Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್

‘ಕೆಜಿಎಫ್ 2’ ಸಿನಿಮಾ ವಿಶ್ವಾದ್ಯಂತ ಕೋಟಿಕೋಟಿ ಬಾಚಿಕೊಳ್ಳುತ್ತಿದೆ. ಈ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಕುಟುಂಬದ ಜತೆ ವೆಕೇಶನ್​ಗೆ ತೆರಳಿದೆ. ಈಗ ರಾಧಿಕಾ ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
ರಾಧಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 26, 2022 | 5:47 PM

ನಟಿ ರಾಧಿಕಾ ಪಂಡಿತ್ ಅವರು (Radhika Pandit) ಹೆಚ್ಚು ಸಮಯವನ್ನು ಕುಟುಂಬದ ಜತೆಗೆ ಕಳೆಯುತ್ತಿದ್ದಾರೆ. ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಯಶ್ ಅವರು ಇಷ್ಟು ದಿನ ‘ಕೆಜಿಎಫ್​: ಚಾಪ್ಟರ್ 2’ (KGF Chapter 2)ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈಗ ಸಿನಿಮಾ ತೆರೆಕಂಡು ಹಿಟ್ ಆಗಿದೆ. ಚಿತ್ರದ ಗೆಲುವನ್ನು ಯಶ್ ಸಂಭ್ರಮಿಸುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ವೆಕೇಶನ್​ ಮೂಡ್​ನಲ್ಲಿರುವ ಯಶ್ ಅವರು ಪತ್ನಿ ರಾಧಿಕಾ ಪಂಡಿತ್ (Radhika Pandit) ಕೆನ್ನೆಗೆ ಮುತ್ತಿಟ್ಟಿದ್ದಾರೆ. ಅಭಿಮಾನಿಗಳು ಖುಷಿಯಿಂದ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ವಿಶ್ವಾದ್ಯಂತ ಕೋಟಿಕೋಟಿ ಬಾಚಿಕೊಳ್ಳುತ್ತಿದೆ. ಸಿನಿಮಾದ ಕಲೆಕ್ಷನ್ 1000 ಕೋಟಿ ಸಮೀಪಿಸುತ್ತಿದೆ. ಬಾಲಿವುಡ್​ ಒಂದರಲ್ಲೇ ಈ ಸಿನಿಮಾ 329 ಕೋಟಿ ರೂಪಾಯಿ ಗಳಿಸಿರುವುದು ಸಿನಿಮಾದ ಹೆಚ್ಚುಗಾರಿಕೆ. ಈ ಚಿತ್ರದ ಗೆಲುವನ್ನು ಸಂಭ್ರಮಿಸಲು ಇಡೀ ತಂಡ ಕುಟುಂಬದ ಜತೆ ವೆಕೇಶನ್​ಗೆ ತೆರಳಿದೆ. ಇತ್ತೀಚೆಗೆ ಫ್ಯಾಮಿಲಿ ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಪ್ರಶಾಂತ್ ನೀಲ್, ರಾಧಿಕಾ ಪಂಡಿತ್, ಭುವನ್ ಗೌಡ ಹಂಚಿಕೊಂಡಿದ್ದರು. ಈಗ ರಾಧಿಕಾ ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಈ ಫೋಟೋದಲ್ಲಿ ರಾಧಿಕಾ ಹಾಗೂ ಯಶ್ ಮ್ಯಾಚಿಂಗ್ ಡ್ರೆಸ್ ಹಾಕಿದ್ದಾರೆ. ಇಬ್ಬರೂ ಗಾಗಲ್ ಹಾಕಿದ್ದಾರೆ. ಮೊದಲ ಫೋಟೋದಲ್ಲಿ ಒಬ್ಬರನ್ನೊಬ್ಬರು ದಿಟ್ಟಿಸಿ ನೋಡುತ್ತಿದ್ದಾರೆ. ಎರಡನೇ ಫೋಟೋದಲ್ಲಿ ರಾಧಿಕಾ ಪಂಡಿತ್ ಹಾಗೂ ಯಶ್ ಹತ್ತಿರ ಆಗಿದ್ದಾರೆ. ಮೂರನೇ ಫೋಟೋದಲ್ಲಿ ರಾಧಿಕಾಗೆ ಯಶ್ ಕಿಸ್ ಮಾಡಿದ್ದಾರೆ. ಈ ಫೋಟೋಗೆ ‘ಕಲರ್ ಗ್ಲಾಸ್​ನಿಂದ ನೋಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ತೆಗೆದಿದ್ದು ಭುವನ್ ಎಂದು ಬರೆದುಕೊಂಡಿದ್ದಾರೆ ರಾಧಿಕಾ.

ಯಶಸ್ಸಿನ ಹಾದಿಯಲ್ಲಿ ಯಶ್ ಅವರ ಬೆಂಬಲಕ್ಕೆ ಸದಾ ನಿಂತವರು ರಾಧಿಕಾ. ಶೂಟಿಂಗ್​ಗಾಗಿ ಯಶ್​ ಬೇರೆಬೇರೆ ಕಡೆ ತೆರಳುವ ಸಂದರ್ಭದಲ್ಲಿ ಮಕ್ಕಳ ಆರೈಕೆಯ ಜವಾಬ್ದಾರಿಯನ್ನು ರಾಧಿಕಾ ಅವರೇ ನೋಡಿಕೊಳ್ಳುತ್ತಿದ್ದರು. ನಟನೆಯಿಂದ ಅಂತರ ಕಾಯ್ದುಕೊಂಡಿರುವ ಅವರು, ಫ್ಯಾಮಿಲಿಗೆ ಹೆಚ್ಚು ಸಮುಯ ಮೀಸಲಿಡುತ್ತಿದ್ದಾರೆ. ರಾಧಿಕಾ ನಟನೆಗೆ ಕಂಬ್ಯಾಕ್ ಮಾಡಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆ. ಆದರೆ, ಈ ಕೋರಿಕೆ ಇಲ್ಲಿವರೆಗೆ ಈಡೇರಲಿಲ್ಲ. ಸದ್ಯ, ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅದಕ್ಕೆ ಶೀಘ್ರದಲ್ಲೇ ಉತ್ತರ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: Radhika Pandit: ರಜೆಯ​ ಮೂಡ್​ನಲ್ಲಿ ಯಶ್, ರಾಧಿಕಾ ಪಂಡಿತ್; ಮರಳಿನಲ್ಲಿ ಮಕ್ಕಳ ಜತೆ ಆಟ ಆಡಿದ ದಂಪತಿ

ರಜನಿ ನಟನೆಯ ‘2.0’ ಚಿತ್ರವನ್ನು ಹಿಂದಿಕ್ಕಿದ ‘ಕೆಜಿಎಫ್: ಚಾಪ್ಟರ್ 2’; ಹೊಸ ದಾಖಲೆ ಬರೆದ ಯಶ್ ಸಿನಿಮಾ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ