AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ದೀಪಾವಳಿ ಹಬ್ಬಕ್ಕೆ ಪುನೀತ್​ ವಿಶ್​​; ಹೃದಯ ಭಾರ ಆಗಿಸುತ್ತವೆ ಈ ಹಳೇ ವಿಡಿಯೋಗಳು

Puneeth Rajkumar | Diwali 2022: ಬೆಳಕಿನ ಹಬ್ಬಕ್ಕೆ ಪುನೀತ್​ ರಾಜ್​ಕುಮಾರ್​ ಶುಭಕೋರಿದ್ದ ವಿಡಿಯೋಗಳು ಈಗ ವೈರಲ್​ ಆಗುತ್ತಿವೆ. ಇವುಗಳನ್ನು ನೋಡಿ ಅಪ್ಪು ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

Puneeth Rajkumar: ದೀಪಾವಳಿ ಹಬ್ಬಕ್ಕೆ ಪುನೀತ್​ ವಿಶ್​​; ಹೃದಯ ಭಾರ ಆಗಿಸುತ್ತವೆ ಈ ಹಳೇ ವಿಡಿಯೋಗಳು
ಪುನೀತ್​ ರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on:Oct 24, 2022 | 9:30 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಇಂದು ಭೌತಿಕವಾಗಿ ನಮ್ಮ ಜೊತೆ ಇಲ್ಲದೇ ಇರಬಹುದು. ಆದರೆ ಅವರ ನೆನಪು ಸದಾ ಶಾಶ್ವತ. ಎಲ್ಲ ವಿಶೇಷ ಸಂದರ್ಭಗಳಲ್ಲೂ ಅಭಿಮಾನಿಗಳು ಅವರನ್ನು ನೆನಪಿಸಿಕೊಳ್ಳುತ್ತಾರೆ. ಅದರಲ್ಲೂ ಹಬ್ಬ-ಹರಿದಿನಗಳಲ್ಲಿ ಅಪ್ಪು ಬಹುವಾಗಿ ನೆನಪಾಗುತ್ತಾರೆ. ಪ್ರತಿ ಹಬ್ಬಕ್ಕೂ ಅವರು ಮನಸಾರೆ ವಿಶ್​ ಮಾಡುತ್ತಿದ್ದರು. ಆ ವಿಡಿಯೋಗಳು ಈಗ ವೈರಲ್​ ಆಗುತ್ತಿವೆ. ಈ ಹಿಂದೆ ದೀಪಾವಳಿ (Deepavali 2022) ಹಬ್ಬಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಎಲ್ಲ ಅಭಿಮಾನಿಗಳಿಗೆ ಶುಭ ಕೋರಿದ್ದರು. ಆ ವಿಡಿಯೋಗಳನ್ನು ಈಗ ಫ್ಯಾನ್ಸ್​ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋಗಳನ್ನು ನೋಡಿದರೆ ನಿಜವಾಗಿಯೂ ಪುನೀತ್​ ರಾಜ್​ಕುಮಾರ್​ ಅವರು ಮೇಲಿಂದ ಎಲ್ಲ ಅಭಿಮಾನಿಗಳಿಗೆ ಶುಭ ಕೋರುತ್ತಿದ್ದಾರೆ ಎನಿಸುತ್ತದೆ. ಅವರು ನಮ್ಮ ನಡುವೆ ಇಲ್ಲವಲ್ಲ ಎಂಬ ಸತ್ಯ ಅರಿವಾದಾಗ ಹೃದಯ ಭಾರ ಆಗುತ್ತದೆ. ಪ್ರತಿ ಸಂದರ್ಭದಲ್ಲೂ ಅಭಿಮಾನಿಗಳು ಅವರನ್ನು ಮಿಸ್​ ಮಾಡಿಕೊಳ್ಳುತ್ತಲೇ ಇದ್ದಾರೆ. ರಸ್ತೆ, ಪಾರ್ಕ್​, ವೃತ್ತ ಮುಂತಾದವುಗಳಿಗೆ ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಇಡುವ ಮೂಲಕ ನಮನ ಸಲ್ಲಿಸಲಾಗುತ್ತಿದೆ. ಎಲ್ಲ ವಿಶೇಷ ಸಂದರ್ಭದಲ್ಲೂ ಅಪ್ಪು ಪೋಟೋ ಹಿಡಿದು ಬರುತ್ತಾರೆ ಅಭಿಮಾನಿಗಳು.

ಸಿನಿಮಾಗಳ ಮೂಲಕ ಪುನೀತ್​ ರಾಜ್​ಕುಮಾರ್​ ಅವರು ಸದಾ ಶಾಶ್ವತವಾಗಿ ಇರುತ್ತಾರೆ. ನೋಡನೋಡುತ್ತಿದ್ದಂತೆಯೇ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯ ದಿನಾಂಕ ಹತ್ತಿರವಾಗಿದೆ. ಅಕ್ಟೋಬರ್​ 29ರಂದು ಅವರು ನಮ್ಮೆಲ್ಲರನ್ನು ಅಗಲಿ ಒಂದು ವರ್ಷ ಕಳೆಯುತ್ತದೆ. ಈ ಸಲುವಾಗಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಅಭಿಮಾನಿಗಳು ಹಮ್ಮಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಪುನೀತ್​ ಅವರ ಮೊದಲ ವರ್ಷದ ಪುಣ್ಯಸ್ಮರಣೆಗೂ ಒಂದು ದಿನ ಮುನ್ನ ಅಂದರೆ, ಅಕ್ಟೋಬರ್​ 28ರಂದು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಸಿನಿಮಾದ ರೀತಿಯೇ ಅದ್ದೂರಿಯಾಗಿ ಎಲ್ಲ ಚಿತ್ರಮಂದಿರಗಳಲ್ಲೂ ಈ ಡಾಕ್ಯುಮೆಂಟರಿ ಪ್ರದರ್ಶನ ಕಾಣಲಿದೆ. ಅದಕ್ಕಾಗಿ ಅಶ್ವಿನಿ ಪುನೀತ್​ ರಾಜ್​ಕುಮಾರ್​​ ಅವರು ಸಕಲ ತಯಾರಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ‘ಪುನೀತ ಪರ್ವ’ ಹೆಸರಿನಲ್ಲಿ ಇದರ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು.

‘ಗಂಧದ ಗುಡಿ’ ಸಾಕ್ಷ್ಯಚಿತ್ರ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಕರುನಾಡಿನ ಕಾಡುಗಳಲ್ಲಿ ಅಲೆದಾಡಿ ಅವರು ಈ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದಾರೆ. ಅವರಿಗೆ ಅಮೋಘವರ್ಷ ಸಾಥ್​ ನೀಡಿದ್ದಾರೆ. ಚಿತ್ರಮಂದಿರದಲ್ಲಿ ನೋಡಿದಾಗ ಅಭಿಮಾನಿಗಳಿಗೆ ಇದು ಹೊಸ ಅನುಭವ ನೀಡಲಿದೆ. ಈ ಚಿತ್ರ ಸೂಪರ್​ ಹಿಟ್​ ಆಗಬೇಕು ಎಂದು ಎಲ್ಲರೂ ಹಾರೈಸಿದ್ದಾರೆ. ‘ಕೆಜಿಎಫ್​ ಚಿತ್ರಕ್ಕಿಂತಲೂ ದೊಡ್ಡ ಹಿಟ್​ ಆಗಬೇಕು’ ಎಂದು ಯಶ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Mon, 24 October 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ