Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​

Allu Arjun | Kantara Movie: ‘ಕಾಂತಾರ’ ಚಿತ್ರತಂಡಕ್ಕೆ ಅಲ್ಲು ಅರ್ಜುನ್​ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​
‘ಕಾಂತಾರ’ ಪೋಸ್ಟರ್​, ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on:Dec 20, 2022 | 4:23 PM

ಸೂಪರ್​ ಹಿಟ್​ ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಅನೇಕ ಸ್ಟಾರ್​ ಕಲಾವಿದರು ಈಗಾಗಲೇ ಮಾತನಾಡಿದ್ದಾರೆ. ರಜನಿಕಾಂತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಮೆಚ್ಚಿಕೊಂಡಿದ್ದಾರೆ. ಈಗ ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಕೂಡ ‘ಕಾಂತಾರ’ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತೆಲುಗು ಚಿತ್ರವೊಂದರ ಪ್ರಚಾರದ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು ‘ಕಾಂತಾರ’ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ರಿಷಬ್​ ಶೆಟ್ಟಿ (Rishab Shetty) ಅವರ ಕೆಲಸದ ಬಗ್ಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೆಚ್ಚುಗೆ ಕೇಳಿಬಂದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳು ಸಖತ್​ ಸೌಂಡು ಮಾಡುತ್ತಿವೆ. ಕೆಜಿಎಫ್​: ಚಾಪ್ಟರ್​ 2, ಪುಷ್ಪ, ಕಾಂತಾರ ಮುಂತಾದ ಚಿತ್ರಗಳು ಬಾಲಿವುಡ್​ ಮಾರುಕಟ್ಟೆಯಲ್ಲೂ ಗೆದ್ದು ಬೀಗಿವೆ. ಇಡೀ ಸೌತ್​ ಸಿನಿಮಾ ಇಂಡಸ್ಟ್ರಿ ಬಗ್ಗೆ ಎಲ್ಲರಲ್ಲೂ ಭರವಸೆ ಮೂಡಿದೆ. ಈ ಸಂದರ್ಭದಲ್ಲಿ ಬೇರೆ ಬೇರೆ ಭಾಷೆಯ ಚಿತ್ರರಂಗಗಳ ನಡುವಿನ ಗಡಿಗಳು ಮಾಯವಾಗುತ್ತಿವೆ. ಒಬ್ಬರು ಇನ್ನೊಬ್ಬರ ಗೆಲುವನ್ನು ಶ್ಲಾಘಿಸುವಂತಹ ವಾತಾವರಣ ನಿರ್ಮಾಣ ಆಗಿದೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ ಅಲ್ಲು ಅರ್ಜುನ್​ ಅವರು ‘ಕಾಂತಾರ’ ಚಿತ್ರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara Remuneration: 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿಗೆ ಸಿಕ್ಕಿದ್ದೆಷ್ಟು?

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆ ಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ.

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ನಿರೀಕ್ಷೆ ಮೂಡಿಸಿದ ‘ಪುಷ್ಪ 2’:

2021ರಲ್ಲಿ ‘ಪುಷ್ಪ’ ಸಿನಿಮಾ ತೆರೆಕಂಡಿತು. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆ ನಿಭಾಯಿಸಿದ್ದ ಆ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಪುಷ್ಪ 2’ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:41 pm, Tue, 20 December 22

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್