Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಪ್ರತಿ ವರ್ಷ ಮಾರ್ಚ್​ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್​ ಪತ್ನಿಗೆ ಕಾರನ್ನು ನೀಡಿದ್ದರು.

ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​
ಪುನೀತ್​-ಅಶ್ವಿನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 31, 2021 | 2:37 PM

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಪವರ್​ ಸ್ಟಾರ್​ ಪ್ರೀತಿಯಿಂದ ಪತ್ನಿಗೆ ನೀಲಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು.

ಪ್ರತಿ ವರ್ಷ ಮಾರ್ಚ್​ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್​ ಪತ್ನಿಗೆ ಕಾರನ್ನು ನೀಡಿದ್ದರು. ಈ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಉರುಸ್​ ಟ್ವಿನ್​ ಟರ್ಬೋ ಇಂಜಿನ್​ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 3.6 ಸೆಕೆಂಡ್​ಗಳಲ್ಲಿ ತಲುಪುತ್ತದೆ. ಗರಿಷ್ಠ  305 ಕಿ.ಮೀ ವೇಗದಲ್ಲಿ ಈ ಎಸ್​ಯುವಿ ಚಲಿಸಬಲ್ಲದು.

ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಇದನ್ನೂ ಓದಿ: ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ 

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು