‘ಪುನೀತ್​ ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ’; ಟೀಕಾಕಾರರಿಗೆ ರಾಧಿಕಾ ಪಂಡಿತ್​ ತಿರುಗೇಟು

‘ಪುನೀತ್​ ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ’; ಟೀಕಾಕಾರರಿಗೆ ರಾಧಿಕಾ ಪಂಡಿತ್​ ತಿರುಗೇಟು
ರಾಧಿಕಾ-ಪುನೀತ್​

Radhika Pandit: ನೀವಿಲ್ಲ ಎಂಬುದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ನಿಮ್ಮ ಜಾಗವನ್ನು ಕನ್ನಡ ಚಿತ್ರರಂಗದಲ್ಲಿ ತುಂಬಲು ಬೇರೆ ಯಾರಿಂದಲು ಸಾಧ್ಯವಿಲ್ಲ ಎಂದಿದ್ದರು ರಾಧಿಕಾ ಪಂಡಿತ್​.

TV9kannada Web Team

| Edited By: Rajesh Duggumane

Nov 10, 2021 | 2:13 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನ ಹೊಂದಿದ ನಂತರ ಸ್ಯಾಂಡಲ್​ವುಡ್​ನ ಬಹುತೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಅಂತಿಮ ದರ್ಶನ ಪಡೆದು ಬಂದಿದ್ದರು. ಆದರೆ, ರಾಧಿಕಾ ಪಂಡಿತ್ (Radhika Pandit)​ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ ಎಂದು ಅಭಿಮಾನಿಗಳು ಹೇಳಿದ್ದರು. ಈ ಬಗ್ಗೆ ಅವರು ಯಾವುದೇ ಪೋಸ್ಟ್​ ಕೂಡ ಹಾಕಿರಲಿಲ್ಲ. ಪುನೀತ್​ ನಿಧನ ಹೊಂದಿ 13 ದಿನಗಳಾದ ನಂತರ ಅವರ​ ಜತೆ ಇರುವ ಫೋಟೋವನ್ನು ರಾಧಿಕಾ ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್​ಗೆ ಸಾಕಷ್ಟು ಜನರು ‘ನೀವು ಅಪ್ಪು ಸರ್​​ಅನ್ನು ಕೊನೆಯ ಬಾರಿಗೆ ನೋಡೋಕೆ ಬರಲಿಲ್ಲ. ತುಂಬಾ ಬೇಸರ ಆಯಿತು ’ ಎಂಬಿತ್ಯಾದಿ ಕಮೆಂಟ್​ ಹಾಕಿದ್ದರು. ಇದು ರಾಧಿಕಾಗೆ ಬೇಸರ ಮೂಡಿಸಿದೆ. ಇದಕ್ಕೆ ಅವರು ಉತ್ತರವನ್ನು ನೀಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಹಾಗೂ ರಾಧಿಕಾ ಪಂಡಿತ್​ ‘ದೊಡ್ಮನೆ ಹುಡುಗ’, ‘ಹುಡುಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಹೀಗಾಗಿ, ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್​ ನಿಧನ ಹೊಂದಿರುವ ವಿಚಾರ ರಾಧಿಕಾಗೆ ತೀವ್ರ ನೋವನ್ನು ತಂದಿದೆ. ಆದರೆ, ಈ ಬಗ್ಗೆ ಅವರು ಯಾವುದೇ ಪೋಸ್ಟ್ ಹಾಕಿರಲಿಲ್ಲ. ಈಗ ರಾಧಿಕಾ ಅವರು ಪುನೀತ್ ಬಗ್ಗೆ​ ಬರೆದುಕೊಂಡಿದ್ದಾರೆ. ‘ನೀವಿಲ್ಲ ಎಂಬುದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ನಿಮ್ಮ ಜಾಗವನ್ನು ಕನ್ನಡ ಚಿತ್ರರಂಗದಲ್ಲಿ ತುಂಬಲು ಬೇರೆ ಯಾರಿಂದಲು ಸಾಧ್ಯವಿಲ್ಲ. ನೀವಿಲ್ಲದೆ ಚಿತ್ರರಂಗ ಎಂದಿನಂತೆ ಇರುವುದಿಲ್ಲ. ನಿಮ್ಮ ಜತೆ ಕೆಲಸ ಮಾಡಲು ಸಿಕ್ಕಿದ್ದು ನಮ್ಮ ಅದೃಷ್ಟ. ನಮಗೆಲ್ಲ ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ’ ಎಂದು ಬರೆದುಕೊಂಡಿದ್ದರು.

ಇದಕ್ಕೆ, ಸಾಕಷ್ಟು ಜನರು ಬೇಸರ ಹೊರ ಹಾಕಿದ್ದರು. ಅವರ ಬಗ್ಗೆ ಪೋಸ್ಟ್​ ಮಾಡೋಕೆ ಇಷ್ಟು ದಿನ ಬೇಕಾಯಿತೇ ಎಂದು ಪ್ರಶ್ನೆ ಕೇಳಿದ್ದರು. ಅಂತಿಮ ದರ್ಶನ ಏಕೆ ಪಡೆದಿಲ್ಲ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ರಾಧಿಕಾ ಉತ್ತರಿಸಿದ್ದಾರೆ. ‘ಜೀವನದಲ್ಲಿ ಒಬ್ಬರ ಮೇಲೆ ಕೋಪ ಇದ್ದರೂ ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Radhika Pandit: ಪುನೀತ್ ನಿಧನದ​ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ರಾಧಿಕಾ ಪಂಡಿತ್​

Follow us on

Related Stories

Most Read Stories

Click on your DTH Provider to Add TV9 Kannada