Father’s Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Puneeth Rajkumar: ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಹಲವಾರು ಸಿನಿಮಾಗಳಲ್ಲಿ ಅವರು ಡಾ. ರಾಜ್​ಕುಮಾರ್​ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು.

Father's Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್
ಡಾ. ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Jun 20, 2021 | 9:57 AM

ಅಪ್ಪ ಎಂದರೆ ಎಲ್ಲರಿಗೂ ಹೆಮ್ಮೆ. ಇಂದು (ಜೂ.20) ವಿಶ್ವ ಅಪ್ಪಂದಿರ ದಿನ ಆಚರಿಸಲಾಗುತ್ತಿದೆ. ಮಕ್ಕಳನ್ನು ಬೆಳೆಸುವ ಕಾಯಕದಲ್ಲಿ ಅಪ್ಪನ ಕೊಡುಗೆ ಅಪಾರ. ತಂದೆಗೆ ಕೃತಜ್ಞತೆ ಸಲ್ಲಿಸಲು ಇಂದು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಒಂದು ವಿಶೇಷ ಹಾಡಿನ ಮೂಲಕ ವಿಶ್​ ಮಾಡಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್​ಕುಮಾರ್​ ಅವರ ಸುಪುತ್ರ ಪುನೀತ್​ ರಾಜ್​ಕುಮಾರ್​ ಅವರ ಮೇಲೆ ತಂದೆಯ ಪ್ರಭಾವ ಅಪಾರ. ಯಾಕೆಂದರೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಆಗ ಪುನೀತ್​ ಹೆಸರು ಮಾಸ್ಟರ್​ ಲೋಹಿತ್​ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.

ಪುನೀತ್​ ರಾಜ್​ಕುಮಾರ್​ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ‘ಭಾಗ್ಯವಂತ’ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ..’ ಹಾಡು ಸೂಪರ್​ ಹಿಟ್​ ಆಗಿತ್ತು. ಕೇಳುಗರ ಫೇವರೀಟ್​ ಲಿಸ್ಟ್​ನಲ್ಲಿ ಇಂದಿಗೂ ಆ ಗೀತೆ ಸ್ಥಾನ ಪಡೆದುಕೊಂಡಿದೆ. ಅದೇ ಹಾಡನ್ನು ಮತ್ತೆ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಶುಭಕೋರಿದ್ದಾರೆ.

ಇದನ್ನೂ ಓದಿ:

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ