪುಸ್ತಕ ಬರೆಯಬೇಕು ಎಂಬುದು ಪುನೀತ್​ ಕನಸಾಗಿತ್ತು. ಆದರೆ, ಅವರು ನಟನೆ, ನಿರ್ಮಾಣ ಕೆಲಸಗಳಲ್ಲಿ ಬ್ಯುಸಿಯಾದರು. ಹೀಗಾಗಿ, ಇದಕ್ಕೆ ಅವಕಾಶ ಸಿಗಲೇ ಇಲ್ಲ. ಇದರಿಂದ ಇದು ಕನಸಾಗಿಯೇ ಉಳಿದಿದೆ.

ತಾಯಿ ಪಾರ್ವತಮ್ಮ ಸಾಧನೆಗಳ ಕುರಿತು ಪುಸ್ತಕವೊಂದನ್ನು ಬರೆಯುವ ಯೋಜನೆಯನ್ನು ಪುನೀತ್ ಹಾಕಿಕೊಂಡಿದ್ದರು. ಈ ಬಗ್ಗೆ ಖುದ್ದು ಪುನೀತ್ ಮಾಹಿತಿ ನೀಡಿದ್ದರು. ಸುದ್ದಿಗೋಷ್ಠಿ ನಂತರ ಪತ್ರಕರ್ತರ ಜತೆ ಅವರು ಮಾತನಾಡುತ್ತಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ಅಮ್ಮನ ಸಾಧನೆ ಅಪಾರ. ಅವರು ದೊಡ್ಡ ನಿರ್ಮಾಪಕಿಯಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದೇಕೆ? ಈ ಜವಾಬ್ದಾರಿಯನ್ನು ಏಕೆ ತೆಗೆದುಕೊಳ್ಳಬೇಕಾಯಿತು? ಎಂಬಿತ್ಯಾದಿ ವಿಚಾರಗಳು ಜನರಿಗೆ ತಿಳಿಯಬೇಕಿದೆ. ಈ ಬಗ್ಗೆ ಅವರು ಹೇಳಿಕೊಂಡ ಕೆಲವಷ್ಟು ಮಾಹಿತಿಗಳು ಇವೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಅವರ ಬಯೋಗ್ರಫಿ ಬರೆಯಬೇಕೆಂಬ ಆಸೆಯಿದೆ. ಮುಂದಿನ ದಿನಗಳಲ್ಲಿ ಅದನ್ನು ಕಾರ್ಯರೂಪಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು