AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ಮಗಳ ಭಾವನಾತ್ಮಕ ಕಥೆಯ ‘ಪ್ಯಾರ್’ ಸಿನಿಮಾ ಟೀಸರ್; ರವಿಚಂದ್ರನ್ ವಿಶೇಷ ಪಾತ್ರ

‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರವನ್ನು ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಹಾಗೂ ಹಾಡುಗಳು ಬಿಡುಗಡೆ ಆಗಿವೆ. ಅಕ್ಟೋಬರ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

ತಂದೆ-ಮಗಳ ಭಾವನಾತ್ಮಕ ಕಥೆಯ ‘ಪ್ಯಾರ್’ ಸಿನಿಮಾ ಟೀಸರ್; ರವಿಚಂದ್ರನ್ ವಿಶೇಷ ಪಾತ್ರ
Pyar Movie Team
ಮದನ್​ ಕುಮಾರ್​
|

Updated on: Sep 03, 2026 | 3:56 PM

Share

ರಿಶ್ವಿನ್, ರಾಶಿಕಾ ಶೆಟ್ಟಿ, ರವಿಚಂದ್ರನ್ ಮುಂತಾದವರು ನಟಿಸಿರುವ ‘ಪ್ಯಾರ್’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್.ಎಸ್. ನಾಗಶ್ರೀ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ತಂದೆ-ಮಗಳ ಬಾಂಧವ್ಯದ ಕಥಾನಕ ಈ ಸಿನಿಮಾದಲ್ಲಿ ಇದೆ. ಎಸ್. ಸುಪ್ರೀತ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ಪ್ಯಾರ್’ ಸಿನಿಮಾದಲ್ಲಿ ರವಿಚಂದ್ರನ್ ಅವರಿಗೆ ವಿಶೇಷ ಪಾತ್ರವಿದೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಯಿತು.

‘ಪ್ಯಾರ್’ ಸಿನಿಮಾದಿಂದ ಈಗಾಗಲೇ ರಿಲೀಸ್ ಆಗಿರುವ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಹೆಚ್ಚು ವೀಕ್ಷಣೆ ಪಡೆದಿದೆ. ಪಳನಿ ಡಿ. ಸೇನಾಪತಿ ಅವರ ಸಂಗೀತ, ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ಈ ಬಗ್ಗೆ ನಿರ್ದೇಶಕ ಸುಪ್ರೀತ್ ಮಾತನಾಡಿದರು. ‘ಈ ಹಿಂದೆ 2 ಸಾಂಗ್ ರಿಲೀಸ್ ಮಾಡಿದ್ದೆವು. ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಈಗ ಟೀಸರ್ ರಿಲೀಸಾಗಿದೆ. ನಿರ್ಮಾಪಕರು ನನ್ನ ಮೇಲೆ ನಂಬಿಕೆಯಿಟ್ಟು ದೊಡ್ಡಮಟ್ಟದ ಬಂಡವಾಳ ಹಾಕಿದ್ದಾರೆ’ ಎಂದು ಅವರು ಹೇಳಿದರು.

ಪ್ರೀತಿ-ಪ್ರೇಮದ ಕಥೆಯ ಜತೆಗೆ ತಂದೆ-ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನು ತೆರೆದಿಡುವ ಕಥೆ ಈ ಸಿನಿಮಾದಲ್ಲಿದೆ. ಆ ಪ್ರೀತಿ ಯಾವ ಮಟ್ಟಕ್ಕೆ ಹೋಗಬಹುದು? ತಂದೆಗೋಸ್ಕರ ಮಗಳು ಯಾವ ರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಎಂಬುದೇ ಈ ಸಿನಿಮಾದ ಕಥೆ ಎಂದು ನಿರ್ದೇಶಕರು ಮಾಹಿತಿ ನೀಡಿದರು. ನಿರ್ಮಾಪಕಿ ನಾಗಶ್ರೀ ಮಾತನಾಡಿ, ಚಿತ್ರದ ಟೈಟಲ್ ರವಿಚಂದ್ರನ್ ಅವರಿಗೆ ಹೆಚ್ಚು ಹೊಂದುತ್ತದೆ ಎಂದು ಹೇಳಿದರು.

‘ಪ್ಯಾರ್’ ಸಿನಿಮಾ ಟೀಸರ್:

ತುಂಬಾ ದಿನಗಳ ನಂತರ ಸೋನು ನಿಗಮ್ ಮತ್ತು ಶ್ರೇಯಾ ಘೋಷಾಲ್ ಅವರು ಈ ಸಿನಿಮಾಗಾಗಿ ಹಾಡಿದ್ದಾರೆ. ಕುನಾಲ್ ಗಾಂಜಾವಾಲ, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಈ ಚಿತ್ರದಲ್ಲಿ ಹಾಡಿದ್ದಾರೆ. ಕಾಶ್ಮೀರ, ರಾಜಸ್ಥಾನ, ಅಂಡಮಾನ್, ಮಂಗಳೂರು, ಚಿಕ್ಕಮಗಳೂರು, ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ.

ಇದನ್ನೂ ಓದಿ: ಒಂದು ಸಿನಿಮಾ 150 ಹಾಡು: ತಮ್ಮ ಹೊಸ ಸಾಹಸದ ಬಗ್ಗೆ ವಿವರಿಸಿದ ರವಿಚಂದ್ರನ್

ಸಿನಿಮಾದ ಹಾಡು ಹಿಟ್ ಆಗಿರುವುದಕ್ಕೆ ನಾಯಕ ನಟ ರಿಶ್ವಿನ್ ಅವರು ಖುಷಿ ಹಂಚಿಕೊಂಡರು. ‘ಇಡೀ ಚಿತ್ರತಂಡದ 4 ವರ್ಷಗಳ ಶ್ರಮ‌ ಈ ಟೀಸರ್ ನಲ್ಲಿದೆ. ಅಭಿನಯಕ್ಕೆ ತುಂಬಾ ಅವಕಾಶ ಇರುವ ಪಾತ್ರ ನನ್ನದು’ ಎಂದು ಅವರು ಹೇಳಿದರು. ‘ಮನದ ಕಡಲು’ ನಂತರ ನಟಿ ರಾಶಿಕಾ ಶೆಟ್ಟಿ ಅವರು ಅಭಿನಯಿಸಿರುವ ಎರಡನೇ ಇದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ