Karnataka Ratna Award 2022 ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ

Karnataka Ratna Award Ceremony 2022 ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

Karnataka Ratna Award 2022  ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:  ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ
Karnataka Ratna Award
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 01, 2022 | 6:47 PM

ನಟ ದಿವಂಗತ ಪುನೀತ್ ರಾಜ್​ಕುಮಾರ್ ಅವರಿಗೆ (Puneeth rajkumar )ಮರಣೋತ್ತರವಾಗಿ  ಇಂದು (ನ,01) ಕರ್ನಾಟಕ ರತ್ನ ಪ್ರಶಸ್ತಿಯನ್ನು  (Karnataka Ratna Award 2022)ನೀಡಲಾಯ್ತು. ಪುನೀತ್‌ ಪತ್ನಿ ಅಶ್ವಿನಿ(Ashwini puneeth rajkumar) ಅವರು ಡಾ.ಸುಧಾಮೂರ್ತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಿಧಾನಸಭೆ ಮೆಟ್ಟಿನ ಮೇಲೆ ನಡೆದ ಸಮಾರಂಭದಲ್ಲಿ ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಧಾಮೂರ್ತಿ ಅವರು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿದರು.

ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಈವರೆಗೂ ಕರ್ನಾಟಕದಲ್ಲಿ ಎಂಟು ಜನರಿಗೆ ನೀಡಲಾಗಿದೆ. ಈ ಗೌರವಕ್ಕೆ ಪಾತ್ರರಾಗುತ್ತಿರುವ 9ನೇ ರತ್ನ ಪುನೀತ್ ರಾಜ್ ಕುಮಾರ್ ಎನ್ನುವುದು ವಿಶೇಷ. ಅಲ್ಲದೇ ಮರಣೋತ್ತರ ಪ್ರಶಸ್ತಿ ಪಡೆಯುತ್ತಿರುವ ಮೊದಲ ರತ್ನ ಇವರಾಗಿದ್ದಾರೆ.

ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ (Award) ಇದಾಗಿದ್ದು, ಪುನೀತ್ ಅವರಿಗೆ ಸಿನಿಮಾ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗಕ್ಕೆ ಈವರೆಗೂ ಎರಡು ಪ್ರಶಸ್ತಿಗಳು ಬಂದಿದ್ದು, 1992ರಲ್ಲಿ ಮೊದಲ ಬಾರಿಗೆ ಡಾ.ರಾಜ್ ಕುಮಾರ್ ಪಡೆದರೆ, 2022ರಲ್ಲಿ ಡಾ.ರಾಜ್ ಪುತ್ರ ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನಕ್ಕೆ ಆಯ್ಕೆಯಾದ್ರು.

ದೇಶದಲ್ಲಿ ಭಾರತ ರತ್ನವು ಅತ್ಯುನ್ನತ ನಾಗರಿಕ ಪ್ರಶಸ್ತಿಯಾದರೆ, ಕರ್ನಾಟಕ ಸರಕಾರವು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದು 1992ರಲ್ಲಿ ಘೋಷಣೆ ಮಾಡಿತು. ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದೆ.

Published On - 5:39 pm, Tue, 1 November 22

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ