AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit Birthday: ರಾಧಿಕಾ ಪಂಡಿತ್ ಬರ್ತ್​ಡೇ: ಈ ವರ್ಷವಾದರೂ ಈಡೇರುತ್ತಾ ಅಭಿಮಾನಿಗಳ ಕೋರಿಕೆ?

Happy Birthday Radhika Pandit: ರಾಧಿಕಾ ಪಂಡಿತ್ ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ರಾಧಿಕಾ ಪಂಡಿತ್ ಬಳಿ ಕೋರಿಕೆ ಇಡುತ್ತಿದ್ದಾರೆ.

Radhika Pandit Birthday: ರಾಧಿಕಾ ಪಂಡಿತ್ ಬರ್ತ್​ಡೇ: ಈ ವರ್ಷವಾದರೂ ಈಡೇರುತ್ತಾ ಅಭಿಮಾನಿಗಳ ಕೋರಿಕೆ?
ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on: Mar 07, 2023 | 10:37 AM

Share

ನಟಿ ರಾಧಿಕಾ ಪಂಡಿತ್ (Radhika Pandit) ಅವರಿಗೆ ಇಂದು (ಮಾರ್ಚ್ 7) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೆಲೆಬ್ರಿಟಿಗಳು, ಫ್ಯಾನ್ಸ್ ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ರಾಧಿಕಾ ಪಂಡಿತ್ ಅವರು ಈ ವರ್ಷ ಫ್ಯಾನ್ಸ್ ಜೊತೆ ಅವರು ಹುಟ್ಟುಹಬ್ಬ (Radhika Pandit Birthday) ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಇದಲ್ಲದೆ ಅಭಿಮಾನಿಗಳ ಹಲವು ವರ್ಷದ ಬೇಡಿಕೆ ಇನ್ನೂ ಈಡೇರಿಲ್ಲ. ಈ ಬಗ್ಗೆ ಫ್ಯಾನ್ಸ್ ವಲಯದಿಂದ ಅವರಿಗೆ ಪ್ರಶ್ನೆ ಎದುರಾಗುತ್ತಿದೆ.

2008ರಲ್ಲಿ ರಿಲೀಸ್ ಆದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ರಾಧಿಕಾ ಪಂಡಿತ್ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಅವರಿಗೆ ಬೇಡಿಕೆ ಹೆಚ್ಚಿತು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು. ಯಶ್ ಹಾಗೂ ರಾಧಿಕಾ ಪಂಡಿತ್ ಅವರದ್ದು ಹಿಟ್ ಜೋಡಿ ಎನಿಸಿಕೊಂಡಿದೆ. 2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ಬಳಿಕ ಯಶ್​ ಜೊತೆ ರಾಧಿಕಾ ವಿವಾಹ ನಡೆಯಿತು. ಆ ಬಳಿಕ ಅವರು ಕುಟುಂಬ ಕೆಲಸದಲ್ಲಿ ಬ್ಯುಸಿ ಆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

ರಾಧಿಕಾ ಪಂಡಿತ್ ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ರಾಧಿಕಾ ಪಂಡಿತ್ ಬಳಿ ಕೋರಿಕೆ ಇಡುತ್ತಿದ್ದಾರೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ಇದನ್ನೂ ಓದಿ
Image
Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​
Image
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ
Image
‘ಅಪ್ಪನ ರಾಜಕುಮಾರಿ’; ತಂದೆಯೊಂದಿಗಿನ ಫೋಟೋ ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದ ರಾಧಿಕಾ ಪಂಡಿತ್
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಇದನ್ನೂ ಓದಿ:  ರಾಧಿಕಾ ಪಂಡಿತ್​ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರ ಆಗಬಹುದು; ಮೊದಲೇ ತಿಳಿಸಿದ ನಟಿ

‘ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳೊತ್ತಿಲ್ಲ’

‘ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್​ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್​ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು’ ಎಂದು ರಾಧಿಕಾ ಪಂಡಿತ್​ ಪೋಸ್ಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More