AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ನಾಯಕಿ ಫೈನಲ್; ರಮ್ಯಾ ಅಲ್ಲಾ ರಚಿತಾ ಹೀರೋಯಿನ್

Sanju Weds Geetha 2 Movie: ಕೆಲ ದಿನಗಳ ಹಿಂದೆ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಪೋಸ್ಟರ್ ಹಂಚಿಕೊಳ್ಳಲಾಯಿತು. ಶ್ರೀನಗರ ಕಿಟ್ಟಿ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿ ಯಾರು ಎನ್ನುವ ಕುತೂಹಲ ಮೂಡಿತ್ತು.

‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ನಾಯಕಿ ಫೈನಲ್; ರಮ್ಯಾ ಅಲ್ಲಾ ರಚಿತಾ ಹೀರೋಯಿನ್
ಶ್ರೀನಗರ ಕಿಟ್ಟಿ-ರಚಿತಾ ರಾಮ್
Follow us
ರಾಜೇಶ್ ದುಗ್ಗುಮನೆ
|

Updated on:Jul 22, 2023 | 2:38 PM

2011ರಲ್ಲಿ ರಿಲೀಸ್ ಆದ ‘ಸಂಜು ವೆಡ್ಸ್​ ಗೀತಾ’ ಸಿನಿಮಾ (Sanju Weds Geetha) ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ನಾಗಶೇಖರ್ ಅವರು ಈ ಚಿತ್ರಕ್ಕೆ ಡೈರೆಕ್ಟ್ ಮಾಡಿದ್ದರು. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ (Ramya) ಕಾಂಬಿನೇಷನ್ ಜನರಿಗೆ ಇಷ್ಟವಾಗಿತ್ತು. ಈಗ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಈಗ ಚಿತ್ರಕ್ಕೆ ನಾಯಕಿ ಫೈನಲ್ ಆಗಿದ್ದಾರೆ. ರಚಿತಾ ರಾಮ್ ಅವರು ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಈ ವಿಚಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಪೋಸ್ಟರ್ ಹಂಚಿಕೊಳ್ಳಲಾಯಿತು. ಶ್ರೀನಗರ ಕಿಟ್ಟಿ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿ ಯಾರು ಎನ್ನುವ ಕುತೂಹಲ ಮೂಡಿತ್ತು. ಈಗ ರಚಿತಾ ರಾಮ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ‘ಈ ಚಿತ್ರತಂಡದ ಜೊತೆ ಕೆಲಸ ಮಾಡೋಕೆ ಖುಷಿ ಇದೆ’ ಎಂದು ಅವರು ಬರೆದುಕೊಂಡಿದ್ದಾರೆ.

ರಚಿತಾ ರಾಮ್​​ಗೆ ಈ ಸಿನಿಮಾದಲ್ಲಿ ನಟಿಸಲು ಆಸಕ್ತಿ ಇದೆ ಎಂದು ಈ ಮೊದಲು ವರದಿ ಆಗಿತ್ತು. ಈ ವರದಿ ನಿಜವಾಗಿದೆ. ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ನಾಗಶೇಖರ್​ ಅವರೇ ಬಂಡವಾಳ ಹೂಡುತ್ತಿದ್ದಾರೆ. 2024ರ ದಸರಾ ಹಬ್ಬಕ್ಕೆ ಈ ಚಿತ್ರ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ​. ಈ ಚಿತ್ರದ ಬಗ್ಗೆ ಹೆಚ್ಚಿನ ವಿವರ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

‘ಸಂಜು ವೆಡ್ಸ್ ಗೀತಾ’ ಚಿತ್ರದಲ್ಲಿ ರಮ್ಯಾ ನಟಿಸಿದ್ದರು. ಅವರೇ ಈ ಚಿತ್ರದಲ್ಲೂ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಅವರೇ ಈ ಸಿನಿಮಾದಲ್ಲಿ ನಾಯಕಿ ಆಗಬೇಕು ಎಂದು ರಮ್ಯಾ ಅಭಿಮಾನಿಗಳು ಬಯಸಿದ್ದರು.

ಇದನ್ನೂ ಓದಿ: ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ನಾಯಕಿ? ನಾಗಶೇಖರ್​ ಜೊತೆ ನಡೆದಿದೆ ಮಾತುಕತೆ

ರಚಿತಾ ರಾಮ್ ಬೇಡಿಕೆಯ ನಟಿ ಆಗಿದ್ದಾರೆ. ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ‘ಮ್ಯಾಟ್ನಿ’, ‘ಶಬರಿ’, ‘ಲವ್​ ಮಿ ಆರ್​ ಹೇಟ್​ ಮಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ನಿ’ ಸಿನಿಮಾ ಕುತೂಹಲ ಮೂಡಿಸಿದೆ. ‘ಅಯೋಗ್ಯ’ ಚಿತ್ರದ ಬಳಿಕ ಸತೀಶ್​ ‘ನೀನಾಸಂ’ ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ರಚಿತಾ ರಾಮ್​ಗೆ ಬೇಡಿಕೆ ಇದೆ. ‘ಭರ್ಜರಿ ಬ್ಯಾಚುಲರ್​’ ರಿಯಾಲಿಟಿ ಶೋನಲ್ಲಿ ಅವರು ಜಡ್ಜ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:42 pm, Sat, 22 July 23

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ