ವಂಶಿಗೆ ಜೋಡಿಯಾದ ರಚನಾ ಇಂದರ್, ‘ಫೈರ್ ಫ್ಲೈ’ಗೆ ನಾಯಕಿ
‘ಲವ್ ಮಾಕ್ಟೆಲ್’, ‘ಹರಿಕತೆ ಅಲ್ಲ ಗಿರಿಕತೆ’, ‘ತ್ರಿಬಲ್ ರೈಡಿಂಗ್’ ಇನ್ನೂ ಕೆಲ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟಿ ರಚನಾ ಇಂದರ್ ಇದೀಗ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ನಿರ್ಮಿಸುತ್ತಿರುವ ‘ಫೈರ್ ಪ್ಲೇ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಮುದ್ದು ಮುಖದ ನಟಿ ರಚನಾ ಇಂದರ್ ನಟಿಸಿದ ಕೆಲವೇ ಸಿನಿಮಾಗಳಿಂದ ಕನ್ನಡ ಸಿನಿಮಾ ಪ್ರೇಕ್ಷಕರ ಮನಗೆದ್ದಿದ್ದಾರೆ. ರಚನಾ ಇಂದರ್ ಗೆ ಈಗ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ತುಸು ಗಂಭೀರ, ತುಚು ಚೆಲ್ಲಾಟ ಎಲ್ಲವೂ ಬೆರೆತ ಅಭಿನಯ ಅವರದ್ದು. ಚೆಲ್ಲಾಟದ ಪಾತ್ರ, ಹಾಸ್ಯಮಯ ಪಾತ್ರ, ರೊಮ್ಯಾಂಟಿಕ್ ಹುಡುಗಿಯ ಪಾತ್ರ, ಸೆಂಟಿಮೆಂಟ್ ದೃಶ್ಯಗಳಲ್ಲಿ ಹೀಗೆ ಎಲ್ಲ ರೀತಿಯ ಪಾತ್ರ ಹಾಗೂ ದೃಶ್ಯಗಳಲ್ಲಿ ರಚನಾ ಇಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ರಚನಾ ಹೊಸ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’. ಈ ಸಿನಿಮಾ ಹಲವು ಕಾರಣಗಳಿಗೆ ನಿರೀಕ್ಷೆ ಹುಟ್ಟಿಸಿದೆ. ಅದರಲ್ಲಿ ಪ್ರಮುಖವಾದುದೆಂದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ತಾರಾಗಣವೂ ಸಹ ಗಮನ ಸೆಳೆಯುತ್ತಿದೆ. ‘ಫೈರ್ ಫ್ಲೈ’ ಸಿನಿಮಾದಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನೋದನ್ನು ಅನಾವರಣ ಮಾಡಿದೆ.
‘ಲವ್ ಮಾಕ್‌ಟೇಲ್’, ‘ಹರಿಕಥೆ ಅಲ್ಲ ಗಿರಿಕಥೆ’, ‘ತ್ರಿಬಲ್ ರೈಡಿಂಗ್’ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್, ‘ಫೈರ್ ಪ್ಲೇ’ ಸಿನಿಮಾದ ನಾಯಕ ವಂಶಿಗೆ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ನೇಹಾ ಹೆಸರಿನ ಪಾತ್ರದಲ್ಲಿ ರಚನಾ ನಟಿಸಿದ್ದಾರೆ. ‘ಫೈರ್ ಪ್ಲೇ’ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ರಚನಾ, ‘ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ: ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಹೊಸ ವಿಚಾರಗಳನ್ನು ಕಲಿತ ನಟಿ ರಚನಾ ಇಂದರ್
‘ಫೈರ್ ಫ್ಲೈ’ ಸಿನಿಮಾವನ್ನು ಯುವ ನಟ ವಂಶಿ ನಿರ್ದೇಶನ ನಟಿಸುವ ಜೊತೆಗೆ, ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ನಾಯಕ- ನಿರ್ದೇಶಕ ವಂಶಿಗೆ, ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ. ಈ ಸಂಸ್ಥೆಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ