Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ರಾಧಿಕಾ ಪಂಡಿತ್ ವ್ಯಾಲೆಂಟೈನ್ಸ್ ಡೇ? ಫೋಟೋಗಳಲ್ಲಿ ವಿವರಿಸಿದ ನಟಿ

ವಿಶೇಷ ದಿನಗಳಲ್ಲಿ ಪತಿ ಯಶ್ ಜೊತೆ ಇರೋಕೆ ಬಯಸುತ್ತಾರೆ ರಾಧಿಕಾ ಪಂಡಿತ್. ಅದೇ ರೀತಿ ಅವರು ವ್ಯಾಲೆಂಟೈನ್ಸ್​ ಡೇ ದಿನ ಪತಿ ಹಾಗೂ ಮಕ್ಕಳ ಜೊತೆ ಮಧ್ಯಾಹ್ನದ ಊಟಕ್ಕೆ ತೆರಳಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ. ರಾತ್ರಿಯೂ ಸೆಲೆಬ್ರೇಷನ್ ನಡೆದಿದೆ.

ಹೇಗಿತ್ತು ರಾಧಿಕಾ ಪಂಡಿತ್ ವ್ಯಾಲೆಂಟೈನ್ಸ್ ಡೇ? ಫೋಟೋಗಳಲ್ಲಿ ವಿವರಿಸಿದ ನಟಿ
ಯಶ್ ಕುಟುಂಬ
Follow us
ರಾಜೇಶ್ ದುಗ್ಗುಮನೆ
|

Updated on: Feb 15, 2024 | 10:18 AM

ಫೆಬ್ರವರಿ 14ರಂದು ಅನೇಕ ಜೋಡಿಗಳು ಖುಷಿ ಖುಷಿಯಿಂದ ಪ್ರೇಮಿಗಳ ದಿನವನ್ನು ಆಚರಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಪತಿ ಯಶ್ (Yash) ಹಾಗೂ ಮಕ್ಕಳ ಜೊತೆ ವ್ಯಾಲೆಂಟೈನ್ಸ್ ಡೇ ಆಚರಿಸಿಕೊಂಡಿದ್ದಾರೆ. ಪತಿ ಹಾಗೂ ಮಕ್ಕಳನ್ನು ಅವರು ವ್ಯಾಲೆಂಟೈನ್​​ಗಳು ಎಂದು ಕರೆದಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋಗೆ ಪ್ರೀತಿಯಿಂದ ಲೈಕ್ಸ್ ಒತ್ತಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಲೈಕ್ಸ್ ಈ ಫೋಟೋಗೆ ಸಿಕ್ಕಿದೆ.

ರಾಧಿಕಾ ಪಂಡಿತ್ ಹಾಗೂ ಯಶ್ ಮದುವೆ ಆಗಿದ್ದು 2016ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ. ವಿವಾದಗಳಿಂದ ಇವರು ಸದಾ ದೂರವೇ ಇದ್ದಾರೆ. ಈ ಕಾರಣಕ್ಕೆ ಇವರು ಅನೇಕರಿಗೆ ಇಷ್ಟ ಆಗುತ್ತಾರೆ. ವಿಶೇಷ ದಿನಗಳಲ್ಲಿ ಪತಿಯ ಜೊತೆ ಇರೋಕೆ ಬಯಸುತ್ತಾರೆ ರಾಧಿಕಾ. ಅದೇ ರೀತಿ ಅವರು ವ್ಯಾಲೆಂಟೈನ್ಸ್​ ಡೇ ದಿನ ಮಧ್ಯಾಹ್ನದ ಊಟಕ್ಕೆ ತೆರಳಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ.

‘ವ್ಯಾಲೆಂಟೈನ್ಸ್​ ಲಂಚ್’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಎಲ್ಲರ ಮುಖದಲ್ಲೂ ಸಂತಸ ಇದೆ. ಯಶ್ ಅವರ ಲುಕ್ ಗಮನ ಸೆಳೆದಿದೆ. ಐಸ್​ಕ್ರೀಮ್ ತಿಂದು ಇವರು ಸಂಭ್ರಮಿಸಿದ್ದಾರೆ. ಹಿಂಭಾಗದಲ್ಲಿ ಹಾರ್ಟ್​ ಮಾರ್ಕ್​ನ ಬಲೂನ್​ಗಳನ್ನು ಕಟ್ಟಲಾಗಿದೆ. ಈ ಕುಟುಂಬ ಹೀಗೆಯೇ ಖುಷಿಯಿಂದ ಇರಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ವ್ಯಾಲೆಂಟೈನ್ಸ್ ಡೇ ದಿನ ಯಶ್ ಅವರು ಗೆಳೆಯ ಹಾಗೂ ಜಿಮ್ ತರಬೇತುದಾರ ಪಾನಿಪುರಿ ಕಿಟ್ಟಿ ಅವರ ಜಿಮ್ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ವ್ಯಾಲೆಂಟೈನ್ಸ್ ಡೇ ವಿಶೇಷತೆ ಏನು ಎಂದು ಕೇಳಲಾಗಿತ್ತು. ‘ನೀವು (ಮಾಧ್ಯಮದವರು) ನಮ್ಮನ್ನು ಬೇಗ ಬಿಟ್ಟರೆ ನಾನು ಮನೆಗೆ ಹೋಗಿ ಪ್ರೇಮಿಗಳ ದಿನ ಆಚರಿಸಬಹುದು’ ಎಂದು ಹೇಳಿದ್ದರು ಯಶ್. ರಾತ್ರಿ ವೇಳೆಗೆ ರಾಧಿಕಾ ಅವರು ಯಶ್ ಜೊತೆ ಇರೋ ಫೋಟೋ ಹಂಚಿಕೊಂಡು ಪ್ರೀತಿಯಿಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ಯಶ್? ನೇರವಾಗಿ ಉತ್ತರಿಸಿದ ರಾಕಿಂಗ್​ಸ್ಟಾರ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಶೀಘ್ರವೇ ಚಿತ್ರದ ಶೂಟಿಂಗ್ ಆರಂಭ ಆಗಲಿದೆ. ಈ ಬಗ್ಗೆ ಅವರ ಕಡೆಯಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ. ಗೀತು ಮೋಹನ್​ದಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?