ಪುನೀತ್ ಅಂತಿಮ ನಮನ ಮತ್ತು ಅಂತಿಮ ಸಂಸ್ಕಾರದ ಸಮಯದಲ್ಲಿ ಸಹಕರಿಸಿದ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದಾರೆ. ಪುನೀತ್ ಸಮಾಧಿ ಸ್ಥಳವನ್ನು ಡಾ. ರಾಜ್ಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಅವರ ಸ್ಮಾರಕದ ರೀತಿಯೇ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ.
‘ಪುನೀತ್ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.
ಇದನ್ನೂ ಓದಿ:
‘ಪುನೀತ್ಗೆ ಕೊಟ್ಟ ಮಾತು ಉಳಿಸಿಕೊಳ್ತೀನಿ’; ಪುನೀತ ನಮನ ಕಾರ್ಯಕ್ರಮದಲ್ಲಿ ವಿಶಾಲ್
Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್ ಕುಟುಂಬ