ಪುನೀತ್ ರಾಜ್ಕುಮಾರ್ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಪುನೀತ್ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್ ಪಕ್ಕಾ ಫ್ಯಾಮಿಲಿ ಮ್ಯಾನ್. ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಪವರ್ ಸ್ಟಾರ್ ಪ್ರೀತಿಯಿಂದ ಪತ್ನಿಗೆ ನೀಲಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು.
ಪ್ರತಿ ವರ್ಷ ಮಾರ್ಚ್ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್ ಪತ್ನಿಗೆ ಕಾರನ್ನು ನೀಡಿದ್ದರು. ಈ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಉರುಸ್ ಟ್ವಿನ್ ಟರ್ಬೋ ಇಂಜಿನ್ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 3.6 ಸೆಕೆಂಡ್ಗಳಲ್ಲಿ ತಲುಪುತ್ತದೆ. ಗರಿಷ್ಠ 305 ಕಿ.ಮೀ ವೇಗದಲ್ಲಿ ಈ ಎಸ್ಯುವಿ ಚಲಿಸಬಲ್ಲದು.
ಪಿಆರ್ಕೆ ಪ್ರೊಡಕ್ಷನ್ ಏನಾಗಲಿದೆ?
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್ 2016’, ಲಾ, ಫ್ರೆಂಚ್ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್ ಹೌಸ್ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್, ಮ್ಯಾನ್ ಆಫ್ ದಿ ಮ್ಯಾಚ್, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡುತ್ತಿದೆ.
ಪಿಆರ್ಕೆ ಪ್ರೊಡಕ್ಷನ್ ಆರಂಭಿಸಿದ್ದು ಪುನೀತ್ ರಾಜ್ಕುಮಾರ್ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್ಕೆ ಪ್ರೊಡಕ್ಷನ್ ಹೌಸ್ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್ಕೆ ಪ್ರೊಡಕ್ಷನ್ ಹೌಸ್ ಜತೆ ಪಿಆರ್ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.
ಇದನ್ನೂ ಓದಿ: ವಿದೇಶಿ ನ್ಯೂಸ್ ಚಾನೆಲ್ಗಳಲ್ಲಿ ಪುನೀತ್ ನಿಧನದ ಸುದ್ದಿ; ಸೌತ್ ಕೊರಿಯಾದಲ್ಲೂ ಅಭಿಮಾನದ ಹೊಳೆ