ಇಡೀ ವಿಶ್ವಾದ್ಯಂತ ಕ್ರಿಸ್ಮಸ್ ಆಚರಣೆ ಜೋರಾಗಿ ನಡೆದಿದೆ. ಕೊವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿರುವುದರಿಂದ ಕೆಲ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ಈ ಹಬ್ಬ ಆಚರಣೆ ಮಾಡಲಾಗಿದೆ. ಕೇವಲ ಕ್ರೈಸ್ತ ಧರ್ಮದವರು ಮಾತ್ರವಲ್ಲದೆ, ಹಿಂದು ಹಾಗೂ ಮುಸ್ಲಿಂ ಸಮುದಾಯದವರೂ ಈ ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಕ್ರಿಸ್ಮಸ್ ಟ್ರೀ ಇಟ್ಟು, ಕೇಕ್ ಕತ್ತರಿಸಿ ಹಬ್ಬ ಮಾಡಲಾಗಿದೆ. ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್ಮಸ್ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ. ಇದಕ್ಕೆ ರಾಧಿಕಾ ಪಂಡಿತ್ ಹಾಗೂ ಯಶ್ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜತೆ ಸೇರಿ ಡಿಸೆಂಬರ್ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಯಶ್ ಹಾಗೂ ರಾಧಿಕಾ ಪಂಡಿತ್ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್ಮಸ್ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ. ಈ ಫೋಟೋಗೆ ಕ್ಯಾಪ್ಶನ್ ನೀಡಿರುವ ರಾಧಿಕಾ ಪಂಡಿತ್, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್ಮಸ್’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.
View this post on Instagram
ಇದಕ್ಕೂ ಮೊದಲು ಸ್ಟೇಟಸ್ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್ ಸಾಂಟಾ ಕ್ಲಾಸ್ ಟೋಪಿ ಧರಿಸಿದ್ದಾರೆ. ಈ ಫೋಟೋಗಳ ಸ್ಕ್ರೀನ್ಶಾಟ್ಗಳನ್ನು ತೆಗೆದುಕೊಂಡಿರುವ ಅಭಿಮಾನಿಗಳು ಅದನ್ನು ಎಲ್ಲ ಕಡೆಗಳಲ್ಲಿ ಹಂಚುವ ಕೆಲಸ ಮಾಡುತ್ತಿದ್ದಾರೆ.
ರಾಧಿಕಾ ಪಂಡಿತ್ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್ ‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.
ಇದನ್ನೂ ಓದಿ: ‘ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜತೆ ಸಮಂತಾ ಮತ್ತೊಂದು ವೆಬ್ ಸೀರಿಸ್; ಆ್ಯಕ್ಷನ್ನಲ್ಲಿ ಮಿಂಚಲಿದ್ದಾರೆ ಸ್ಯಾಮ್
ಬಿಗ್ ಬಾಸ್ ಮನೆಯ ಬೆಡ್ನಲ್ಲಿ ಮಹಿಳಾ ಸ್ಪರ್ಧಿಗೆ ಕಿಸ್ ಮಾಡಲು ಬಂದ ನಟ; ಈ ವೇಳೆ ಬಂತು ಖಡಕ್ ಎಚ್ಚರಿಕೆ