AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ
ಯಶ್​-ರಾಧಿಕಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 12, 2021 | 6:54 PM

Share

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಇಂದಿಗೆ (ಆಗಸ್ಟ್​ 12) ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ.

‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು. ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. ಆದರೆ, ಎಲ್ಲಿಯೂ ಆ ಬಗ್ಗೆ ಹೇಳಿಕೊಂಡಿರಲಿಲ್ಲ. ನಂತರ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದರು. ಇವರ ನಿಶ್ಚಿತಾರ್ಥ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದರು.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: Radhika Pandit: ತುಂಟ ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್; ಅಭಿಮಾನಿಗಳಿಗೆ ಹೆಚ್ಚಾಯ್ತು ಕುತೂಹಲ

Published On - 5:56 pm, Thu, 12 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ