Pooja Hegde: ಎರಡೇ ತಿಂಗಳಲ್ಲಿ ಹ್ಯಾಟ್ರಿಕ್ ಸೋಲು ಕಂಡ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಏಕಕಾಲಕ್ಕೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆ ಸಿನಿಮಾ ರಿಲೀಸ್ ವಿಳಂಬವಾದವು. ಕಳೆದ ಎರಡು ತಿಂಗಳ ಅವಧಿಯಲ್ಲಿ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆಗಿವೆ.

Pooja Hegde: ಎರಡೇ ತಿಂಗಳಲ್ಲಿ ಹ್ಯಾಟ್ರಿಕ್ ಸೋಲು ಕಂಡ ಪೂಜಾ ಹೆಗ್ಡೆ
ಪೂಜಾ ಹೆಗ್ಡೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 30, 2022 | 3:55 PM

ನಟಿ ಪೂಜಾ ಹೆಗ್ಡೆ (Pooa Hegde) ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿರುವ ನಟಿ. ಅವರು ಚಿತ್ರರಂಗಕ್ಕೆ ಕಾಲಿಟ್ಟು ಒಂದು ದಶಕ ಕಳೆದಿದೆ. ಇಲ್ಲಿಯವರೆಗೆ ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಗ್ಲಾಮರ್ ನೋಡಿ ಅದೆಷ್ಟೋ ಮಂದಿ ಫಿದಾ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲಿ ಅವರನ್ನು ಗ್ಲಾಮರ್​ಗೆ ಮಾತ್ರ ಸೀಮಿತ ಮಾಡಿದ ಉದಾಹರಣೆ ಇದೆ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಆದರೆ, ಈಗ ಅವರು ವಿಚಿತ್ರ ದಾಖಲೆ ಒಂದನ್ನು ಬರೆದಿದ್ದಾರೆ. ಹ್ಯಾಟ್ರಿಕ್ ಸೋಲು ಕಾಣುವ ಮೂಲಕ ಪೂಜಾ ಹೆಗ್ಡೆ ಹಿನ್ನಡೆ ಅನುಭವಿಸಿದ್ದಾರೆ.

ಕೊವಿಡ್ ಕಾರಣದಿಂದ 2020ರಿಂದ ಈಚೆಗೆ ದೊಡ್ಡ ಬಜೆಟ್ ಚಿತ್ರಗಳು ತೆರೆಕಾಣುತ್ತಿಲ್ಲ. ಸಿನಿಮಾ ರಿಲೀಸ್ ಆದರೂ ಸಂಪೂರ್ಣ ಲೆಕ್ಕಾಚಾರ ಹಾಕಿಕೊಂಡೇ ಬಿಡುಗಡೆ ಮಾಡಲಾಗುತ್ತದೆ. ಈ ಕಾರಣಕ್ಕೆ ಒಂದಷ್ಟು ಸಿನಿಮಾಗಳ ರಿಲೀಸ್ ದಿನಾಂಕ ಮುಂದೂಡಲ್ಪಟ್ಟವು. ಪೂಜಾ ಹೆಗ್ಡೆ ಏಕಕಾಲಕ್ಕೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆ ಸಿನಿಮಾ ರಿಲೀಸ್ ವಿಳಂಬವಾದವು. ಕಳೆದ ಎರಡು ತಿಂಗಳ ಅವಧಿಯಲ್ಲಿ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆಗಿವೆ. ಆದರೆ, ಯಾವ ಚಿತ್ರವೂ ಗೆಲುವಿನ ಮುಖ ಕಂಡಿಲ್ಲ.

ಮಾರ್ಚ್​ 11ರಂದು ‘ರಾಧೆ ಶ್ಯಾಮ್’ ಸಿನಿಮಾ ತೆರೆಗೆ ಬಂದಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಅಷ್ಟಾಗಿ ನಿರೀಕ್ಷೆ ಇರಲಿಲ್ಲ. ಟ್ರೇಲರ್ ನೋಡಿದ ಫ್ಯಾನ್ಸ್ ನಿರಾಸೆಗೊಂಡಿದ್ದರು. ಸಿನಿಮಾ ಕೂಡ ಮಕಾಡೆ ಮಲಗಿತು. ಪೂಜಾ ಹೆಗ್ಡೆ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿತ್ತು. ಆದರೆ, ಸಿನಿಮಾ ಸೋತಿತ್ತು. ಪೂಜಾ ಹೆಗ್ಡೆ ಅವರ ಈ ವರ್ಷದ ಮೊದಲ ಸೋಲು ಇದು. ಇದಾದ ನಂತರ ತೆರೆಗೆ ಬಂದಿದ್ದು ದಳಪತಿ ವಿಜಯ್ ನಟನೆಯ ‘ಬೀಸ್ಟ್’. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಸೃಷ್ಟಿ ಮಾಡಿತ್ತು. ಆದರೆ, ಸಿನಿಮಾ ನೋಡಿದ ಫ್ಯಾನ್ಸ್ ನಿರಾಸೆಗೊಂಡರು. ಅದರಲ್ಲೂ, ಪೂಜಾ ಹೆಗ್ಡೆ ಪಾತ್ರ ಕೆಲವೇ ದೃಶ್ಯಗಳಿಗೆ ಸೀಮಿತವಾಗಿತ್ತು.

ಇನ್ನು, ಏಪ್ರಿಲ್ 29ರಂದು ತೆರೆಗೆ ಬಂದ ‘ಆಚಾರ್ಯ’ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಲ್ಕು ದೃಶ್ಯಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಈ ಚಿತ್ರ ಕೂಡ ಸೋಲು ಕಂಡಿದೆ. ಹಲವು ಹಿಟ್ ಚಿತ್ರಗಳನ್ನು ನೀಡಿದ ಕೊರಟಾಲ ಶಿವ ಅವರು ಉತ್ತಮ ಸಿನಿಮಾ ಕಟ್ಟಿಕೊಡಲು ವಿಫಲರಾಗಿದ್ದಾರೆ. ರಾಮ್ ಚರಣ್ ಹಾಗೂ ಚಿರಂಜೀವಿ ಕಾಂಬಿನೇಷನ್ ಕೆಲಸ ಮಾಡಿಲ್ಲ. ಈ ಚಿತ್ರದ ಮೂಲಕ ಪೂಜಾ ಹೆಗ್ಡೆ ಅವರು ಮತ್ತೊಂದು ಸೋಲು ಕಾಣುವಂತಾಯಿತು. ಸದ್ಯ, ಎರಡು ಚಿತ್ರಗಳು ಅವರ ಕೈಯಲ್ಲಿವೆ. ಈ ಚಿತ್ರಗಳಿಂದಾದರೂ ಗೆಲುವು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಇದನ್ನೂ ಓದಿ: ‘ರಾಧೆ ಶ್ಯಾಮ್’​ ಸೋತರೂ ಕಮ್ಮಿ ಆಗಿಲ್ಲ ಪೂಜಾ ಹೆಗ್ಡೆ ಜೋಶ್​

ಮತ್ತೆ ಟ್ರೋಲ್ ಆದ ಪೂಜಾ ಹೆಗ್ಡೆ; ವಿಜಯ್ ಚಿತ್ರದಲ್ಲಿ ಈ ನಟಿಯ ಪಾತ್ರಕ್ಕಿಲ್ಲ ತೂಕ? 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ