ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  

Radhika Pandit: ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ. ನಟನೆಗೆ ಯಾವಾಗ ಮರಳುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳಲಾಗಿದೆ.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  
ರಾಧಿಕಾ
Follow us
ರಾಜೇಶ್ ದುಗ್ಗುಮನೆ
|

Updated on:May 29, 2024 | 7:21 AM

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಮಗಳು ಆಯ್ರಾ ಹಾಗೂ ಮಗ ಯಥರ್ವ್ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಯಶ್ ವೃತ್ತಿ ಬದುಕಿಗೆ ಅವರು ಬೆಂಬಲವಾಗಿದ್ದಾರೆ. ರಾಧಿಕಾ ಚಿತ್ರರಂಗದ ಜೊತೆಗಿನ ನಂಟನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಆದಾಗ್ಯೂ ನಟನೆಯಿಂದ ದೂರವೇ ಇದ್ದಾರೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ. ಅವರು ಯಾವಾಗ ನಟನೆಗೆ ಮರಳುತ್ತಾರೆ ಎನ್ನುವ ಪ್ರಶ್ನೆಯನ್ನು ಆಗಾಗ ಕೇಳಲಾಗುತ್ತದೆ. ಇದಕ್ಕೆ ರಾಧಿಕಾ ಕೊನೆಗೂ ಉತ್ತರ ನೀಡಿದ್ದಾರೆ. ಈ ಉತ್ತರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಇದೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾರೆ. ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ.

‘ನಟನೆಗೆ ಕಂಬ್ಯಾಕ್ ಯಾವಾಗ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ಅವರು ‘ಸರಿಯಾದ ಸಮಯ ಬಂದಾಗ’ ಎಂದು ಉತ್ತರಿಸಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಬೇಸರ ಆಗಿದೆ. ಅವರ ಉತ್ತರದಲ್ಲಿ ಸ್ಪಷ್ಟತೆ ಇಲ್ಲ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು. ಆ ಬಳಿಕ ಹಲವು ಸೂಪರ್​ಸ್ಟಾರ್​ಗಳ ಜೊತೆ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಯಶ್ ಹಾಗು ರಾಧಿಕಾ ಕೆಮಿಸ್ಟ್ರಿ ತೆರೆಮೇಲೆ ಪ್ರೇಕ್ಷಕರಿಗೆ ಇಷ್ಟ ಆಗಿದೆ. 2019ರಲ್ಲಿ ರಿಲೀಸ್ ಆದ ‘ಆದಿಲಕ್ಷ್ಮಿ’ ಪುರಾಣ ಚಿತ್ರವೇ ಕೊನೆ, ಇದಾದ ಬಳಿಕ ಅವರು ಸಿನಿಮಾ ಘೋಷಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 29 May 24

ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್
ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್
ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ