Rachita Ram: ನೂತನ ಗೆಟಪ್​ನಲ್ಲಿ ರಚಿತಾ ರಾಮ್; ‘ಶಬರಿ ಸರ್ಚಿಂಗ್ ಫಾರ್ ರಾವಣ’ ಚಿತ್ರದ ಹೊಸ ಪೋಸ್ಟರ್​ಗೆ ಫ್ಯಾನ್ಸ್ ಫಿದಾ

Rachita Ram Birthday: ಸ್ಯಾಂಡಲ್​ವುಡ್​ನ ಮುಂಚೂಣಿಯ ನಟಿಯರಲ್ಲೊಬ್ಬರಾದ ರಚಿತಾ ರಾಮ್ ಜನ್ಮದಿನವಿಂದು. ಈ ಹಿನ್ನೆಲೆಯಲ್ಲಿ ಅವರ ನಟನೆಯ ಹಲವು ಚಿತ್ರತಂಡಗಳು ಪೋಸ್ಟರ್, ಹಾಡುಗಳನ್ನು ಬಿಡುಗಡೆಗೊಳಿಸಿವೆ.

Rachita Ram: ನೂತನ ಗೆಟಪ್​ನಲ್ಲಿ ರಚಿತಾ ರಾಮ್; ‘ಶಬರಿ ಸರ್ಚಿಂಗ್ ಫಾರ್ ರಾವಣ’ ಚಿತ್ರದ ಹೊಸ ಪೋಸ್ಟರ್​ಗೆ ಫ್ಯಾನ್ಸ್ ಫಿದಾ
‘ಶಬರಿ ಸರ್ಚಿಂಗ್ ಫಾರ್ ರಾವಣ’ ಚಿತ್ರದಲ್ಲಿ ರಚಿತಾ ರಾಮ್ ನೂತನ ಗೆಟಪ್
Follow us
TV9 Web
| Updated By: shivaprasad.hs

Updated on:Oct 03, 2021 | 4:55 PM

ಇಂದು ಸ್ಯಾಂಡಲ್​ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜನ್ಮದಿನ. ಕಿರುತೆರೆಯಲ್ಲಿ ಮಿಂಚಿ ನಂತರ ಬೆಳ್ಳಿತೆರೆ ಪ್ರವೇಶಿಸಿದ ಅವರು ಪ್ರಸ್ತುತ ಕನ್ನಡದ ಮುಂಚೂಣಿಯ ನಾಯಕಿಯರಲ್ಲಿ ಒಬ್ಬರು. ಕನ್ನಡದ ಖ್ಯಾತ ನಾಯಕರೊಂದಿಗೆ ಈಗಾಗಲೇ ತೆರೆ ಹಂಚಿಕೊಂಡಿರುವ ಅವರು, ಪ್ರಸ್ತುತ ಹೊಸ ಮಾದರಿಯ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಅನೌನ್ಸ್ ಆಗಿದ್ದ ‘ಶಬರಿ ಸರ್ಚಿಂಗ್ ಫಾರ್ ರಾವಣ’ ಚಿತ್ರವು ತನ್ನ ಹೆಸರಿನಿಂದಲೇ ಸಖತ್ ಸದ್ದು ಮಾಡಿತ್ತು. ಇದೀಗ ರಚಿತಾ ಅವರ ಜನ್ಮದಿನದ ಪ್ರಯುಕ್ತ ಚಿತ್ರದ ನೂತನ ಪೋಸ್ಟರ್ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.

‘ತಾನು ಬಹಳ ದಿನಗಳಿಂದ ಇದಕ್ಕಾಗಿ ಕಾಯುತ್ತಿದ್ದೆ. ಇದೀಗ ಅದು ನಿಮ್ಮ ಮುಂದಿದೆ’ ಎಂದು ಬರೆದುಕೊಂಡು ರಚಿತಾ ಟ್ವಿಟರ್​ನಲ್ಲಿ ನೂತನ ಪೋಸ್ಟರ್​ ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟರ್​ನಲ್ಲಿ ಅಭಿಮಾನಿಗಳಿಗೆ ಬಹುದೊಡ್ಡ ಅಚ್ಚರಿ ಎದುರಾಗಿದೆ. ಕಾರಣ, ರಚಿತಾ ಇದುವರೆಗೂ ಕಾಣಿಸಿಕೊಳ್ಳದ ಗೆಟಪ್​ನಲ್ಲಿ ಮಿಂಚುತ್ತಿದ್ದಾರೆ. ಸಣ್ಣ ಕೂದಲಿನ ಮಾಸ್ ಲುಕ್​ನಲ್ಲಿ ಅವರು ಮಿಂಚುತ್ತಿದ್ದು, ಅವರ ಟೇಬಲ್​ನಲ್ಲಿ ಒಂದು ಮುದ್ದಾದ ಬೆಕ್ಕೂ ಇದೆ. ಆಫೀಸರ್​ ಲುಕ್​ನಲ್ಲಿ ರಚಿತಾ ಕುಳಿತಿರುವುದು ಅವರ ಇದುವರೆಗಿನ ಚಿತ್ರಗಳಿಂದ ಇದು ಕಂಪ್ಲೀಟ್ ಡಿಫರೆಂಟ್ ಎನ್ನುವುದನ್ನು ಒತ್ತಿ ಹೇಳುತ್ತಿದೆ.

ರಚಿತಾ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ಈ ಚಿತ್ರದ ಮೂಲಕ ರಚಿತಾ ಹೊಸ ಮಾದರಿಯ ಚಿತ್ರಗಳಿಗೆ ತೆರೆದುಕೊಳ್ಳುತ್ತಾರೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಎದುರಾಗಿದೆ. ‘ಶಬರಿ ಸರ್ಚಿಂಗ್ ಫಾರ್ ರಾವಣ’ ಚಿತ್ರವನ್ನು ನವೀನ್ ಶೆಟ್ಟಿ ನಿರ್ದೇಶಿಸುತ್ತಿದ್ದು, ರಿವೆಂಜ್ ಥ್ರಿಲ್ಲರ್ ಮಾದರಿಯ ಕಥಾನಕ ಹೊಂದಿರಲಿದೆ. ಅನೂಪ್ ಸೀಳಿನ್ ಸಂಗೀತ ನೀಡಲಿದ್ದು, ವಿಶಾಲ್ ಕುಮಾರ್ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಚಿತಾ ಎರಡು ಶೇಡ್​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ರಘು ಮುಖರ್ಜಿ, ಅರ್ಚನಾ ಕೊಟ್ಟಿಗೆ ಮೊದಲಾದವರು ಬಣ್ಣ ಹಚ್ಚುತ್ತಿದ್ದಾರೆ.

‘ಲವ್ ಯೂ ರಚ್ಚು’ ಚಿತ್ರದ ನೂತನ ಹಾಡು ಬಿಡುಗಡೆ: ರಚಿತಾ ಅಭಿನಯದ ಹಲವು ಚಿತ್ರಗಳು ತಮ್ಮ ಪೋಸ್ಟರ್ ಹಾಡುಗಳ ಮುಖಾಂತರ ಶುಭ ಕೋರುತ್ತಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಅಜಯ್ ರಾವ್ ನಟನೆಯ ‘ಲವ್ ಯೂ ರಚ್ಚು’ ಚಿತ್ರದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಸಂಜಿತ್ ಹೆಗಡೆ ಧ್ವನಿಯಲ್ಲಿರುವ ಈ ಮೆಲೋಡಿ ಹಾಡನ್ನು ಸಿನಿ ಪ್ರೇಮಿಗಳು ಇಷ್ಟಪಟ್ಟಿದ್ದಾರೆ.

‘ನೋಡುತಾ ನನ್ನನೇ’ ಹಾಡು ಇಲ್ಲಿದೆ:

ಶಂಕರ್ ರಾಜ್ ನಿರ್ದೇಶನದ ‘ಲವ್ ಯೂ ರಚ್ಚು’ ಚಿತ್ರಕ್ಕೆ ಕದ್ರಿ ಮಣಿಕಾಂತ್ ಸಂಗೀತ ಸಂಯೋಜಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಎಲ್ಲರ ಮನಗೆದ್ದಿದೆ.

ಇದನ್ನೂ ಓದಿ:

ಅಭಿಷೇಕ್​ ಅಂಬರೀಷ್​​ ಮತ್ತು ರಚಿತಾ ರಾಮ್ ಜನ್ಮದಿನ; ಕಾಮನ್​ ಡಿಪಿ ರಿಲೀಸ್​ ಮಾಡಿದ ಸುಮಲತಾ

ಡ್ರಗ್ಸ್​ ಕೇಸ್​: ಎನ್​ಸಿಬಿ ಕಚೇರಿಯಲ್ಲಿ ಗಪ್​ಚುಪ್​ ಆಗಿ ಕುಳಿತ ಶಾರುಖ್​ ಪುತ್ರ ಆರ್ಯನ್​ ಖಾನ್​; ಇಲ್ಲಿದೆ ವಿಡಿಯೋ

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದ ಮಗ ಆರ್ಯನ್​​ಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡ ಶಾರುಖ್​ ಖಾನ್​

Published On - 4:51 pm, Sun, 3 October 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್