AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹೊಸ ಸಿನಿಮಾಕ್ಕೆ ಸಿಕ್ಕರು ನಾಯಕಿ: ಯಾರು ಈ ಚೆಲುವೆ

Darshan Thoogudeepa: ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಇದೀಗ ದರ್ಶನ್​ರ ಮುಂದಿನ ಸಿನಿಮಾ ‘ಡೆವಿಲ್’ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಅಂದಹಾಗೆ ‘ಡೆವಿಲ್’ ಸಿನಿಮಾಕ್ಕೆ ನಾಯಕಿ ಸಿಕ್ಕಾಯ್ತು.

ದರ್ಶನ್ ಹೊಸ ಸಿನಿಮಾಕ್ಕೆ ಸಿಕ್ಕರು ನಾಯಕಿ: ಯಾರು ಈ ಚೆಲುವೆ
ಮಂಜುನಾಥ ಸಿ.
|

Updated on:Feb 03, 2024 | 5:47 PM

Share

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಪ್ಯಾನ್ ಇಂಡಿಯಾ ಅಲ್ಲದೆ ಕೇವಲ ಕನ್ನಡದಲ್ಲಿ ಮಾತ್ರವೇ ಬಿಡುಗಡೆ ಆದ ಸಿನಿಮಾ ಕರ್ನಾಟಕದ ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನು ಬರೆದಿದೆ. ಇನ್ನು ಕೆಲವೇ ದಿನಗಳಲ್ಲಿ ‘ಕಾಟೇರ’ (Kaatera) ಸಿನಿಮಾ ಒಟಿಟಿಗೆ ಸಹ ಬರುತ್ತಿದೆ. ‘ಕಾಟೇರ’ ಸಿನಿಮಾ ಬಿಡುಗಡೆಗೆ ಮುನ್ನವೇ ದರ್ಶನ್​ರ ಹೊಸ ಸಿನಿಮಾದ ಘೋಷಣೆ ಆಗಿತ್ತು. ಪ್ರತಿಭಾವಂತ ನಿರ್ದೇಶಕ ಮಿಲನಾ ಪ್ರಕಾಶ್ ನಿರ್ದೇಶನ ಮಾಡಲಿರುವ ‘ಡೆವಿಲ್: ದಿ ಹೀರೋ’ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ನಾಯಕಿಯ ಆಯ್ಕೆ ಆಗಿದೆ.

ಪ್ಯಾನ್ ಇಂಡಿಯಾ ಸಿನಿಮಾಗಳನ್ನೇ ತಿರಸ್ಕರಿಸಿ ಮಾಡಿದರೆ ಅಪ್ಪಟ ಕನ್ನಡ ಸಿನಿಮಾಗಳನ್ನಷ್ಟೆ ಮಾಡುತ್ತೀನಿ ಎಂದು ಗಂಟಾ ಘೋಷವಾಗಿ ಹೇಳಿರುವ ದರ್ಶನ್, ತಮ್ಮ ಸಿನಿಮಾದಲ್ಲಿ ಬಹುತೇಕ ಕನ್ನಡದ ನಟ-ನಟಿಯರೇ ಇರುವಂತೆ ನೋಡಿಕೊಳ್ಳುತ್ತಾರೆ. ಅದರಲ್ಲಿಯೂ ಸಹ ಹೊಸ ನಾಯಕಿಯರಿಗೂ ಅವಕಾಶ ನೀಡುತ್ತಾ ಬಂದಿದ್ದಾರೆ. ‘ಕಾಟೇರ’ ಸಿನಿಮಾನಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದರು. ಇದೀಗ ‘ಡೆವಿಲ್​’ ಸಿನಿಮಾದಲ್ಲಿ ತುಳುನಾಡಿನ ಚೆಲುವೆಗೆ ಅವಕಾಶ ನೀಡಲಾಗಿದೆ.

ತುಳು ಭಾಷೆಯ ‘ಸರ್ಕಸ್’ ಸಿನಿಮಾದಲ್ಲಿ ನಟಿಸಿರುವ, ಮಾಡೆಲ್ ಸಹ ಆಗಿರುವ ರಚನಾ ರೈ ಅವರು ದರ್ಶನ್​ರ ‘ಡೆವಿಲ್’ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ರಚನಾ ‘ಡೆವಿಲ್’ ಸಿನಿಮಾಕ್ಕೆ ಆಯ್ಕೆ ಆಗುತ್ತಿದ್ದಂತೆ ಅವರ ಇನ್​ಸ್ಟಾಗ್ರಾಂ ಹಾಗೂ ಟ್ವಿಟ್ಟರ್ ಖಾತೆ ಫಾಲೋವರ್​ಗಳ ಸಂಖ್ಯೆ ಭಾರಿ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಯಾರು ಈ ರಚನಾ ಎಂದು ಅಭಿಮಾನಿಗಳು ಹುಡುಕಾಟ ನಡೆಸಲು ಆರಂಭಿಸಿದ್ದಾರೆ.

ಇದನ್ನೂ ಓದಿ:‘ಕಾಟೇರ’ ಯಶಸ್ಸಿನ ಸಂಭ್ರಮ; ದರ್ಶನ್​ಗೆ ‘ಭೂಮಿಪುತ್ರ’ ಬಿರುದು: ಇಲ್ಲಿದೆ ಲೈವ್​ ವಿಡಿಯೋ..

ರಚನಾ ರೈ ಹುಟ್ಟಿದ್ದು ಪುತ್ತೂರಿನಲ್ಲಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಗುರ್ತಿಸಿಕೊಂಡಿದ್ದಾರೆ. ‘ಸರ್ಕಸ್’ ಹೆಸರಿನ ಸೂಪರ್ ಹಿಟ್ ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಸ್ತುತ ಧನ್ವೀರ್ ಗೌಡ ನಟನೆಯ ‘ವಾಮನ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಕೋಸ್ಟಲ್‌ವುಡ್‌ನಿಂದ ಸ್ಯಾಂಡಲ್‌ವುಡ್‌ಗೆ ಬಂದಿದ್ದಾರೆ. ಇದೀಗ ‘ಡೆವಿಲ್’ ದರ್ಶನ್ ಜೋಡಿಯಾಗಿ ನಟಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಚನಾ ರೈಗೆ ಭಾರಿ ಸಂಖ್ಯೆಯ ಫಾಲೋವರ್​ಗಳು ಹುಟ್ಟಿಕೊಂಡಿದ್ದಾರೆ. ಟ್ವಿಟ್ಟರ್​ನಲ್ಲಿ ರಚಿತಾ ಫಾಲೋ ಮಾಡುತ್ತಿರುವುದು ದರ್ಶನ್ ಒಬ್ಬರನ್ನೇ.

ಮಿಲನಾ ಪ್ರಕಾಶ್ ಈ ಹಿಂದೆ ದರ್ಶನ್ ಜೊತೆಗೆ ‘ತಾರಕ್’ ಹೆಸರಿನ ಸಿನಿಮಾ ಮಾಡಿದ್ದರು. ಇದೀಗ ಎರಡನೇ ಸಿನಿಮಾಕ್ಕೆ ಈ ಜೋಡಿ ಒಂದಾಗುತ್ತಿದೆ. ಮಿಲನಾ ಪ್ರಕಾಶ್ ಸಹ ಬರೋಬ್ಬರಿ ಆರು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. 2017ರಲ್ಲಿ ಬಿಡುಗಡೆ ಆಗಿದ್ದ ‘ತಾರಕ್’ ಮಿಲನಾ ಪ್ರಕಾಶ್ ನಿರ್ದೇಶಿಸಿದ್ದ ಕೊನೆಯ ಸಿನಿಮಾ. ಇದೀಗ ‘ಡೆವಿಲ್’ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Sat, 3 February 24

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ