ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್ಗೆ ಹಬ್ಬ
ನಟಿ ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ! ಜನವರಿ 23ರಂದು ಅವರ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಕಲ್ಟ್’ ಮತ್ತು ‘ಲ್ಯಾಂಡ್ಲಾರ್ಡ್’ ತೆರೆಗೆ ಅಪ್ಪಳಿಸುತ್ತಿವೆ. ‘ಕಲ್ಟ್’ ಚಿತ್ರದಲ್ಲಿ ರಗಡ್ ಪಾತ್ರದಲ್ಲಿ ಕಾಣಿಸಿಕೊಂಡರೆ, ‘ಲ್ಯಾಂಡ್ಲಾರ್ಡ್’ನಲ್ಲಿ ಹಳ್ಳಿ ಹುಡುಗಿಯಾಗಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಒಂದೇ ದಿನ ಎರಡು ಭಿನ್ನ ಪಾತ್ರಗಳಲ್ಲಿ ರಚಿತಾ ರಾಮ್ ಅಬ್ಬರಿಸಲು ಸಜ್ಜಾಗಿದ್ದಾರೆ.

ಸಾಮಾನ್ಯವಾಗಿ ಹೀರೋ/ಹೀರೋಯಿನ್ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ.
ಕಲ್ಟ್ ಸಿನಿಮಾ
ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ ರಾಮ್ ಕೂಡ ನಾಯಕಿ. ಮಲೈಕಾ ವಾಸುಪಾಲ್ ಕೂಡ ಚಿತ್ರದಲ್ಲಿದ್ದಾರೆ. ಈ ಸಿನಿಮಾ ಜನವರಿ 23ರಂದು ರಿಲೀಸ್ ಆಗುತ್ತಿದೆ. ಜನವರಿ 16ರಂದು ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ.
ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಎರಡು ಶೇಡ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್ನಲ್ಲಿ ಅವರ ಒಂದು ಶೇಡ್ ಮಾತ್ರ ತೋರಿಸಲಾಗಿದೆ. ಮತ್ತೊಂದು ಶೇಡ್ನ ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು ಎಂಬುದು ರಚಿತಾ ರಾಮ್ ಮಾತು. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ‘ಉಪಾಧ್ಯಕ್ಷ’ ಚಿತ್ರ ನಿರ್ದೇಶನ ಮಾಡಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಇದನ್ನೂ ಓದಿ: ನಿಲ್ಲಲೇ ಇಲ್ಲ ‘ಬಾಸ್ ಬಾಸ್ ಡಿ ಬಾಸ್’ ಜೈಕಾರ: ಬೇಸರದಿಂದ ಮಾತು ನಿಲ್ಲಿಸಿದ ರಚಿತಾ ರಾಮ್
ಲ್ಯಾಂಡ್ಲಾರ್ಡ್
ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿರೋ ‘ಲ್ಯಾಂಡ್ಲಾರ್ಡ್’ ಸಿನಿಮಾ ಜನವರಿ 23ರಂದೇ ರಿಲೀಸ್ ಆಗುತ್ತಿದೆ. ಇದು ಅಳಿದು ಉಳಿದವರ ಕಥೆ. ಜಡೇಶ್ ಕುಮಾರ್ ಹಂಪಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹೇಮಂತ್ ಗೌಡ ಕೆಎಸ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ಟೀಸರ್ಗಳು ಗಮನ ಸೆಳೆದಿವೆ. ಸತ್ಯ ಪ್ರಕಾಶ್ ಅವರು ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಕೂಡ ನಿರೀಕ್ಷೆ ಹುಟ್ಟುಹಾಕಿದೆ. ಒಂದೇ ದಿನ ಅವರ ನಟನೆಯ ಎರಡು ಸಿನಿಮಾಗಳು ತೆರೆಗೆ ಬರುತ್ತಿವೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




