AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್

ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು.

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್
ರಚಿತಾ ರಾಮ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 24, 2021 | 9:28 PM

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೆಸ್ಟ್​ ಕೂಡ ಆಗಿದ್ದಾರೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ‘ಲವ್ ಯೂ ರಚ್ಚು’ ಚಿತ್ರದ ನಾಯಕಿ ರಚಿತಾ ರಾಮ್​ ಅವರು ಪೊಲೀಸ್​ ಠಾಣೆಗೆ ಹಾಜರಾಗಿ ಇಂದು ವಿಚಾರಣೆ ಎದುರಿಸಿದ್ದಾರೆ.

ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು. ಪೊಲೀಸರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ನಟಿ ರಚಿತಾ ರಾಮ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿವರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದಾರೆ ರಚಿತಾ.

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದರು.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ಇದಕ್ಕೆ ಕಾರಣವಾಗಿತ್ತು. ಇದರಲ್ಲಿ ಚಿತ್ರತಂಡದ ನಿರ್ಲಕ್ಷ್ಯ ಎದ್ದು ಕಂಡಿದೆ. ಹೀಗಾಗಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಆಗಸ್ಟ್​ 10ರಂದು ಇವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಅವರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರು.

ಇಂದು ಮತ್ತೆ ಈ ಮೂವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ವಿಡಿಯೋ ಕಾಳ್​ ಮೂಲಕ ಹಾಜರು ಪಡಿಸಲಾಯಿತು . ಈ ವೇಳೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ, ಇವರು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಬೇಕಾಗಿದೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ