‘ಪುರುಷೋತ್ತಮನ ಪ್ರಸಂಗ’ ಸಿನಿಮಾದ ಹೊಸ ಹಾಡು ಬಿಡುಗಡೆ
Purushothama Prasanga: ತುಳು ಚಿತ್ರರಂಗದ ಪ್ರತಿಭೆ ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಸಿನಿಮಾ ‘ಪುರುಷೋತ್ತಮ ಪ್ರಸಂಗ’ದ ಹಾಡೊಂದು ಬಿಡುಗಡೆ ಆಗಿದೆ. ಹಾಡು ರಚಿಸಿರುವುದು ಜಯಂತ್ ಕಾಯ್ಕಿಣಿ.

ನೈಜ ಘಟನೆ ಆಧರಿಸಿದ ಸಿನಿಮಾ ‘ಪುರುಷೋತ್ತಮನ ಪ್ರಸಂಗ’ (Purushothama Prasanga) ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ತುಳು ಚಿತ್ರರಂಗದಲ್ಲಿ ಸಖತ್ ಹೆಸರು ಮಾಡಿರುವ ದೇವದಾಸ್ ಕಾಪಿಕ್ಕಾಡ್ ನಿರ್ದೇಶನ ಮಾಡಿರುವ ಮೊದಲ ಕನ್ನಡ ಸಿನಿಮಾ ‘ಪುರುಷೋತ್ತಮನ ಪ್ರಸಂಗ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಾಡು ಮೆಚ್ಚುಗೆ ಗಳಿಸಿದೆ.
‘ಪುರುಷೋತ್ತಮನ ಪ್ರಸಂಗ’ ಸಿನಿಮಾದ ‘ಅಚ್ಚುಮೆಚ್ಚು ನಿನ್ನ ಕಂಡರೆ’ ಎಂಬ ಸುಂದರ ಯುಗಳಗೀತೆ ಎ2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ಜನಪ್ರಿಯ ಸಾಹಿತಿ ಜಯಂತ ಕಾಯ್ಕಿಣಿ ಈ ಹಾಡು ರಚಿಸಿದ್ದಾರೆ. ಇದೀಗ ಬಿಡುಗಡೆ ಆಗಿರುವ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ನೀಡಿ, ತಾವೇ ಹಾಡಿದ್ದಾರೆ. ಈ ಸುಂದರ ಗೀತೆಗೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದ್ದು, ಮಾರ್ಚ್ ಒಂದರಂದು ಸಿನಿಮಾ ಬಿಡುಗಡೆ ಆಗಲಿದೆ ಬರಲಿದೆ.
ಇದನ್ನೂ ಓದಿ:Raj B Shetty: ತುಳು ಚಿತ್ರರಂಗದಲ್ಲಿ ಹೊಸ ಪ್ರಯತ್ನ ಮಾಡಲಿದ್ದಾರೆ ರಾಜ್ ಬಿ. ಶೆಟ್ಟಿ
ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಈ ಚಿತ್ರದ ನಾಯಕನಾಗಿ ಅಜಯ್ ಅಭಿನಯಿಸಿದ್ದಾರೆ. ರಿಷಿಕಾ ನಾಯ್ಕ್ ಮತ್ತು ದೀಪಿಕಾ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ನಾಯಕಿಯರು. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ,ಜ್ಯೋತಿಷ್ ಶೆಟ್ಟಿ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ. ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಸಿನಿಮಾವು ಕೌಟುಂಬಿಕ ಕಥಾಹಂದರ ಒಳಗೊಂಡಿದೆ.
ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಕಾಪಿಕಾಡ್ ಈ ಚಿತ್ರದ ಸಹ ನಿರ್ದೇಶಕರು. ವಿಷ್ಣು ಅವರ ಛಾಯಾಗ್ರಹಣವಿರುವ ‘ಪುರುಷೋತ್ತಮನ ಪ್ರಸಂಗ’ ಚಿತ್ರಕ್ಕೆ ನಕುಲ್ ಅಭಯ್ ಸಂಗೀತ ನೀಡಿದ್ದಾರೆ. ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್ ಅವರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಂದೀಪ್ ಶೆಟ್ಟಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಸಹ ನಿರ್ಮಾಪಕರು ಅಬೂಬಕರ್ ಪುತ್ತಾಕ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:42 pm, Sun, 18 February 24